
ಉಡುಪಿ: ಮನೆಗೆ ಕರೆದು ವ್ಯಕ್ತಿಗೆ ಹನಿಟ್ರ್ಯಾಪ್, ಹಣ ಸುಲಿಗೆ- ಮಹಿಳೆ ಸಹಿತ 6 ಮಂದಿ ಅರೆಸ್ಟ್
ಉಡುಪಿ : ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್…