admin

ಮಂಗಳೂರು: ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಡಿಜೆ ಸಜಂಕಾ ಕಾರ್ಯಕ್ರಮ ರದ್ದು!!

ಮಂಗಳೂರು: ಇಸ್ರೇಲ್ ಮೂಲದ ಪ್ರಖ್ಯಾತ ಡಿಜೆ ಸಜಂಕಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಡಿಜೆ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ರದ್ದಾಗಿದೆ. ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕೊನೆ ಕ್ಷಣದಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇದರಿಂದಾಗಿ ಮಂಗಳೂರಿನ ಬೋಳಾರದ ಸಿಟಿ ಬೀಚ್‌ನಲ್ಲಿ ನಿನ್ನೆ ಸಂಜೆ ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿದೆ. ಜಗತ್ತಿನ ಪ್ರಖ್ಯಾತ ಸಂಗೀತಗಾರ ಡಿಜೆ ಸಜಂಕಾ ಕಾರ್ಯಕ್ರಮ ಮಂಗಳೂರಿನ ಸಿಟಿ ಬೀಚ್ ನಲ್ಲಿ ನಿನ್ನೆ ಸಂಜೆ ಆಯೋಜಿಸಲಾಗಿತ್ತು. ಆದರೆ ಡಿಜೆ ಸಜಂಕಾ ವಿರುದ್ದ ಹಿಂದೂ ಸಂಘಟನೆಗಳು…

Read More

ಮಂಗಳೂರು: ನಾಪತ್ತೆಯಾಗಿದ್ದ ಯುವಕ ಮರವೂರು ನದಿಯಲ್ಲಿ ಮೃತದೇಹವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಯುವಕನೋರ್ವನು ನಗರದ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ (24) ಎಂಬಾತ ಮೃತಪಟ್ಟ ಯುವಕ. ಡಿಸೆಂಬರ್ 25ರಂದು ಸೂರ್ಯ ಏಕಾಏಕಿ ನಾಪತ್ತೆಯಾಗಿದ್ದ. ಆ ಬಳಿಕ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಆತ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Read More

ಉಡುಪಿ: ಮೇಲ್ಸೇತುವೆ ಕಾಮಗಾರಿ ವೇಳೆ ಅಗೆದಿದ್ದ ಗುಂಡಿಗೆ ಮಗುಚಿಬಿದ್ದ ಕಾರು

ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ 3ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿಬಿದ್ದಿದೆ

Read More

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ- ಐಸಿಯುನಲ್ಲಿದ್ದ ಬಾಲಕಿ ಮೃತ್ಯು

ಮಂಗಳೂರು: ರಾತ್ರಿ‌ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾಳೆ. ಮಹದಿಯಾ ಮೃತಪಟ್ಟ ಬಾಲಕಿ. ಡಿಸೆಂಬರ್ 7ರಂದು ರಾತ್ರಿ ಮಂಜನಾಡಿಯ ಖಂಡಿಗದ ತಮ್ಮ ಮನೆಯಲ್ಲಿ ತಾಯಿ ಕುಬ್ರಾ ಮತ್ತು ಮೂವರು ಹೆಣ್ಮಕ್ಕಳಾದ ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಮಲಗಿದ್ದರು. ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದರು‌. ತಕ್ಷಣ ಎಲ್ಲರನ್ನೂ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ತಾಯಿ ಖುಬ್ರಾ ಚಿಕಿತ್ಸೆ ಫಲಿಸದೇ ಡಿಸೆಂಬರ್ 12ರಂದು…

Read More

ಮಂಗಳೂರು: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ!

ಮಂಗಳೂರು: ಹೊಸ ವರ್ಷದ ನೆಪದಲ್ಲಿ ಯುವ ಜನತೆಯನ್ನು ಗುರಿಯಾಗಿಸಿ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ಪೊಲೀಸ್‌ ಇಲಾಖೆ ನಿರ್ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಪೊಲೀಸ್‌ ಇಲಾಖೆಗೆ ಮನವಿ ಮಾಡಿವೆ. ಹಲವಾರು ವರ್ಷದಿಂದ ಡ್ರಗ್ಸ್‌ ಮಾಫಿಯಾ ಕರಾವಳಿ ಭಾಗದಲ್ಲಿ ವ್ಯಾಪಕವಾಗಿದ್ದು, ಪಾರ್ಟಿಗಳಿಗೆ ಪೂರೈಕೆಯಾಗುತ್ತಿದೆ. ಸಾಕಷ್ಟು ಯುವಕ ಯುವತಿಯರ ಜೀವನ ಹಾಳಾಗಿದೆ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮತ್ತು ಸರಕಾರದ ಗಮನಕ್ಕೆ ಸಾಕಷ್ಟು ಬಾರಿ ಇದನ್ನು ತರಲಾಗಿದೆ. ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತಿದ್ದು, ಇದರ ಹಿಂದೆ ದೊಡ್ಡ…

Read More

ಡಿಎಂಕೆ ಸರ್ಕಾರ ಅಧಿಕಾರದಿಂದ ಕೆಳಗಿಳಿಯೋವರೆಗೂ ಶೂ ಧರಿಸಲ್ಲ: ಅಣ್ಣಾಮಲೈ

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಡಿಎಂಕೆಅಧಿಕಾರದಿಂದ ಕೆಳಗಿಳಿಯುವ ವರೆಗೂ ಶೂ ಧರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದಾರೆ. ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣವನ್ನು ಸರ್ಕಾರ ನಿರ್ವಹಿಸಿದ ರೀತಿಯನ್ನು ವಿರೋಧಿಸಿ ಶುಕ್ರವಾರ ನಮ್ಮ ಮನೆಯ ಮುಂದೆಯೇ ಆರು ಬಾರಿ ಚಾಟಿಯೇಟು ಹೊಡೆದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು…

Read More

ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ

ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಡಿ.26 ರಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ…

Read More

ಮೊಬೈಲ್ ಹೆಚ್ಚು ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಶಿವಮೊಗ್ಗ : ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಯುವತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಓದಿನ ಕಡೆ ಗಮನ ಕೊಡು , ಜಾಸ್ತಿ ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ…

Read More

ಡಿ.28 ರಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ “ಮಂಗಳೂರು ಕಂಬಳ”

ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್‌ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ.  ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್‌ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ.  ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ…

Read More

ಮಂಗಳೂರು: ಗೋಮಾಂಸ ಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು

ಮಂಗಳೂರು : ಗೋವನ್ನು ಕತ್ತರಿಸಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗೋಮಾಂಸ ಸಹಿತ ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ಬಜಪೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುಪುರ ಕೈಕಂಬದ ವಿಕಾಸ್ ನಗರದಲ್ಲಿ ಡಿ.26 ಗುರುವಾರ ನಡೆದಿದೆ. ಇಬ್ಬರು ಮುಸ್ಲಿಂ ವ್ಯಕ್ತಿಗಳು ಟೆಂಪೋ ವಾಹನದಲ್ಲಿ ಗೋಮಾಂಸವನ್ನು ತುಂಬಿಸಿ ಸಾಗಾಟ ಮಾಡುತ್ತಿರುವ ವಿಚಾರ ತಿಳಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಬಜಪೆ ಪೊಲೀಸರು ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇವರು…

Read More