admin

ಉಡುಪಿ: ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು 5000 ರೂ.ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.ಹಿತೇಂದ್ರ ಭಂಡಾರಿಯವರ ದೂರಿನಂತೆ ಶನಿವಾರ ಉಡುಪಿ…

Read More

ಉಡುಪಿ: ಕಾಂಗ್ರೆಸ್ ಮುಖಂಡನ ಪುತ್ರನ ಐಷಾರಾಮಿ ಥಾರ್ ಜೀಪ್ ಗೆ ಅಮಾಯಕ ರಿಕ್ಷಾ ಚಾಲಕ ಬಲಿ…!!

ಉಡುಪಿ : ಕಾಂಗ್ರೆಸ್ ಮುಖಂಡನ ಪುತ್ರನ ಥಾರ್ ಜೀಪ್ ಗೆ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ  ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ. ಹೌದು ಕಾಂಗ್ರೆಸ್ ಮುಖಂಡ, ಸಹಕಾರಿ ಧುರೀಣ ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯ ಓವರ್ ಸ್ಪೀಡ್ ಗೆ ರಿಕ್ಷಾ ಚಾಲಕರೊಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದ ಭಯಾನಕ‌ ಆ್ಯಕ್ಸಿಡೆಂಟ್ ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅಪಘಾತದ ತೀವ್ರತೆಯನ್ನು ತೋರಿಸುತ್ತದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾಂಗ್ರೆಸ್ ಮುಖಂಡ…

Read More

ಉಡುಪಿ : ಮೀನು ಸಾಗಿಸುವ ವಾಹನದಲ್ಲಿ ಜಾನುವಾರ ಸಾಗಾಟ..!

ಉಡುಪಿ : ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದು ಪಲ್ಟಿಯಾಗಿ ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ. ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಹೊತ್ತು ಮಿನಿ ಇನ್ಸುಲೇಟರ್ ವಾಹನದೊಳಗೆ ಮೀನು ತುಂಬಿರುವ ಟ್ರೇಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಅತಿ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ…

Read More

ಮಂಗಳೂರು: ಲಂಚುಲಾಲ್ ನೇತೃತ್ವದ ಅಸ್ತ್ರ ಸಂಸ್ಥೆಯ ಪ್ರಾಣಾಸ್ತ್ರ ಟ್ರಸ್ಟ್ ಮೂಲಕ ಬಡ ಜನರ ಸೇವೆಗಾಗಿ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

ಮಂಗಳೂರು: ಲಂಚುಲಾಲ್ ನೇತೃತ್ವದ ಅಸ್ತ್ರ ಸಂಸ್ಥೆಯ ಪ್ರಾಣಾಸ್ತ್ರ ಟ್ರಸ್ಟ್ ಮೂಲಕ ಬಡ ಜನರ ಸೇವೆಗಾಗಿ ಉಚಿತ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವು ನ.14 ರಂದು ತೊಕ್ಕೊಟ್ಟು ಒಳಪೇಟೆ ಅಂಬೇಡ್ಕರ್ ರಂಗ ಮಂದಿರದಲ್ಲಿ ನಡೆಯಿತು. ತೊಕ್ಕೊಟ್ಟು ಉಳ್ಳಾಲ ನಗರ ವಾಸುಕೀ ಶಾಖೆಯ ವಿಶ್ವಹಿಂದೂ ಪರಿಷತ್ ಬಜರಂಗದಳಕ್ಕೆ ಈ ಅಂಬುಲೆನ್ಸ್ ಹಸ್ತಾಂತರ ಮಾಡಲಾಗಿದ್ದು ಇದರ ನಿರ್ವಹಣೆಯನ್ನು ನಡೆಸಲಿದ್ದಾರೆ.ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತರಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕೋಡಿಕಲ್,ವಿಶ್ವಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್ವೆಲ್ ಹಾಗೂ…

Read More

ಮಂಗಳೂರು: ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ 28 ಲಕ್ಷ ರೂ ವಂಚನೆ – ಐವರು ಅರೆಸ್ಟ್..!

ಮಂಗಳೂರು: ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಂದ ಹಂತಹಂತವಾಗಿ 28,18,065 ರೂ ವಂಚನೆಗೈದ ಐವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಫಿರ್ಯಾದಿದಾರರ ವಾಟ್ಸ್ಆ್ಯಪ್‌ಗೆ ಜುಲೈ 21ರಂದು ಪಾರ್ಟ್‌ಟೈಮ್ ಜಾಬ್ ಆಫರ್ ಬಂದಿತ್ತು. ಅದರಲ್ಲಿ ಬಂದ ವೀಡಿಯೋದ ಸ್ಕ್ರೀನ್ ಶಾಟ್ ತೆಗೆದು ಹಾಕುವಂತೆ ಸೂಚಿಸಿದ್ದಂತೆ ಅವರು ಕಳುಹಿಸಿದ್ದರು. ಆ ತಕ್ಷಣ ಅವರ ಬ್ಯಾಂಕ್ ಖಾತೆಗೆ 130 ರೂ ಕ್ರೆಡಿಟ್ ಆಗಿದೆ. ಬಳಿಕ ಹಾಕಿರುವ ವೀಡಿಯೋ ತಪ್ಪಾಗಿದೆ ಎಂದು ಸೂಚನೆ ನೀಡಿದ ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿದವರು ಟೆಲಿಗ್ರಾಂ ಲಿಂಕ್…

Read More

ಕಾರ್ಕಳ: ಹಿಂದೂ ಕಾರ್ಯಕರ್ತರ ಮೇಲೆ ಸುಮೊಟೊ ಕೇಸ್ ..! ಬಜರಂಗದಳ ಆಕ್ರೋಶ

ಕಾರ್ಕಳ: ಮುಂಬರುವ ಲಕ್ಷ ದೀಪೋತ್ಸವ ಪ್ರಯುಕ್ತ ಹಿಂದೂಗಳಿಗೆ ಮಾತ್ರ ಅಂಗಡಿ ನಡೆಸಲು ಜಾಗ ಕೊಡಿ ಹೇಳಿಕೊಂಡು ಪ್ರಚಾರ ಮಾಡುತ್ತಾ, ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಕಳದ ರಮೇಶ್‌ ಶೆಟ್ಟಿ ಮತ್ತು ಇತರ ಮೂವರ ವಿರುದ್ಧ ಕಾರ್ಕಳ ನಗರ ಠಾಣೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ಕೇಸು ದಾಖಲಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪೊಲೀಸರೇ ಅವಕಾಶ ಮಾಡಿಕೊಡುತ್ತಿದ್ದಾರೆ….

Read More

ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 11 ನವಜಾತ ಶಿಶುಗಳು ಬೆಂಕಿಗಾಹುತಿ

ಲಕ್ನೋ: ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು 11 ನವಜಾತ ಶಿಶುಗಳು ಬೆಂಕಿಗಾಹುತಿಯಾದ ದಾರುಣ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಈ ಭೀಕರ ಬೆಂಕಿ ಅಪಘಾತದಲ್ಲಿ ಸುಮಾರು 11 ನವಜಾತ ಶಿಶುಗಳು ಸುಟ್ಟು ಕರಕಲಾಗಿವೆ. ಮಕ್ಕಳ ವಾರ್ಡ್‌ನ ಕಿಟಕಿ ಒಡೆದು ಹಲವು ಕಂದಮ್ಮಗಳನ್ನು ರಕ್ಷಿಸಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ…

Read More

ಮಂಗಳೂರು: ಮೂವರು ಸೈಬರ್ ವಂಚಕರು ಅರೆಸ್ಟ್..!

ಮಂಗಳೂರು: ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ. ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ ಮೂವರು ಅರೆಸ್ಟ್ ಆಗಿದ್ದಾರೆ. ಸಿಬಿಐ ಅಧಇಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕಿನ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ. ಅದಲ್ಲದೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ…

Read More

ಕಾರ್ಕಳ: ಪತಿಯ ಸಾವಿನಿಂದ ಮಾನಸಿಕವಾಗಿ ನೊಂದ ಪತ್ನಿ ಆತ್ಮಹತ್ಯೆ..!

ಕಾರ್ಕಳ: ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ಸೊರಗಿದ್ದ ಪತ್ನಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಶುಕ್ರವಾರ(ನ.15) ಸಂಭವಿಸಿದೆ. ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ(39) ಆತ್ಮಹತ್ಯೆಗೆ ಶರಣಾದವರು. ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಇಬ್ಬರು ಹೆಣ್ಣುಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರು ಒಂದು ತಿಂಗಳ ಹಿಂದೆ ಪತಿ ನಿಧನದ ಅನಂತರ ಮಾನಸಿಕವಾಗಿ ನೊಂದಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More

ಹಿಂದೂ ಮುಖಂಡರ ಮೇಲೆ ದ್ವೇಷ ಸಾಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ..! ಹೀಗಿದೆ ನೋಡಿ ಆದೇಶ ಪತ್ರ

ಹತ್ತಾರು ಹಗರಣಗಳಿಂದ ಹೈರಾಣಾಗಿರುವ ರಾಜ್ಯ ಕಾಂಗ್ರೆಸ್ ಸದ್ಯ ಹಗರಣದಿಂದ ತಪ್ಪಿಸಿಕೊಳ್ಳಲು ಹಿಂದೂ ಮುಖಂಡರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಮಾತಿಗೆ ಪುಷ್ಟಿ ನೀಡುವಂತೆ ಇದೀಗ ಹಿಂದೂ ಮುಖಂಡರೊಬ್ಬರಿಗೆ ನೀಡಿರುವ ನೋಟಿಸ್ ಸರ್ಕಾರದ‌ ನರಿ ಬುದ್ಧಿಯನ್ನು ಬಟಾಬಯಲು ಮಾಡಿದೆ. ಆದೇಶ ಪತ್ರದಲ್ಲೇನಿದೆ? ದಕ್ಷಿಣ ಕನ್ನಡ ಜಿಲ್ಲೆಯ ಹಲವು ಹಿಂದೂ ಪರ ಸಂಘಟನೆಗಳಲ್ಲಿ ಪ್ರಮುಖರು ಎನಿಸಿಕೊಂಡಿರುವ ಅಕ್ಷಯ್ ರಜಪೂತ್ ಕಲ್ಲಡ್ಕ ಅವರ ಮೇಲೆ ದ್ವೇಷದ ಕತ್ತಿ ಮಸೆಯುವ ಮೂಲಕ…

Read More