admin

ಮಂಗಳೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿಯರು

ಮಂಗಳೂರು:ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳವಾರ ಹಾಡಹಗಲೇ ನಡೆದಿದೆ. ಮಂಗಳೂರಿನ ನವಭಾರತ್ ಸರ್ಕಲ್ ಬಳಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂಧರ್ಭ ಯುವತಿಯರ ಬಳಿ ಬಂದ ಯುವಕ ಯುವತಿಯರಿಗೆ ಕಿರುಕುಳ ನೀಡಿದ್ದಲ್ಲದೆ ಹಣ ಕೊಡುತ್ತೇನೆ ಬರುತ್ತೀರಾ ಅಂತಾ ಆಫರ್ ನೀಡಿದ್ದಾನೆ. ತಕ್ಷಣ ಯುವತಿಯರು ಯುವಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು ಆತನನ್ನು ತಳ್ಳಿ, ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಶಬರಿ ಎಂಬಾತನ‌ ಮೇಲೆ ಮಂಗಳೂರು ಮಹಿಳಾ ಠಾಣೆಯಲ್ಲಿ…

Read More

ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಢಿಕ್ಕಿ : ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವು…!!

 ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಬಳಿ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಭಟ್ಕಳ ಮೂಸ ನಗರದ ನಿವಾಸಿ ದಿವಂಗತ ಅಬೂಬಕರ್ ಸಿದ್ದೀಕ್ವಾ ಅವರ ಪುತ್ರ ಮೊಹಮ್ಮದ್ ನಾಸಿರ್ ಸಿದ್ದೀಕ್ವಾ ಎಂದು ತಿಳಿದು ಬಂದಿದೆ. ಇವರು ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳದ ಮನೆಗೆ ಮರಳುತ್ತಿದ್ದ ವೇಳೆ ರಾತ್ರಿ 8:45 ರ ಸುಮಾರಿಗೆ ಅರಾಟೆ…

Read More

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಬಿಜೆಪಿ

ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಹೈಕೋರ್ಟಿನ ತೀರ್ಪು ಸ್ವಾಗತಾರ್ಹ. ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶ…

Read More

ಉಳ್ಳಾಲದಲ್ಲಿ ಮನೆ ಅವರಣಗೋಡೆ ಕುಸಿತ; ಅತಂಕದಲ್ಲಿ ಮನೆ ಮಂದಿ

ಮಂಗಳೂರು:ರಾತ್ರಿ ಸುರಿದ ಮಳೆಗೆ ನಗರದ ಹೊರವಲಯ ಉಳ್ಳಾಲ ಟಿಸಿ ರೋಡ್ ಮುಳಿಗುಡ್ಡೆ ಎಂಬಲ್ಲಿ ಮನೆಯ ಅವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಮನೆ ಮಂದಿ ಅತಂಕದಲ್ಲಿದ್ದಾರೆ. ಮನೆಯೊಂದು ಕುಸಿಯುವ ಭೀತಿ ಎದುರಾಗಿದೆ.  ರಾತ್ರಿ ಸುಮಾರು 2 ಗಂಟೆ ವೇಳೆಗೆ  ಈ ಘಟನೆ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. (ಸೆ.23)ನಿನ್ನೆ ರಾತ್ರಿ ಮಂಗಳೂರು ಸೇರಿದಂತೆ ನಗರದ ಹೊರವಲಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸ್ಥಳಕ್ಕೆ ಉಳ್ಳಾಲ ಪುರಸಭೆ ಅಧಿಕಾರಿಗಳು ಭೇಟಿ ನೀಡಿದ್ದು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಚರಣೆ…

Read More

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ…

Read More

‘ಮಹಾಲಕ್ಷ್ಮಿ’ ಭೀಕರ ಹತ್ಯೆಗೆ ಬಿಗ್ ಟ್ವಿಸ್ಟ್ : ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ!

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ದೆಹಲಿಯ ಶ್ರದ್ಧಾ ವಾಕರ್ ಹತ್ಯೆಯ ಮಾದರಿಯಲ್ಲಿ ಬೆಂಗಳೂರಲ್ಲಿ ಕೂಡ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ವಿಚ್ಚೇದನದ ಬಳಿ ತನ್ನ ಪತ್ನಿ ಮಹಾಲಕ್ಷ್ಮಿ ಅಶ್ರಫ್ ಎಂಬ ವ್ಯಕ್ತಿಯೊಂದಿಗೆ ಆಕೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಪತಿ ಆರೋಪಿಸಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಮಹಾಲಕ್ಷ್ಮಿ ತಮ್ಮ ಮಗಳನ್ನು ನೋಡಲು ನೆಲಮಂಗಲದಲ್ಲಿರುವ ತನ್ನ ಅಂಗಡಿಗೆ ಹೋದಾಗ ಅವರನ್ನು ಕೊನೆಯ…

Read More

ಸುಳ್ಯ: ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಸುಳ್ಯ: ಕಳೆದ ಕೆಲವು ದಿನಗಳಿಂದ ಕೆಟ್ಟು ನಿಲ್ಲಿಸಿದ್ದ ಓಮ್ನಿ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಪರಿವಾರಕಾನದ ಸ್ನೇಹ ಶಾಲೆಗೆ ಹೋಗುವ ರಸ್ತೆಯ ಬದಿ ಸ್ವಲ್ಪ ಸಮಯದಿಂದ ಈ ಓಮ್ನಿ ಕಾರು ಕೆಟ್ಟು ನಿಂತಿತ್ತು. ಸೋಮವಾರ ಸಂಜೆ ಕೊಳೆತ ವಾಸನೆ ಬರುತ್ತಿದ್ದ ವೇಳೆ ಸ್ಥಳೀಯರು ಪರಿಶೀಲನೆ ನಡೆಸಿದ್ದಾಗ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ವಾಹನದ ಒಳಗೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ…

Read More

 2 ದಿನ ಭಾರೀ ಮಳೆ ಮುನ್ಸೂಚನೆ : `IMD’ಯಿಂದ `ರೆಡ್ ಅಲರ್ಟ್’ ಘೋಷಣೆ!

ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಕರಾವಳಿ ಮತ್ತು ಒಳನಾಡಿನಲ್ಲಿ ಭಾರೀ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಸೋಮವಾರವೂ ಈ ಪ್ರದೇಶಗಳಲ್ಲಿ ವಿಪರೀತ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ಸಮಯದಲ್ಲಿ, 24 ಮತ್ತು…

Read More

ಸುಳ್ಯ : ಕೆಎಸ್ಆರ್ ಟಿಸಿ ಬಸ್ ನಲ್ಲಿ ಹಿಂದೂ ಯುವತಿಗೆ ಕಿರುಕುಳ ನೀಡಿದ ಮುಸ್ಲಿಂ ಯುವಕನಿಗೆ ಧರ್ಮದೇಟು

ಸುಳ್ಯ : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಹಿಂದೂ ಯುವತಿಗೆ ಕಿರುಕುಳ ನೀಡಿದ ಮುಸ್ಲಿಂ ಯುವಕನಿಗೆ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಳ್ಯ ಪೈಜಾರು ಎಂಬಲ್ಲಿ ನಡೆದಿದೆ.ಕಿರುಕುಳ ನೀಡಿದ ಯುವಕನನ್ನು ಕಾಸರಗೋಡಿನ ಅಡೂರು ನಿವಾಸಿ ಮಹಮ್ಮದ್ ನಿಯಾಝ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯ ಕ್ಕೆ ಬರುತ್ತಿದ್ದ ಸರಕಾರಿ ಬಸ್ ನಲ್ಲಿ ಬರುತ್ತಿದ್ದ ಯುವತಿಗೆ ಮಹಮ್ಮದ್ ನಿಯಾಝ್ ಕಿರುಕುಳ ನೀಡಿದ್ದಾನೆ. ಈ ವೇಳೆ ಸುಬ್ರಹ್ಮಣ್ಯ ದಲ್ಲಿ ಬಸ್ ನಿಂದ ಇಳಿದ ಬಳಿಕ ತನ್ನ ಸ್ನೇಹಿತರಿಗೆ ಮಾಹಿತಿ ನೀಡಿದ್ದ…

Read More

BREAKING: ಬೆಂಗಳೂರಿನಲ್ಲಿ ಮಹಾಲಕ್ಷ್ಮೀ ಭೀಕರ ಕೊಲೆ ಕೇಸ್ : ಆರೋಪಿಯ ಗುರುತು ಪತ್ತೆ!

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಮಹಿಳೆಯ ಭೀಕರ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಲಕ್ಷ್ಮೀ ಕೊಲೆ ಪ್ರಕರಣ ಸಂಬಂಧ ಇದೀಗ ಆರೋಪಿಯ ಗುರುತು ಪತ್ತೆಯಾಗಿದ್ದು, ಆರೋಪಿಯ ಹುಡುಕಾಟ ಮುಂದುವರೆದಿದೆ. ಆರೋಪಿ ಹೊರರಾಜ್ಯದವನಗಿದ್ದು, ಬೆಂಗಳೂರಿನಲ್ಲೇ ವಾಸವಾಗಿದ್ದ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು…

Read More