admin

ವಿಟ್ಲ: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಫೇಲ್ ಆಗಿ ಪಲ್ಟಿ..!ವಿದ್ಯಾರ್ಥಿಗಳಿಗೆ ಗಾಯ

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ನ.13ರ ಬುಧವಾರ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ತಲೆಗೆ ಗಾಯವಾಗಿದೆ. ಹಲವು ಮಕ್ಕಳು ಕೂಡ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿದ್ದ ಮಕ್ಕಳನ್ನು ವಿಟ್ಲದ ಶಾಲೆಯ ಬಸ್ಸಿಗೆ ಹತ್ತಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಮಂಗಳೂರು : ಪಕ್ಷಿಕೆರೆಯಲ್ಲಿ ಪತ್ನಿ ಹಾಗೂ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ ಹಾಗೂ ಅಕ್ಕ ಕಣ್ಮಣಿ ರಾವ್ ಅವರನ್ನು ಈಗಾಗಲೇ ಪೊಲೀಸರು ಬಂದಿಸಿದ್ದಾರೆ. ಈ ಇಬ್ಬರ ವಿರುದ್ಧ ಕಾರ್ತಿಕ್ ಪತ್ನಿಯ ತಾಯಿ ಸಾವಿತ್ರಿ ನೀಡಿದ ದೂರಿನಂತೆ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭ ತಾಯಿ ಮತ್ತು ಮಗಳು ತಲೆ ತಿರುಗಿ ಬಿದ್ದಿದ್ದು, ಮೂಡಬಿದ್ರೆ ಖಾಸಗಿ…

Read More

ಉಡುಪಿ : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಉಡುಪಿ: ಕಟಪಾಡಿ ವಿಶ್ವನಾಥ ಕ್ಷೇತ್ರದ ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿದ್ದ ಸುನೀಲ್‌ ಕುಮಾರ್‌ (54) ಅವರ ಶವವು ಕೊಳೆತ ಸ್ಥಿತಿಯಲ್ಲಿ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಇರಂದಾಡಿಯ ಹಾಡಿಯಲ್ಲಿ ಪತ್ತೆಯಾಗಿದೆ. ಪ್ರಾಣಿಗಳು ಎಳೆದಾಡಿದಂತೆ ಛಿದ್ರವಾಗಿದ್ದ ದೇಹ, ತಲೆಬುರುಡೆ ಮತ್ತು ಸೊಂಟದ ಭಾಗಗಳನ್ನು ಹೊಂದಿದ್ದ ಮೃತದೇಹವನ್ನು ಎಲ್ಲೂರು ಗ್ರಾ.ಪಂ. ಸದಸ್ಯ ಯಶವಂತ ಶೆಟ್ಟಿ ಅವರು ನೋಡಿದ್ದು ಅಪರಿಚಿತ ಮೃತದೇಹ ಪತ್ತೆಯಾಗಿರುವ ಕುರಿತು ಪಡುಬಿದ್ರಿ ಠಾಣೆಗೆ ನ. 10ರ ರಾತ್ರಿ ದೂರು ನೀಡಿದ್ದರು. ಸುನಿಲ್‌ ಮನೆಯವರು ಶವದ ಮೈಮೇಲಿದ್ದ ಬಟ್ಟೆಗಳ ಆಧಾರದಲ್ಲಿ…

Read More

ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ನವೆಂಬರ್ 17ರ ಪಿಲಿಕುಳ ಕಂಬಳ ಮುಂದೂಡಿಕೆ..!

ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್…

Read More

ನಾಳೆ ಧರ್ಮಸ್ಥಳಕ್ಕೆ ನಿರ್ಮಲಾ ಸೀತಾರಾಮನ್: ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಿಸಲಿದ್ದಾರೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನವೆಂಬರ್ 14ರಂದು ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದು, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ…

Read More

ಪುತ್ತೂರು: ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಪುತ್ತೂರು : ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ ದೇವಳದ ಆಡಳಿತ ಮಂಡಳಿ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಪುರಾಣ ಪ್ರಸಿದ್ಧ ಪುತ್ತೂರು ಶ್ರೀ ‌ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ‌ದಿನದಿಂದ‌ ದಿನಕ್ಕೆ ಹೆಚ್ಚಿತ್ತಿದ್ದು ಅದರಂತೆ ಎ ಗ್ರೇಡ್ ದೇವಾಲಯವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮತ್ತು ಶಿಸ್ತು ಕಾಪಾಡಲು ಅನುಕೂಲವಾಗುವಂತೆ  ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯ ಸಲುವಾಗಿ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಸಲಾಗಿದೆ. ಈ…

Read More

ಪುತ್ತೂರು : ಬಾಲಕಿಯರ ಹಾಸ್ಟೆಲ್ ಒಳಗೆ ನುಗ್ಗಿದ ಆಗಂತುಕ, ದೂರು ನೀಡಿದ್ರೂ ಪೊಲೀಸರ ನಿರ್ಲಕ್ಷ್ಯ..!

ಪುತ್ತೂರು: ಬಾಲಕಿಯರ ಹಾಸ್ಟೆಲ್ ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನವೆoಬರ್ 6 ರಂದು ಈ  ಘಟನೆ ನಡೆದಿದ್ದು ಬಾಲಕಿಯರೇ ಇರುವ ಹಾಸ್ಟೆಲ್ ಗೆ ಅಪರಿಚಿತ ವ್ಯಕ್ತಿಯೋರ್ವ ನುಗ್ಗಿದ್ದು, ಹಾಸ್ಟೆಲ್‌ನ ಸಿಸಿ ಕ್ಯಾಮಾರಾದಲ್ಲಿ  ಆಗಂತುಕನ ಚಲನವಲನ ದಾಖಲಾಗಿದೆ. ಮಧ್ಯ ರಾತ್ರಿ  ಸುಮಾರು 2.30 ರಿಂದ 3.30 ರ…

Read More

ಉಳ್ಳಾಲ: ಕೊಲೆಯತ್ನ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್..!

ಉಳ್ಳಾಲ: ಜೈಲಿನಿಂದ ಬಿಡುಗಡೆ ಹೊಂದಿರುವ ವ್ಯಕ್ತಿಯ ಕೊಲೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್, ಇಡ್ಯ, ಈಶ್ವರ ನಗರ ನಿವಾಸಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು(24), ತಲಪಾಡಿ, ನಾರ್ಲ ಪಡೀಲ್ ನಿವಾಸಿ ಸಚಿನ್(24), ಬಂಟ್ವಾಳ ತಾಲೂಕಿನ, ಪಜೀರ್ ಪೋಸ್ಟ್, ಕಂಬ್ಲಪದವು, ಪಾದಲ್ ಕೋಡಿ ನಿವಾಸಿ ಖುಷಿತ್(18) ಬಂಧಿತ ಆರೋಪಿಗಳು. ನವಂಬರ್ 8ರಂದು ಸಂಜೆ 6.40ರ ಸುಮಾರಿಗೆ ತಲಪಾಡಿ ಗ್ರಾಮದ ಕೆ.ಸಿ.ರೋಡ್-ಉಚ್ಚಿಲ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆ ಹೊಂದಿದ್ದ ಮೊಹಮದ್…

Read More

ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್..!

ರಾಯಪುರ: ಬಾಲಿವುಡ್ ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್‌ಗಢ ರಾಯಪುರದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಕೀಲ ಮೊಹಮ್ಮದ್ ಫೈಜಾನ್ ಖಾನ್ ಎಂದು ಗುರುತಿಸಲಾಗಿದೆ. ನಟ ಶಾರುಖ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆಯೊಂದು ಬಂದಿತ್ತು. ನ.5 ರಂದು ಮಧ್ಯಾಹ್ನ 1:20ರ ಸುಮಾರಿಗೆ ಮುಂಬೈನ ಬಾಂದ್ರಾ ಪೊಲೀಸರಿಗೆ ಕರೆ ಮಾಡಿ ವ್ಯಕ್ತಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ.ಛತ್ತೀಸ್‌ಗಢದ ರಾಯಪುರದ ಫೈಜಾನ್ ಖಾನ್ ಎಂಬುವರ ಹೆಸರಿನಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯಿಂದ ಬೆದರಿಕೆ…

Read More

ಮುಲ್ಕಿ: ತಾಯಿ ಮಗು ಕೊಲೆ, ಆತ್ಮಹತ್ಯೆ ಪ್ರಕರಣ, ಕಾರ್ತಿಕ್ ಭಟ್ ತಾಯಿ, ಸಹೋದರಿ ಅರೆಸ್ಟ್..!

ಮಂಗಳೂರು : ಮಂಗಳೂರಿನ ಪಕ್ಷಿಕೆರೆಯ ಜಲಜಾಕ್ಷಿ ಅಪಾರ್ಟ್‌ ಮೆಂಟ್‌ನಲ್ಲಿ ಪತ್ನಿ, ಮಗುವನ್ನು ಕೊಲೆ ಮಾಡಿ ಬಳಿಕ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಮೂಲ್ಕಿ ಪೊಲೀಸರು ಯುವಕನ ತಾಯಿ ಮತ್ತು ಸಹೋದರಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪಕ್ಷಿಕೆರೆ ಜಲಜಾಕ್ಷಿ ಫ್ಲ್ಯಾಟ್ ನಿವಾಸಿ ಕಾರ್ತಿಕ್ ಭಟ್ (32), ಆತನ ಪತ್ನಿ ಪ್ರಿಯಾಂಕಾ(28) ಮತ್ತು ಪುತ್ರ ಹೃದಯ್ (4) ಮೃತಪಟ್ಟವರು. ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಾಂಕಾ ಮತ್ತು ಹೃದಯ್ ಕೊಲೆಯಾದ ಸ್ಥಿತಿಯಲ್ಲಿ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದ್ದರು. ಈ…

Read More