admin

ವಾಹನ ಮಾಲೀಕರಿಗೆ ಬಿಗ್ ರಿಲೀಫ್ : HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು.!

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಅನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ…

Read More

ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 10 ರೂ. ಇಳಿಕೆ..!

ನವದೆಹಲಿ : ವಾಹನ ಸವಾರರಿಗೆ ಸರ್ಕಾರಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪೆಟ್ರೋಲ್, ಡೀಸೆಲ್ 10 ರೂ. ಇಳಿಕೆಯಾಗುವ ಸಾಧ್ಯತೆ ಇದೆ. ಹೌದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲು ಸರ್ಕಾರ ಒಂದು ಮಾರ್ಗವನ್ನು ಕಂಡುಕೊಂಡಿದೆ. ಆದರೆ, ಅದನ್ನು ಆರಂಭಿಸಲು ಸರ್ಕಾರ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿದೆ. ಆದರೆ ಕ್ರಮೇಣ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆ ನಿವಾರಣೆಯಾಗುತ್ತಿದೆ. ಇದರಿಂದ ಪೆಟ್ರೋಲ್ ಬೆಲೆಯನ್ನು ನಿಯಂತ್ರಿಸಬಹುದು. ಆದ್ದರಿಂದ, ಮಿಶ್ರ ಇಂಧನದಿಂದ ಚಲಿಸುವ ಕಾರುಗಳು ಮಾರುಕಟ್ಟೆಯನ್ನು ತಲುಪಿವೆ. ಇಂಧನ ಫ್ಲೆಕ್ಸ್…

Read More

ಮಂಗಳೂರು: ಪಿಲಿಕುಳ ಮೃಗಾಲಯಕ್ಕೆ ಒರಿಸ್ಸಾದಿಂದ ಹೊಸ ಅತಿಥಿಗಳ ಆಗಮನ

ಮಂಗಳೂರು: ನಗರದ ಪಿಲಿಕುಲ ಶಿವರಾಮ ಕಾರಂತ ಜೈವಿಕ ಉದ್ಯಾನವನಕ್ಕೆ 2,000ಕಿ.ಮೀ. ಒರಿಸ್ಸಾದ ನಂದನ್ ಕಾನನ್ ಮೃಗಾಲಯದಿಂದ ಏಷ್ಯಾಟಿಕ್ ಸಿಂಹ, ಘರಿಯಾಲ್ ಮೊಸಳೆ ಸೇರಿದಂತೆ ಹಲವಾರು ಹೊಸ ಅತಿಥಿಗಳ ಆಗಮನವಾಗಿದೆ. ಆರು ವರ್ಷದ ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಾಲ್ ಮೊಸಳೆ ಮತ್ತು ಅಪರೂಪದ ಪಕ್ಷಿಗಳಾದ ಎರಡು ಸಿಲ್ವರ್ ಫೆಸೆಂಟ್, ಎರಡು ಹಳದಿ-ಗೋಲ್ಡನ್ ಫೆಸೆಂಟ್ ಗಳು ಪ್ರಾಣಿ ವಿನಿಮಯ ಕಾರ್ಯಕ್ರಮದ ಮೂಲಕ ಕೇಂದ್ರ ಮೃಗಾಲಯದ ಒಪ್ಪಿಗೆ ಮೇರೆಗೆ ಪಿಲಿಕುಳ ಮೃಗಾಲಯಕ್ಕೆ ಆಗಮಿಸಿವೆ. ಪಿಲಿಕುಳದಿಂದ ನಾಲ್ಕು ಕಾಡು ನಾಯಿ…

Read More

ಸ್ವಾಮೀಜಿ ಮೇಲಿನ ದಾಳಿ – ಕ್ರಮಕ್ಕೆ ಒತ್ತಾಯಿಸಿ ಕೇರಳ ಸಿಎಂಗೆ ಕ್ಯಾ.ಬ್ರಿಜೇಶ್ ಚೌಟ ಪತ್ರ

ಮಂಗಳೂರು :ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. ಎಡನೀರು ಮಠದ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಾನುವಾರ ದುಷ್ಕರ್ಮಿಗಳು ದಾಳಿ ನಡೆಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸಂಸದರು, ” ಹಿಂದೂ ಸಮಾಜದ ಮಾರ್ಗದರ್ಶಕರು ಹಾಗೂ ಆಧ್ಯಾತ್ಮಿಕ…

Read More

ಬೆಳ್ತಂಗಡಿ: ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು

ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್  ಡಿಸೋಜ  ಮತ್ತು  ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19)  ಆತ್ಮಹತ್ಯೆ ಮಾಡಿಕೊಂಡ ತಯವತಿಯಾಗಿದ್ದಾಳೆ.   ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಪ್ರಿಯಾಂಕ ಆತ್ಮಹತ್ಯೆಗೆ ಯತ್ನಿಸಿದ್ದಳು. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕ  ಅವರನ್ನು ಮಮಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಇಂದು ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ…

Read More

ಬಂಟ್ವಾಳ: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಿಂದ ನಗ-ನಗದು ಕಳವು..!

ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್‌‌ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಶ್ರೀಮಹಾಲಿಂಗೇಶ್ವರ ತುಂಬೆಯಲ್ಲಿರುವ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ…

Read More

ಪುತ್ತೂರು: ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ- ಯುವಕನೊಬ್ಬನಿಗೆ ಸಾರ್ವಜನಿಕರಿಂದ ಗೂಸಾ

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಯುವಕನೊಬ್ಬನಿಗೆ ಸಾರ್ವಜನಿಕರು ಗೂಸಾ ಕೊಟ್ಟ ಘಟನೆ ನಡೆದಿದೆ. ಇಬ್ಬರು ಯುವಕರು ಬಸ್‌ಗಳಲ್ಲಿ ಇತರ ಪ್ರಯಾಣಿಕರೊಂದಿಗೆ ಬಸ್‌ ಏರುವ ಮತ್ತು ಇಳಿಯುವ ನೆಪದಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದರು. ಇದನ್ನು ದೂರದಿಂದಲೇ ನೋಡುತ್ತಿದ್ದ ಸಾರ್ವಜನಿಕರು ಇಬ್ಬರು ಯುವಕರನ್ನು ವಿಚಾರಿಸಲು ಹೋದಾಗ ಅವರು ಅಲ್ಲಿಂದ ತಪ್ಪಿಕೊಂಡಿದ್ದರು.  ಈ ಪೈಕಿ ಓರ್ವ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಸಾರ್ವಜನಿಕರಿಂದ ಗೂಸಾ ತಿಂದಿದ್ದಾನೆ ಎಂದು ಮಾಹಿತಿ ತಿಳಿಯಲಾಗಿದೆ.

Read More

ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ..!

ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ ನಡೆದಿದೆ. ಈ ಘಟನೆಯ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ” ಹಿಂದೂ ಸಮಾಜ ಪೂಜನೀಯ ಭಾವನೆಯಲ್ಲಿ ಕಾಣುವ ಎಡನೀರು ಸಂಸ್ಥಾನದ ಶ್ರೀಗಳ ವಾಹನವನ್ನು ಅಡ್ಡಗಟ್ಟಿ ದಾಳಿ ಮಾಡಿರುವುದು ಹಿಂದೂ ಸಮಾಜದ ಭಾವನೆಯನ್ನು ಕೆರಳಿಸಿರುವುದಾಗಿದೆ. ಕೇರಳ ರಾಜ್ಯಾದ್ಯಂತ ನಡೆಯುವ ಇಂತಹ ಘಟನೆಗಳು ಕೇರಳದಲ್ಲಿನ ಪಿಣರಾಯಿ ಸರಕಾರದ ಹಿಂದೂ…

Read More

ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌‌…!

ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್‌ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ. ಬಳಿಕ ವೀಡಿಯೊ ಕರೆಯಲ್ಲಿ…

Read More

ಉಡುಪಿ: ಗಂಡನನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪತ್ನಿ, ಮರಣೋತ್ತರ ವರದಿ, ಕೊಲೆಗೆ ಮತ್ತೊಂದು ಟ್ವಿಸ್ಟ್..!

ಉಡುಪಿ ಜಿಲ್ಲೆಯಲ್ಲಿ ಬಿಚ್ಚಿ ಬೀಳಿಸಿದ್ದ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮರಣೋತ್ತರ ಪರೀಕ್ಷೆ ವರದಿ ಕೈ ಸೇರಿದ್ದು ವರದಿಯಲ್ಲಿ ಉಸಿರುಗಟ್ಟಿ ಸಾವನಪ್ಪಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಉಸಿರುಗಟ್ಟಿ ಸಾವು ಸಂಭವಿಸಿರುವುದು, ಮುಖದಲ್ಲಿ ಗಾಯದ ಗುರುತು ಮೂಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖವಾಗಿದೆ. ಪೊಲೀಸ್ ತನಿಖೆ ಮತ್ತಷ್ಟು ತಿರುಗುಗೊಂಡಿದೆ ಮೊಬೈಲ್ ಸಂಭಾಷಣೆ, ಕರೆ ಮಾಡಿದ ವಿವರ, ನೆಟ್ವರ್ಕ್ ಮಾಹಿತಿ, ಸಿಸಿಟಿವಿ ಬಗ್ಗೆ ಪೊಲೀಸರಿಂದ ತನಿಖೆ ವೇಗ ಪಡೆದುಕೊಂಡಿದೆ. ಕೊಲೆ ಸಂಶಯದಿಂದ ಆರಂಭದಲ್ಲೇ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿತ್ತು….

Read More