ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ : ‘ಜನೌಷಧಿ ಕೇಂದ್ರ’ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಕಳೆದ ಕೆಲವು ತಿಂಗಳುಗಳ ಹಿಂದೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ ಪ್ರಕಟಿಸಿದೆ.ಈ ಪ್ರಕರಣ ನ್ಯಾಯಾಲಯಕ್ಕೆ ಬಾರಬಾರದಿತ್ತು. ಜನೌಷಧಿ ಅಂಗಡಿ ಇಡಲು ಅವಕಾಶ ಕೊಡದೇ ಇದ್ದರೆ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಾಣುತ್ತದೆ ಎಂದು ಅಭಿಪ್ರಾಯಪಟ್ಟು ಸರ್ಕಾರದ ಆದೇಶವನ್ನು ರದ್ದು ಮಾಡಿದೆ. ಜನೌಷಧಿ ಅಂಗಡಿಯವರ ಲೀಸ್ ತಿಂಗಳು ಮುಗಿದ ಹಿನ್ನೆಲೆ…

