ಜ್ಞಾನಪೀಠ ಪ್ರಶಸ್ತಿ ವಿಜೇತ ಖ್ಯಾತ ಸಾಹಿತಿ ಎಂ.ಟಿ.ವಾಸುದೇವನ್ ನಾಯರ್ ನಿಧನ
ಹೃದಯ ವೈಫಲ್ಯದಿಂದ ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲಯಾಳಂನ ಶ್ರೇಷ್ಠ ಸಾಹಿತಿ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಎಂ.ಟಿ.ವಾಸುದೇವನ್ ನಾಯರ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆಯಿಂದಾಗಿ ಲೇಖಕರನ್ನು ಡಿಸೆಂಬರ್ 16 ರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಬುಧವಾರ ರಾತ್ರಿ ೧೦ ಗಂಟೆಗೆ ಕೋಝಿಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಗಂಭೀರ ಸ್ಥಿತಿಯಲ್ಲಿದ್ದಾಗ ಅವರ ದೇಹವು ಔಷಧಿಗಳಿಗೆ ಸ್ಪಂದಿಸುತ್ತಿದೆ ಎಂದು ವೈದ್ಯರು ಮಾಹಿತಿ…

