ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರನ ಶವ ಪತ್ತೆ..!
ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿ ಕಣ್ಮರೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ರಕ್ಷಣೆ ಮಾಡಿ ನಗರದ ಖಾಸಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ…

