ಅ.8 : ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ
ಮಂಗಳೂರು : ದಸರಾ ಬಹುಭಾಷಾ ಕವಿಗೋಷ್ಠಿಯು ಅ.8ರ ಮಂಗಳವಾರ ಅಪರಾಹ್ನ 3.00 ಗಂಟೆಗೆ ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ನಡೆಯಲಿದೆ.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಮೂರನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ.ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ 12 ಭಾಷೆಗಳ ಕವಿಗಳು ಕವಿತೆ ವಾಚಿಸಲಿದ್ದಾರೆ.ಪ್ರಾಧ್ಯಾಪಕಿ ಹಾಗೂ ಸಾಹಿತಿ ಡಾ.ನಿಕೇತನ ಉಡುಪಿ…

