admin

ಭಕ್ತಾದಿಗಳಿಗೆ ಮುಖ್ಯ ಮಾಹಿತಿ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ಜಾತ್ರೆ ಹಿನ್ನಲೆ ಕೆಲವು ಸೇವೆ ಸ್ಥಗಿತ..!

ಸುಬ್ರಹ್ಮಣ್ಯ: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ.27ರಿಂದ ಡಿ.12ರ ತನಕ ನೆರವೇರಲಿದೆ. ಜಾತ್ರೋತ್ಸವದ ನಿಮಿತ್ತ ಕ್ಷೇತ್ರದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ನ.25ರಿಂದ ಡಿ.12ರ ತನಕ ನೆರವೇರುವುದಿಲ್ಲ. ಆದರೆ ಇತರ ಸೇವೆಗಳು ಎಂದಿನಂತೆ ನೆರವೇರುತ್ತದೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ ಎಂದು ದೇಗುಲದ ಪ್ರಕಟನೆ ತಿಳಿಸಿದೆ.ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನದಂದು ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ಡಿ.7) ದಿನದಂದು…

Read More

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಪೇಜಾವರ ಶ್ರೀಗಳು – ಮಹತ್ವದ ಚರ್ಚೆ

ಉಡುಪಿ: ಉಡುಪಿಯ ಶ್ರೀ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಮಹತ್ವದ ಭೇಟಿಯಲ್ಲಿ ಗೃಹ ಸಚಿವರ ಜೊತೆ ಅನೇಕ ಸಂಗತಿಗಳನ್ನು ಚರ್ಚೆ ಮಾಡಿದ್ದಾರೆ. ರಾಷ್ಟ್ರೀಯ ಭದ್ರತೆ, ಹಿತಾಸಕ್ತಿಯ ವಿಚಾರ ವಿಮರ್ಶೆ ನಡೆಸಿದ್ದಾರೆ. ರಾಜ್ಯದಲ್ಲಿ ವಕ್ಫ್ ದುರುಪಯೋಗದಿಂದ ರೈತಾಪಿ ಮತ್ತು ಜನಸಾಮಾನ್ಯರ ಸಂಕಷ್ಟ‌ ಕುರಿತೂ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ. ಮುಜರಾಯಿ ಮುಕ್ತ ಹಿಂದೂ ದೇವಳ, ಬಾಂಗ್ಲಾದೇಶದಿಂದ ನುಸುಳುವಿಕೆ, ಮಣಿಪುರ ಬಂಗಾಳ ಹಿಂಸಾಚಾರ, ಮುಂತಾದ ಎಲ್ಲ ರಾಷ್ಟ್ರೀಯ ಹಿತಾಸಕ್ತಿಯ…

Read More

ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್, ಕೋಟಿ ಕೋಟಿ ಸುಲಿಗೆ..! – ಅಣ್ಣ-ತಂಗಿ ಸೇರಿದಂತೆ ಮೂವರು ಅರೆಸ್ಟ್

ಬೆಂಗಳೂರು: ಕೇಂದ್ರ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್‌ (Honey Trap) ಮಾಡಿ, 2.5 ಕೋಟಿ ರೂಪಾಯಿ ವಸೂಲಿ ಮಾಡಿದ್ದ ಖತರ್ನಾಕ್‌ ಗ್ಯಾಂಗ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಸರ್ಕಾರಿ ನೌಕರನನ್ನು ಜಿಮ್‌ನಲ್ಲಿ ಪರಿಚಯ ಮಾಡಿಕೊಂಡ ಮಹಿಳೆ, ನೌಕರನ ಖಾಸಗಿ ವಿಡಿಯೊ ಇಟ್ಟುಕೊಂಡು ತನ್ನ ಸಹಚರರ ಜತೆ ಸೇರಿ ಹಣ ಪೀಕಿದ್ದು, ಮತ್ತಷ್ಟು ಹಣಕ್ಕೆ ಡಿಮ್ಯಾಂಡ್‌ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ತಬಸುಮ್ ಬೇಗಂ, ಅಜೀಮ್ ಉದ್ದಿನ್, ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಆರ್.ಟಿ. ನಗರದಲ್ಲಿ ಘಟನೆ ನಡೆದಿದ್ದು, ಜಿಮ್‌ನಲ್ಲಿ ಪರಿಚಯ ಮಾಡಿಕೊಂಡ…

Read More

ಬಿಜೆಪಿ ಹೀನಾಯ ಸೋಲಿಗೆ ವಿಜಯೇಂದ್ರ  ನೇತೃತ್ವದ ಒಳ ಒಪ್ಪಂದವೇ ಕಾರಣ- ಯತ್ನಾಳ್

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಇನ್ನು ಈ ಹೀನಾಯ ಸೋಲಿನ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದಾರೆ. ಈ ಸೋಲಿಗೆಲ್ಲಾ ಕಾರಣ ಪೂಜ್ಯ ತಂದೆ, ಕಿರಿ ಮಗನೇ ಕಾರಣ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಟೀಕಿಸಿದರು. ವಿಜಯೇಂದ್ರ ನೇತೃತ್ವವನ್ನು ರಾಜ್ಯದ ಜನ ಒಪ್ಪಿಲ್ಲ. ಈ ವಿಚಾರ ವಿಜಯೇಂದ್ರಗೂ ಗೊತ್ತು. ಬಿಜೆಪಿಗೆ ಎಲ್ಲಾ ಬಾಗಿಲು ಬಂದ್ ಆದಂತಿವೆ. ಬಿಜೆಪಿಗೆ ಇಂತಹ…

Read More

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಅರೆಸ್ಟ್..!

ಮಂಗಳೂರು: ಕುಖ್ಯಾತ ರೌಡಿ ಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಈ ವೇಳೆ ಆತ ಪೊಲೀಸ್ ಅಧಿಕಾರಿಗಳಿಗೇ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆಂದು ತಿಳಿದು ಬಂದಿದೆ. ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43) ಬಂಧಿತ ಕುಖ್ಯಾತ ರೌಡಿಶೀಟರ್. ರೌಡಿಶೀಟರ್ ದಾವೂದ್ ಹಲವಾರು ಗಂಭೀರ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಆರೋಪಿ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆಯ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ಎಂದು ತಿಳಿದು ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪಿಎಸ್ಐ ನರೇಂದ್ರ ನೇತೃತ್ವದ ತಂಡ ದಾವೂದ್‌ನನ್ನು…

Read More

ಮಂಗಳೂರು: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ನೀಡಿದ ತ್ರಿಪಲ್ ತಲಾಖ್…! ಪತಿ ಅರೆಸ್ಟ್

ಮಂಗಳೂರು: ಮಾನಸಿಕ ಕಿರುಕುಳ ನೀಡಿ ದೈಹಿಕವಾಗಿ ಹಲ್ಲೆ ನಡೆಸಿ ಪತ್ನಿಗೆ ತ್ರಿಪಲ್ ತಲಾಖ್ ನೀಡಿದ ಆರೋಪಿ ಪತಿಯನ್ನು ಮಂಗಳೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಸಮ್ಮರ್ ಸ್ಯಾಂಡ್ ಹತ್ತಿರ ನಿವಾಸಿ ಮಹಮ್ಮದ್ ದಿಲ್ಫಾಜ್ ತ್ರಿವಳಿ ತಲಾಖ್ ನೀಡಿದ ಆರೋಪಿ. ಈತ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಹೀನಾ ಫಾತಿಮಾ ಎಂಬಾಕೆಯನ್ನು 2019ರಲ್ಲಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮದುವೆಯ ಸಂದರ್ಭ ಹೀನಾ ಫಾತಿಮಾ ಮನೆಯವರು ಆಕೆಗೆ 22 ಪವನ್ ಚಿನ್ನ ಹಾಕಿದ್ದು, ಮೊಹಮ್ಮದ್ ದಿಲ್ಫಾಜ್‌ಗೆ ವಾಚ್ ಖರೀದಿಸಲು 50,000…

Read More

ನೆಲ್ಯಾಡಿ: ಸರಣಿ ಅಪಘಾತ- ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸೈಂಟ್ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗಿತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಡ್ಡಹೊಳೆ ಎಂಬಲ್ಲಿ ಬಸ್ ರಸ್ತೆಗೆ ಪಲ್ಟಿಯಾದ ಪರಿಣಾಮ ಬೆಂಗಳೂರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿಂದ ಬರುತ್ತಿದ್ದ…

Read More

ಮಂಗಳೂರು: 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ- ವೃದ್ದನ ಬಂಧನ..!

ಮಂಗಳೂರು: ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕಾಮುಕ ವೃದ್ಧನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿನ ಮೂರು ವರ್ಷದ ಬಾಲಕಿ ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿತ್ತು. ಈ ವೇಳೆ ಅಂಗಡಿಯ ಮಾಲಕ ಕಾಮುಕ ವೃದ್ಧ ಅಬ್ದುಲ್ಲಾ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಗು ಅಸ್ವಸ್ಥವಾಗಿರುವುದನ್ನು ಗಮನಿಸಿದ ಬಾಲಕಿಯ ತಾಯಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಕೊಣಾಜೆ…

Read More

ಬೆಳ್ತಂಗಡಿ: ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕನಿಗೆ ಸ್ನೇಹಿತರಿಂದ ಅವಮಾನ..! ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಳ್ತಂಗಡಿ: ಹೊಸ ಟ್ರೆಂಡ್‌ನ ಟೋರ್ನ್ ಪ್ಯಾಂಟ್ ಧರಿಸಿದ ಯುವಕನಿಗೆ ಸ್ನೇಹಿತರಿಂದ ಅವಮಾನಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಜಿಲ್ಲೆ ಬೆಳ್ತಂಗಡಿಯ ಮಾರುಕಟ್ಟೆಗೆ ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ನೇಹಿತರು ಸೇರಿ ಎರಡು ಕೈಗಳನ್ನು ಲಾಕ್‌ ಮಾಡಿ ಪ್ಯಾಂಟ್‌ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಆ ವಿಡಿಯೋ ವೈರಲ್ ಆಗಿದ್ದು, ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಪುತ್ತೂರು: ಟ್ರಸ್ಟ್ ಹೆಸರಲ್ಲಿ ಸರಕಾರಿ ಆಸ್ಪತ್ರೆಯ ಜಾಗ ಕಬಳಿಕೆ ಯತ್ನ – ಸಿಎಂ, ಶಾಸಕರ ವಿರುದ್ಧ ಆರೋಪ

ಪುತ್ತೂರು : ಆರೋಗ್ಯ ಇಲಾಖೆಗೆ ಒಳಪಟ್ಟಿರುವ ಪುತ್ತೂರು ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಮಂಜೂರಾದ ಜಾಗವನ್ನು ರದ್ದುಗೊಳಿಸಿ, ಪ್ರಿಯದರ್ಶಿನಿ ಟ್ರಸ್ಟ್ ಹೆಸರಿನಲ್ಲಿನ ಟ್ರಸ್ಟ್‌ಗೆ ನೀಡುವ ಪ್ರಯತ್ನವೊಂದು ಪುತ್ತೂರಿನಲ್ಲಿ ನಡೆಯುತ್ತಿದೆ. ಇಲ್ಲಿನ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಮುಖ್ಯಮಂತ್ರಿ ಸಹಕಾರದಿಂದಲೇ ಈ ಭೂ ಕಬಳಿಕೆ ಪ್ರಯತ್ನ ನಡೆಯುತ್ತಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್‌ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆ ಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ಜಮೀನು ಮಂಜೂರಾತಿ ಪ್ರಕ್ರಿಯೆ ತಹಶೀಲ್ದಾರ್…

Read More