admin

ಪುತ್ತೂರು: ರಕ್ಷಣೆಗೆ ಬಂದ ಅಗ್ನಿಶಾಮಕದಳದವರ ಮೇಲೆ ಅಟ್ಯಾಕ್ ಮಾಡಿದ ಬೆಕ್ಕು

ಪುತ್ತೂರು: ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಗಾಯಗಳಾಗಿದೆ. ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಬೆಕ್ಕೊಂದು ಬಿದ್ದಿತ್ತು, ಬೆಕ್ಕು ಮೇಲೆ ಬರಲಾರದೆ ಬಾವಿಯಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಹಿನ್ನಲೆ ಮನೆಯವರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದರು, ಇಂದು ಬೆಕ್ಕಿನ…

Read More

ಮಂಗಳೂರಿಗೆ ಹೋಗಿ ಬರುವುದಾಗಿ ಹೋದ ಯುವತಿ ನಾಪತ್ತೆ..!

ಕಾರ್ಕಳ : ಮಂಗಳೂರಿಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೋದ ಯುವತಿ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ಜ. 19 ರಂದು ಸಂಭವಿಸಿದೆ. ಸಂಗೀತಾ (22) ನಾಪತ್ತೆಯಾದವರು. ಮೂಲತ: ಉತ್ತರ ಕನ್ನಡ ಜಿಲ್ಲೆಯ ಮುಂಡುಗೋಡು ತಾಲೂಕು ಶೀಡ್ಲಗುಂಡಿ ಗ್ರಾಮದವರಾದ ಇವರು ಜ. 19ರಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಜೋಗುಳಬೆಟ್ಟು ಎಂಬಲ್ಲಿ ವಾಸವಿರುವ ಚಿಕ್ಕಪ್ಪನ ಮನೆಗೆ ಬಂದಿದ್ದು ಅಲ್ಲಿಂದ ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದಾರೆ. ಆದರೆ ಆ ಬಳಿಕ ಮನೆಗೆ ಬಾರದೆ ಸಂಬಂಧಿಕರ ಮನೆಗೂ…

Read More

ಮಹಿಳೆಯನ್ನು ಕೊಂದ ನರಭಕ್ಷಕ ಹುಲಿ ಸಾವು; ಹೊಟ್ಟೆಯೊಳಗೆ ಬಟ್ಟೆ- ಕಿವಿಯೋಲೆ ಪತ್ತೆ

ವಯನಾಡ್: ವಯನಾಡಿನಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಸೋಮವಾರ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ ಹಾಗೂ ಕಿವಿ ಓಲೆ ಪತ್ತೆಯಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯದಂಚಿನಲ್ಲಿನ ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಇತ್ತೀಚೆಗೆ ಹುಲಿ ದಾಳಿ ನಡೆಸಿತ್ತು. ಹುಲಿಯ ಮೃತದೇಹ ಪಿಲಕಾವುವಿನ ಮನೆಯೊಂದರ ಹಿಂಭಾಗದಲ್ಲಿ ಪತ್ತೆಯಾಗಿದೆ. ಮೃತಪಟ್ಟ ಹುಲಿಗೆ 4-5 ವರ್ಷ ವಯಸ್ಸು ಇರಬಹುದೆಂದು ಅಂದಾಜಿಸಲಾಗಿದೆ.

Read More

ಮಂಗಳೂರು: 3 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗಲೇ ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಮಂಗಳೂರು: ಸ್ಕೂಟರ್ ಅನ್ನು ಬಿಡುಗಡೆ ಮಾಡಲು 3ಸಾವಿರ ರೂ. ಸ್ವೀಕರಿಸುತ್ತಿದ್ದಾಗಲೇ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರವೀಣ್ ಲೋಕಾಯುಕ್ತ ಬಲೆಗೆ ಬಿದ್ದವರು. ವ್ಯಕ್ತಿಯೊಬ್ಬರು ಸ್ಕೂಟರ್ ಅನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿತ್ತು. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ…

Read More

ಮಂಗಳೂರು ಬ್ಯಾಂಕ್ ದರೋಡೆ ಸಂಚನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಪೊಲೀಸ್ ಕಮಿಷನರ್!

ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ತಕರಣದಲ್ಲಿ ಪೊಲೀಸರು ಒಟ್ಟು 18.314 ಕೆ‌‌ಜಿ‌ ಚಿನ್ನ ಹಾಗೂ ₹3.80 ಲಕ್ಷ ನಗದು ವಶಪಡಿಸಿ ಕೊಂಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 18.674 ಕೆ.ಜಿ. ಚಿನ್ನಾಭರಣ ಹಾಗೂ ₹ 11.67 ಲಕ್ಷ ನಗದು ದರೋಡೆಯಾಗಿತ್ತು. ಈ ಬಗ್ಗೆ ಸುದ್ದಿ ಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ , ‘ ಪ್ರಕರಣ ಸಂಬಂಧ…

Read More

ಮಂಗಳೂರು: ಬೆಂಕಿಯಲ್ಲಿ ಸುಟ್ಟು ಭಸ್ಮವಾದ ಗೋಡೌನ್‌

ಮಂಗಳೂರು: ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ನಲ್ಲಿ ಆದಿತ್ಯ ವಾರ ತಡ ರಾತ್ರಿ ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಮಾಹಿತಿ ಅರಿತ ಶಾಸಕ ವೇದವ್ಯಾಸ ಕಾಮತ್ ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಿಸಿದ್ದರು. ಪಾಂಡೇಶ್ವರ ಅಗ್ನಿ ಶಾಮಕ ದಳದ ಸುಮಾರು 6ರಷ್ಟು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.ಶಾಸಕ ವೇದವ್ಯಾಸ ಕಾಮತ್ ಜೊತೆಗೆ…

Read More

ಮೂಡಬಿದ್ರೆ: 22ನೇ ವರ್ಷದ ಮೂಡಬಿದ್ರೆ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮೂಡಬಿದ್ರೆ: 22ನೇ ವರ್ಷದ ಮೂಡಬಿದ್ರೆ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆ ಹಲಗೆ: 13 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 38 ಜೊತೆ ಹಗ್ಗ ಕಿರಿಯ: 35 ಜೊತೆ ನೇಗಿಲು ಕಿರಿಯ: 123 ಜೊತೆ ಒಟ್ಟು ಕೋಣಗಳ ಸಂಖ್ಯೆ: 244 ಜೊತೆ ಕನೆ ಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ಪ್ರಥಮ: ನಿಡ್ಡೋಡಿ ಕಾನ…

Read More

ಉಡುಪಿ: 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ಪ್ರಕರಣ – ಆರೋಪಿ ಅರೆಸ್ಟ್

ಉಡುಪಿ: ಮೂರು ದಿನಗಳ ಹಿಂದೆ ಉಡುಪಿಯಲ್ಲಿ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿಯು ಚಾಕೊಲೇಟ್ ಆಸೆ ತೋರಿಸಿ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಅಪರಿಚಿತನಾಗಿದ್ದರಿಂದ, ಆತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು….

Read More

ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವ

ಮಂಗಳೂರು: ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಆಶ್ರಯದಲ್ಲಿ ಮಕ್ಕಳ ಬಹುಭಾಷಾ ನಾಟಕೋತ್ಸವವು ನೆರವೇರಿತು. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಲಿಯೋ ಕ್ಲಬ್ ಮಂಗಳಾದೇವಿಯ ಸಹಯೋಗದೊಂದಿಗೆ ಕಲಾಭಿ ಸಂಸ್ಥೆಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇಂಡಿಯನ್ ಫೌಂಡೇಶನ್ ಫಾರ್ ಆರ್ಟ್ಸ್ ಬೆಂಬಲದೊಂದಿಗೆ ರೂಪಿತವಾದ 6 ನಾಟಕಗಳನ್ನು ಸ. ಹಿ. ಪ್ರಾ. ಶಾಲೆ ಉಳಾಯಿಬೆಟ್ಟು ಇಲ್ಲಿನ ಶಾಲಾ ರಂಗ ತಂಡವು ಪ್ರಸ್ತುತಪಡಿಸಿತು. ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರಿಕೇಶ್ ಶೆಟ್ಟಿ ಉದ್ಘಾಟಿಸಿದರು. ಕಣ್ಣಾ ಮುಚ್ಚೆ ಅದರಾಚೆ ಶಾಲಾ ಮಾಸ ಪತ್ರಿಕೆ…

Read More

ಹಸುವಿನ ತಲೆ ಕಡಿದ ಪ್ರಕರಣ- ಆರೋಪಿಯ ಕಾಲಿಗೆ ಗುಂಡು

ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವಿನ ಹಸುವಿನ ಕಾಲು, ತಲೆ ಕಡಿದು ಮಾಂಸ ಕದ್ದೋಯ್ದು ವಿಕೃತಿ ಮೇರದಿದ್ದ ಕಿಡಗೇಡಿ ಕಾಲಿಗೆ ಗುಂಡೇಟು ಬಿದ್ದಿದೆ. ಮಾಂಸ ಮಾರಟಕ್ಕಾಗಿಯೇ ಗೋ ಹತ್ಯೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆದ್ರೆ ಇದ್ರ ಹಿಂದೆ ದೊಡ್ಡ ಜಾಲವಿದೆ ಅಂತ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಗೋವು ಕೇವಲ ಸಾಕು ಪ್ರಾಣಿಯಲ್ಲ, ದೇವರ ರೂಪ. ಹಸುವಿನಲ್ಲಿ ಮುಕ್ಕೋಟಿ ದೇವರುಗಳು ನೆಲೆಸಿದ್ದಾರೆ ಅನ್ನೋ ನಂಬಿಕೆ ಇದೆ. ಜಾತಿಭೇದವಿಲ್ಲದೇ ಎಲ್ಲರಿಗೂ ಹಾಲುಣಿಸುವ ಕಾಮಧೇನು. ಆದ್ರೆ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪಾಪಿಗಳು…

Read More