admin

ಮಂಗಳೂರು: ಮರವೂರು ನದಿಗೆ ಬಿದ್ದು ಮಹಿಳೆ ಮೃತ್ಯು

ಮಂಗಳೂರು: ನಗರದ ಮರವೂರು ಬಳಿಯ ಸೇತುವೆಯಿಂದ ಕೆಳಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ರವಿವಾರ ಬೆಳಳಗ್ಗೆ ನಡೆದಿದೆ.ಕುಂಜತ್ತಬೈಲು ನಿವಾಸಿ ರೇವತಿ (60) ಮೃತ ಮಹಿಳೆ ಎಂದು ತಿಳಿದು ಬಂದಿದೆ. ರವಿವಾರ ಬೆಳಿಗ್ಗೆ 7.30 ರಿಂದ 8.30ರ ಸುಮಾರಿಗೆ ಅಂಗಡಿಗೆ ಹೋಗುತ್ತಿದ್ದ ರೇವತಿ ಅವರು ಮರವೂರು ಸೇತುವೆಯ ಬಳಿ ಏಕಾಏಕಿ ನದಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯರು ಅವರ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂಗಡಿಗೆ ಹೋಗಿದ್ದ ರೇವತಿಯನ್ನು ಕಾಣದಾದಾಗ ಮನೆಯವರು ಅವರನ್ನು ಹುಡುಕುತ್ತಾ ಬಂದಿದ್ದರು.ಬಳಿಕ…

Read More

ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳ ಕ್ರೌರ್ಯ- FIR ದಾಖಲು

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬರ ಹಸುವಿನ ಕೆಚ್ಚಲನ್ನೇ ಕಿಡಿಗೇಡಿಗಳು ಕೊಯ್ದು ದುಷ್ಕೃತ್ಯವನ್ನು ಮೆರೆಯಲಾಗಿತ್ತು. ಈ ಸಂಬಂಧ ಈಗ ಕಾಟನ್ ಪೇಟೆ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳ ಕ್ರೌರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಪಕ್ಷ ನಾಯಕ ಆರ್.ಅಶೋಕ್ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಮೂಲಕ ಹಸುವನ ಕೆಚ್ಚಲು ಕೊಯ್ದಂತ…

Read More

ಕರ್ನಾಟಕ ಅಬಕಾರಿ ಇಲಾಖೆ: 1207 ಸಬ್ ಇನ್ ಸ್ಪೆಕ್ಟರ್, ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಕಾನ್ಸ್ಟೇಬಲ್, ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿನ 1,207 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ. ಅಬಕಾರಿ ಇಲಾಖೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಮತ್ತು ಅಬಕಾರಿ ಪೇದೆಗಳ ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ ವೃಂದ…

Read More

ಬೆಳ್ಳಾರೆ: ತಂಡದಿಂದ ಯುವಕನಿಗೆ ಹಲ್ಲೆ..!

ಬೆಳ್ಳಾರೆ: ಯುವಕನೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಬೆಳ್ಳಾರೆ ಪೇಟೆಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಯುವಕ ಆಶೀರ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ರಾತ್ರಿ 9:30 ಸಮಯಕ್ಕೆ ಬೆಳ್ಳಾರ ಪೇಟೆಯಲ್ಲಿ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬವರು ಆಶೀರ್ ಎಂಬ ಯುವಕ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ. ಹಲ್ಲೆಯಿಂದ ಗಾಯಗೊಂಡಿದ್ದ ಯುವಕನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ…

Read More

ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ : ಇನ್ಮುಂದೆ ಈ ದಾಖಲೆಗಳು ಕಡ್ಡಾಯ.!

ನೀವು ಯಾವುದೇ ನಗರದಲ್ಲಿ ಭೂಮಿ ಖರೀದಿಸಲು ತಯಾರಿ ನಡೆಸುತ್ತಿದ್ದರೆ, ನೀವು ಕಾನೂನು ನಿಯಮಗಳು ಮತ್ತು ಮುನ್ನೆಚ್ಚರಿಕೆಗಳನ್ನ ತಿಳಿದಿರಬೇಕು. ನೀವು ಮಾಹಿತಿಯಿಲ್ಲದೆ ಭೂಮಿಯನ್ನ ಖರೀದಿಸಲು ಪ್ರಯತ್ನಿಸಿದರೆ, ನೀವು ತೊಂದರೆಗೆ ಸಿಲುಕಬಹುದು ಮತ್ತು ಆರ್ಥಿಕ ನಷ್ಟವನ್ನು ಸಹ ಅನುಭವಿಸಬಹುದು. ಭೂಮಿ ಖರೀದಿಸುವಾಗ 6 ದಾಖಲೆಗಳು ಕಡ್ಡಾಯ ಪರಿಶೀಲಿಸಿ.! ಯಾವುದೇ ಆಸ್ತಿಯನ್ನು ಖರೀದಿಸುವ ಮೊದಲು, ಅದರ ಹಕ್ಕುಪತ್ರವನ್ನು ನೋಡುವುದು ಮುಖ್ಯ. ಹಕ್ಕುಪತ್ರವು ಅಂತಹದ್ದಾಗಿದೆ ಮತ್ತು ಅಂತಹ ಆಸ್ತಿಯ ಹೆಸರಿನಲ್ಲಿ ದಾಖಲಿಸಲಾಗುತ್ತದೆ. ಆತನಿಗೆ ಆಸ್ತಿ ಹೇಗೆ ಸಿಕ್ಕಿತು? ಇದು ಕುಟುಂಬದಿಂದ ಆನುವಂಶಿಕವಾಗಿ ಬಂದಿದೆ…

Read More

ಮಂಗಳೂರು: ಪಾರ್ಟಿಯಲ್ಲಿ ಯುವತಿಯ ಅತ್ಯಾಚಾರಗೈದ ಅಪರಾಧಿಗೆ 10 ವರ್ಷ ಕಠಿಣ ಸಜೆ, ದಂಡ

ಮಂಗಳೂರು: ಪಾರ್ಟಿಗೆ ಆಗಮಿಸಿದ್ದ ಯುವತಿಗೆ ಪ್ರಜ್ಞೆ ತಪ್ಪುವ ಪದಾರ್ಥ ಬೆರೆಸಿದ್ದ ವೈನ್ ನೀಡಿ ಅತ್ಯಾಚಾರ ಎಸಗಿರುವ ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಹಂಪನಕಟ್ಟೆ ಲೈಟ್‌ಹೌಸ್‌ಹಿಲ್ ರೋಡ್ ನಿವಾಸಿ ಬ್ರಯಾನ್ ರಿಚರ್ಡ್ ಅಮನ್ನಾ (34) ಶಿಕ್ಷೆಗೊಳಗಾದ ಅಪರಾಧಿ ಸಂತ್ರಸ್ತ ಯುವತಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಗೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ಜಾಯ್‌ಲಿನ್ ಗ್ಲಾನೆಲ್ ಪಿಂಟೋ ಎಂಬಾತ ಪರಿಚಿತನಾಗಿದ್ದ. ಆತನಿಗೆ ಅಂಡಮಾನ್‌ಗೆ…

Read More

ಎನ್‌ಕೌಂಟರ್ ನಲ್ಲಿ ಆರಂಭಗೊಂಡು ಬಳಿಕ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ ಮೂಡುತ್ತಿದೆ- ಅಣ್ಣಾಮಲೈ‌

ಉಡುಪಿ: ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ ಕೌಂಟರ್ ನಲ್ಲಿ ಆರಂಭಗೊಂಡು ಬಳಿಕ ನಡೆದ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ ಮೂಡುತ್ತಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಮಾಡುವ ಅಗತ್ಯವಿರಲಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಇಂದು ಉಡುಪಿಯಲ್ಲಿ ಹೇಳಿಕೆ ನೀಡಿದರು ‌ ಇಂದು ಉಡುಪಿಯಲ್ಲಿ‌  ಪತ್ರಕರ್ತರೊಂದಿಗೆ 6 ಮಂದಿ ನಕ್ಸಲರ ಶರಣಾಗತಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಡಿಸಿ, ಎಸ್ಪಿ ಅವರ ಸಮ್ಮುಖದಲ್ಲಿ ಕೆಲವು ಪ್ರಕ್ರಿಯೆಗಳ ಮೂಲಕ ಶರಣಾಗತಿ ನಡೆಸಬೇಕಿತ್ತು. ಮೊದಲು ನಕ್ಸಲರು ಶರಣಾಗತಿಯಾಗಿ,…

Read More

ಪುತ್ತೂರು : ಅಂತಾರಾಜ್ಯ ಕಳ್ಳ ಪೊಲೀಸ್ ಬಲೆಗೆ- 21 ಲಕ್ಷ ಮೌಲ್ಯದ ಸೊತ್ತು ವಶಕ್ಕೆ

ಮಂಗಳೂರು : ಅಂತಾರಾಜ್ಯ ಕಳ್ಳನನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಬಂಧಿತನಿಂದ ಬರೋಬ್ಬರಿ 21 ಲಕ್ಷ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಸೂರಜ್ (36) ಬಂಧಿತ ಆರೋಪಿ. ವಿಶೇಷವೆಂದರೆ ಹಾಡಹಗಲೇ ಈತ ಕಳ್ಳತನ ಮಾಡುತ್ತಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ಈತ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಬಂಧಿತನಿಂದ 18 ಲಕ್ಷ ಮೌಲ್ಯದ 200 ಗ್ರಾಂ ಚಿನ್ನ, ಕೃತ್ಯಕ್ಕೆ ಬಳಸುತ್ತಿದ್ದ ಆಲ್ಟೋ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Read More

ಮಂಗಳೂರು: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

ಮಂಗಳೂರು: ಹಿಂದಿ ಭಾಷೆ ರಾಷ್ಟ್ರೀಯ ಭಾಷೆಯೇ ಅಲ್ಲ ಎಂದು ಮಾಜಿ ಕ್ರಿಕೆಟಿಗ ಅಶ್ವಿನ್ ಹೇಳಿಕೆ ನೀಡಿರುವ ವಿಚಾರಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಶನಿವಾರ(ಜ.11) ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದಿ ಭಾಷೆಯ ಕುರಿತು ಆರ್. ಅಷ್ವಿನ್ ಒಂದು ದೃಷ್ಟಿಕೋನ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ, ಹಿಂದಿ ಒಂದು ಅಫಿಶಿಯಲ್ ಲ್ಯಾಂಗ್ವೇಜ್, ಪ್ರಧಾನ ಮಂತ್ರಿ ತುಂಬಾ ಕಡೆ ಇದನ್ನೇ ಹೇಳಿದ್ದು, ಕೇವಲ ಹಿಂದಿ ಮಾತ್ರ ರಾಷ್ಟ್ರೀಯ ಭಾಷೆ ಅಂತಲ್ಲ, ಎಲ್ಲಾ ಭಾಷೆಯೂ ರಾಷ್ಟ್ರೀಯ…

Read More

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಅಂಗಾಂಗ ದಾನ ಪ್ರಕ್ರಿಯೆ – ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ

ಮಂಗಳೂರು : ಸರ್ಕಾರಿ ಆಸ್ಪತ್ರೆ ವೆನ್ಲಾಕ್​ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು ಲಿವರ್ ದಾನ ಪ್ರಕ್ರಿಯೆ ನಡೆಯಿತು. ಶಿವಮೊಗ್ಗ ರಾಗಿಗುಡ್ಡೆಯ ರೇಖಾ (41) ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಜನವರಿ 6 ರಂದು ಕರೆತರಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾದ ರೇಖಾ ಅವರ ಮೆದುಳು ನಿಷ್ಕ್ರಿಯವಾಗಿದ್ದರಿಂದ ಆಸ್ಪತ್ರೆಯ…

Read More