ಮಂಗಳೂರು: ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ – ಪ್ರಕರಣ ದಾಖಲು
ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಒಬ್ಬರು ತಲೆಗೆ ಗಂಭೀರವಾಗಿ ಯಾರೋ ಹೊಡೆದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ನಿವಾಸಿ ರಾಜೇಶ್ (31) ಮೃತಪಟ್ಟವರು. ರಾಜೇಶ್ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ತೊಳೆಯುವುದು, ಕೆಲವೊಮ್ಮೆ ಕಂಡೆಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ….

