
ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೋಲೀಸರ ದಾಳಿ..!ನಾಲ್ವರು ಅರೆಸ್ಟ್, ಇಬ್ಬರು ಅಪ್ರಾಪ್ತೆ ಬಾಲಕಿಯರ ರಕ್ಷಣೆ
ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ನೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ನೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು…