admin

ಬೆಳ್ತಂಗಡಿ: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಹಿಂದೂ ಯುವಕನನ್ನು ವಿವಾಹವಾಗಿ ಪತ್ತೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನೊಂದಿಗೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಹರೀಶ್ ಗೌಡ (24) ಮತ್ತು ಸುಹಾನ (19) ಪ್ರೀತಿಸಿ ಮದುವೆಯಾದ ಹಿಂದೂ-ಮುಸ್ಲಿಂ ಜೋಡಿ. ಹರೀಶ್ ಗೌಡ ಹಾಗೂ ಸುಹಾನ ಫೇಸ್‌ಬುಕ್‌ನಲ್ಲಿ ಪರಿಚಿತರಾಗಿದ್ದರು‌. ಬಳಿಕ ಇಬ್ಬರೂ ಪ್ರೀತಿಯ ಬಲೆಗೆ ಬಿದ್ದಿದ್ದರು. ಇತ್ತೀಚೆಗೆ ಕಂಪ್ಯೂಟರ್ ಕ್ಲಾಸ್‌ಗೆ ಹೋಗಿದ್ದ ಸುಹಾನ ನಾಪತ್ತೆ ಆಗಿದ್ದಳು. ಆದ್ದರಿಂದ ಆಕೆಯ ಮನೆಯವರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ…

Read More

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ -1 ವೇಳಾಪಟ್ಟಿಮಾರ್ಚ್ 21- ಪ್ರಥಮ ಭಾಷೆಮಾರ್ಚ್ 24- ಗಣಿತಮಾರ್ಚ್ 26- ದ್ವಿತೀಯ ಭಾಷೆಮಾರ್ಚ್ 29- ಸಮಾಜ ವಿಜ್ಞಾನಏಪ್ರಿಲ್ 2-…

Read More

ಉಪ್ಪಿನಂಗಡಿ: ಬ್ಯಾಗ್‌ನಿಂದ ಚಿನ್ನಾಭರಣ ಕಳವು- ಆರೋಪಿ ಮಹಿಳೆ ಅರೆಸ್ಟ್‌..!

ಉಪ್ಪಿನಂಗಡಿ: ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್‌ ಎಗರಿಸಿದ್ದ ಪ್ರಕರಣವನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿದ್ದಾರೆ. ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಕಡಬ ತಾಲೂಕು ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ನಿವಾಸಿ ಮುಸ್ತಫಾ ಅವರ ಪತ್ನಿ ಅಬೀಬಾ ಅವರು ಭಾವನ ಪತ್ನಿ ಹಸೀರಾಬಾನು ಜತೆಗೆ ಜ. 6ರಂದು ಮದುವೆ ಕಾರ್ಯಕ್ರಮಕ್ಕೆ ಹೊರಡುವ ಮೊದಲು ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ…

Read More

 ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!

 ಪುತ್ತೂರು ನರಿಮೊಗರು ಕೂಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 9ರಂದು ನಡೆದಿದೆ. ನರಿಮೊಗರು ಕೇಶವ ಎಂಬುವವರ ಪುತ್ರಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ದೀಕ್ಷಿತಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ನೇರವಾಗಿ ಬಂದು ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Read More

ಮಂಗಳೂರು: ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ – 73 ಲಕ್ಷದ ಹೈಡ್ರೋವಿಡ್ ಗಾಂಜಾ ವಶಕ್ಕೆ

ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ರಾಜ್ಯಕ್ಕೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ತಲಯಾಡ್ ಪೋಸ್ಟ್‌ನ ಕಂದಲಾಡ್ ಗ್ರಾಮದ ನಿವಾಸಿ ಶಮೀರ್ ಪಿ.ಕೆ.(42) ಬಂಧಿತ ಆರೋಪಿ. ಈತ ನಿಷೇಧಿತ ಮಾದಕದ್ರವ್ಯ ಹೈಡ್ರೋವಿಡ್ ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ.‌ ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ…

Read More

ಜ.20 ರೊಳಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮಧ್ಯಪ್ರಾಚ್ಯ ನಾಶವಾಗುತ್ತದೆ”:ಡೊನಾಲ್ಡ್ ಟ್ರಂಪ್ ಎಚ್ಚರಿಕೆ|

ಉದ್ಘಾಟನಾ ಸಮಾರಂಭದ ಮೊದಲು ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ, ಮಧ್ಯಪ್ರಾಚ್ಯವನ್ನು ನಾಶಪಡಿಸಲಾಗುತ್ತದೆ. ಇದು ಹಮಾಸ್ ಗೆ ಒಳ್ಳೆಯದಲ್ಲ.ಸ್ಪಷ್ಟವಾಗಿ ಹೇಳುವುದಾದರೆ, ಇದು ಯಾರಿಗೂ ಒಳ್ಳೆಯದಲ್ಲ ಎಂದು ಹೊಸದಾಗಿ ಆಯ್ಕೆಯಾದ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಟ್ರಂಪ್ ಸ್ಪಷ್ಟಪಡಿಸಿಲ್ಲ. ಫ್ಲೋರಿಡಾದ ಮಾರ್-ಎ-ಲಾಗೋ ಎಸ್ಟೇಟ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಎಚ್ಚರಿಕೆ ನೀಡಿದರು. ಅಮೆರಿಕದ ಒತ್ತೆಯಾಳುಗಳ ಬಿಡುಗಡೆಗೆ ಸಂಬಂಧಿಸಿದಂತೆ ಹಮಾಸ್ ಜೊತೆಗಿನ ಚರ್ಚೆಯ ಸ್ಥಿತಿಯ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು….

Read More

ಶರಣಾದ 6 ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು: ಶರಣಾದ 6 ನಕ್ಸಲರ ವಿರುದ್ಧ ಎನ್‌ಐಎ ತನಿಖೆ ನಡೆಸುವಂತೆ ಬಿಜೆಪಿ ಆಗ್ರಹ ಮಾಡಿದೆ ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ ಹಿಂದೆ 6 ಮಂದಿ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಅವರನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಬಿಜೆಪಿ ಮನವಿ ಸಲ್ಲಿಸಿದೆ. ನಕ್ಸಲರನ್ನು ಶರಣಾಗತಿ ಕಮಿಟಿಯವರು ಈಗ ಹೇಗೆ ಭೇಟಿ ಮಾಡಿದ್ರು? ಪೊಲೀಸ್ ಇಲಾಖೆಗೆ ಈಗ ಬೆಲೆಯೇ ಇಲ್ವಾ? ಹಾಗಾದ್ರೆ, ಈ ಹಿಂದೆ ಎಲ್ಲಿದ್ದಾರೆ ಎಂಬ ಮಾಹಿತಿ ಗೊತ್ತಿರಲಿಲ್ವಾ? ಅಂದು…

Read More

ಮಂಗಳೂರು: ಜಾಹೀರಾತು ನಂಬಿ ಹಳೆಯ ನಾಣ್ಯಗಳನ್ನು ಮಾರಲು ಹೋಗಿ 58 ಲಕ್ಷ ರೂ.ಪಂಗನಾಮ!!

 ಮಂಗಳೂರು: ಹಳೆಯ ನಾಣ್ಯಗಳ ಖರೀದಿ ನೆಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ಮಂಗಳೂರು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ವ್ಯಕ್ತಿ 2024ರ ನವೆಂಬರ್ 25ರಂದು ಫೇಸ್ಬುಕ್ ನೋಡುತ್ತಿರುವಾಗ ಹಳೆಯ ನ್ಯಾಣ್ಯಗಳನ್ನು ಖರೀದಿಸಿ ಹೆಚ್ಚಿನ ಹಣ ನೀಡುವುದಾಗಿ ತಿಳಿಸಿರುವ ಜಾಹಿರಾತನ್ನು ನೋಡಿದ್ದಾರೆ. ಬಳಿಕ ಆ ಜಾಹಿರಾತಿನಲ್ಲಿದ್ದ ವಾಟ್ಸ್ಆ್ಯಪ್ ಖಾತೆಗೆ ತಮ್ಮ ಬಳಿ ಇದ್ದ 15 ಹಳೆಯ ನ್ಯಾಣ್ಯಗಳ ಫೋಟೋಗಳನ್ನು ಕಳುಹಿಸಿದ್ದರು. ಅದರಂತೆ, ಆ ಕಡೆಯಿಂದ 15 ಹಳೆಯ ನ್ಯಾಣ್ಯಗಳನ್ನು ಖರೀದಿಸಿ, ಅದಕ್ಕೆ…

Read More

ಪಡುಬಿದ್ರೆ : ಸಾಲ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕ ನೇಣಿಗೆ ಶರಣು

ಪಡುಬಿದ್ರೆ : ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು ಇವರ ಮನೆಗೆ ಬರುತ್ತಿದ್ದರು. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ, ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಸಾಲಗಾರರು ನಿರಂತರವಾಗಿ…

Read More

ಸೈಬರ್ ವಂಚನೆಯಿಂದ ಗ್ರಾಹಕನಿಗಾಗುವ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ: ಸುಪ್ರೀಂ ಮಹತ್ವದ ಆದೇಶ

ನವದೆಹಲಿ : ಸೈಬರ್ ವಂಚನೆಯಿಂದ ಗ್ರಾಹಕನ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದು ನಷ್ಟ ಉಂಟಾದರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಅಸ್ಸಾಂನ ಸೈಬರ್ ವಂಚನೆಗೆ ಒಳಗಾದ ಪಲ್ಲಬ್ ಭೌಮಿಕ್ ಗೆ 94,000 ರೂ.ಗಳನ್ನು ಮರುಪಾವತಿಸುವಂತೆ ಸುಪ್ರೀಂ ಕೋರ್ಟ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ)ಗೆ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ನ ಈ ತೀರ್ಪು ಆನ್‌ಲೈನ್ ವಂಚನೆಯಿಂದ ತಮ್ಮ ಗ್ರಾಹಕರ ಹಣವನ್ನು ರಕ್ಷಿಸುವಲ್ಲಿ ಹಣಕಾಸು ಸಂಸ್ಥೆಗಳ ಜವಾಬ್ದಾರಿಗಳನ್ನು ಒತ್ತಿ ಹೇಳುತ್ತದೆ. ಪ್ರಕರಣದ ಹಿನ್ನೆಲೆ ಪಲ್ಲಭ್…

Read More