admin

ಮಂಗಳೂರು: ದಸರಾ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ದಂಡ..!-ಮ.ನ.ಪಾ

ಮಂಗಳೂರು: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ. ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು…

Read More

ಪುತ್ತೂರು ತಾಲೂಕು ಕಚೇರಿ ಚುನಾವಣಾ ಶಾಖೆಯ FDA ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಕಡಬ ಮತ್ತು ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು…

Read More

 ಮುಡಾ ಹಗರಣದಲ್ಲಿ `FIR’ ದಾಖಲಾದ್ರೆ ಸಿಎಂ ಸಿದ್ದರಾಮಯ್ಯ A1, ಪತ್ನಿ ಪಾರ್ವತಿ A2 ಆರೋಪಿ!

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ನಿನ್ನೆ ಆದೇಶ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಎಫ್ ಐಆರ್ ದಾಖಲಾಗುವ ಸಾಧ್ಯತೆ ಇದ್ದು, ಸಿಎಂ ಸಿದ್ದರಾಮಯ್ಯ A1 ಆರೋಪಿಯಾಗಲಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ…

Read More

ಮಂಗಳೂರು: ಬಾಬು ಕುಡ್ತಡ್ಕ ಪ್ರಶಸ್ತಿಗೆ ರಮೇಶ ಆಚಾರ್ಯ ಆಯ್ಕೆ

ಮಂಗಳೂರು: ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾ ಕೇಂದ್ರವು ದಿ.ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಸಹಕಾರದಲ್ಲಿ ನೀಡುವ 2024–25ನೇ ಸಾಲಿನ ಬಾಬು ಕುಡ್ತಡ್ಕ ಪ್ರಶಸ್ತಿಗೆ ಯಕ್ಷಗಾನದ ಸ್ತ್ರೀ ವೇಷಧಾರಿ, ಪ್ರಸಂಗ ಕರ್ತೃ ಎಂ.ಕೆ. ರಮೇಶ ಆಚಾರ್ಯ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಸೆ.29ರಂದು ಸಂಜೆ 4 ಗಂಟೆಗೆ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಸ್ತಿಕ್ ಕಲಾ ಕೇಂದ್ರದ ಕಾರ್ಯದರ್ಶಿ ಕೆ.ಸಿ. ಹರೀಶ್ಚಂದ್ರ ರಾವ್ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಂತರ…

Read More

ಕೊಲ್ಲೂರಿಗೆ ಹೋಗುತ್ತಿದ್ದ ಬಸ್ ,ಪಿಕಪ್ ಗೆ ಡಿಕ್ಕಿ- ಐವರಿಗೆ ಗಾಯ

ಕುಂದಾಪುರ: ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗೀ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಮೆಣಸು ಸಾಗಾಟದ ಪಿಕ್ ಆಫ್ ಡಿಕ್ಕಿಯಾದ ಪರಿಣಾಮ ಬಸ್ಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು ಕುಂಞಾಡಿ ಸಮೀಪದ ಜನ್ನಾಲ್ ಎಂಬಲ್ಲಿ ನಡೆದಿದೆ. ಖಾಸಗಿ ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕೊಲ್ಲೂರಿನಿಂದ ಬರುತ್ತಿದ್ದ ಮೆಣಸು ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಕುಂದಾಪುರ ಕಡೆಯಿಂದ ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್…

Read More

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಅರ್ಜುನನ ಮೃತದೇಹ ಎರಡು ತುಂಡುಗಳಾಗಿ ಪತ್ತೆ..!

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಶೋಧ ಕಾರ್ಯದಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ ಲಾರಿ ಚಾಲಕನಾಗಿದ್ದ ಅರ್ಜುನ್ ಶವ ಸೇರಿದಂತೆ ಮತ್ತೋರ್ವರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಅರ್ಜುನನ ಮೃತದೇಹ 2 ತುಂಡುಗಳಾಗಿವೆ. ಹೌದು ಕಳೆದ ಜುಲೈ 16 ರಂದು ಬೆಳಿಗ್ಗೆ 8.40ಕ್ಕೆ ಗುಡ್ಡ ಕುಸಿತವಾಗಿತ್ತು. ಘಟನೆಯಲ್ಲಿ 9 ಜನರು ನಾಪತ್ತೆಯಾಗಿದ್ದರು. ಇದೀಗ ಕೇರಳ ಮೂಲದ ಚಾಲಕ…

Read More

ಮಂಗಳೂರು: ಆಂಬ್ಯುಲೆನ್ಸ್ ಅಪಘಾತ – ರೋಗಿ ಮೃತ್ಯು..!

ಮಂಗಳೂರು: ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಕಡಬ ದಿಂದ ರೋಗಿಯನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಡೀಲ್ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು‌ ಪಲ್ಟಿಯಾಗಿದೆ. ಅಪಘಾತದ ಭೀಕರತೆಗೆ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

Read More

BREAKING : ಮುಡಾ ಹಗರಣದಲ್ಲಿ `CM’ ಗೆ ಬಿಗ್ ಶಾಕ್ : ಸಿದ್ದರಾಮಯ್ಯ ವಿರುದ್ಧ `FIR” ದಾಖಲಿಸಿ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ…

Read More

ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಶರವು ಗುಳಿಗ ದೈವ ಪುನರ್ ಪ್ರತಿಷ್ಠೆ..!

ಮಂಗಳೂರು: ಇತ್ತೀಚೆಗೆ ನಗರದ ಹಂಪನಕಟ್ಟೆಯ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಾಮಗಾರಿ ಶರವು ಗುಳಿಗ ದೈವದ ಆಗ್ರಹಕ್ಕೆ ತುತ್ತಾಗಿ, ಗುತ್ತಿಗೆದಾರನೇ ದೈವಕ್ಕೆ ಶರಣಾಗಿದ್ದ ಸುದ್ದಿ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಅದೇ ಶರವು ಗುಳಿಗ ದೈವವು ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿಯೇ ಆರಾಧನೆಗೆ ಒಳಪಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಹಂಪನಕಟ್ಟೆಯ ವೆನ್ಲಾಕ್ ಜಿಲ್ಲಾಸ್ಪತ್ರೆ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಕಟ್ಟಡದ ಮುಂಭಾಗದ ಅಶ್ವತ್ಥಮರದ ಬುಡದಲ್ಲಿ ಗುಳಿಗನನ್ನು ಕಲ್ಲುಹಾಕಿ ಆರಾಧಿಸಲಾಗುತ್ತಿದೆ. ಸುಮಾರು 40ವರ್ಷಗಳ ಹಿಂದೆ ಈ ಜಾಗದಲ್ಲಿ…

Read More

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು- ವೈದ್ಯರ ನಿರ್ಲಕ್ಷ್ಯ, ಕುಟುಂಬಸ್ಥರ ಆರೋಪ

ಮಂಗಳೂರು: ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.ಈ ಬಗ್ಗೆ ಶಮನ್ ಇಬ್ರಾಹಿಂ ನೀಡಿದ ದೂರಿನಂತೆ ಕದ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಮೃತಪಟ್ಟವರು. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು “ಫ್ಲೋಂಟ್” ಕ್ಲಿನಿಕ್ ಗೆ…

Read More