ಬಂಟ್ವಾಳ : ನಾಲ್ಕನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಐದನೇ ಮದುವೆಗೆ ಸಜ್ಜಾಗುತ್ತಿದ್ದ ವಂಚಕ ಅರೆಸ್ಟ್..!
ಬಂಟ್ವಾಳ : ನಾಲ್ಕು ಮದುವೆಗಳನ್ನು ಮುರಿದು ಐದನೇ ಮದುವೆಗೆ ತಯಾರಾಗುತ್ತಿದ್ದ ಭೂಪನನ್ನು ಬಂಟ್ವಾಳದ ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಮನೆಯಿಂದ ಹೊರದಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ನಡೆದಿದೆ. ಆರೋಪಿಯಾಗಿರುವ ಮಹಮ್ಮದ್ ರಫೀಕ್(42) ತನ್ನ ನಾಲ್ಕನೇಯ ಪತ್ನಿಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ಮಗುವನ್ನು ಕೊಂದು ಹಾಕುತ್ತೇನೆಂದು ಬೆದರಿಕೆ ಹಾಕಿದ್ದಾನೆ, ತಾಯಿಯ ಮಡಿಲಲ್ಲಿದ್ದ ಮಗುವನ್ನು ಎಳೆದು ಎಸೆಯಲು ಮುಂದಾಗಿದ್ದಾನೆ’ ಮತ್ತು ತ್ರಿವಳಿ ತಲಾಖ್…

