admin

ದೇಶದ ಇತಿಹಾಸದಲ್ಲಿಯೇ ಅತಿದೊಡ್ಡ ತೀರ್ಪು,”ಮರಕುಂಬಿ ಪ್ರಕರಣ” 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಕೊಪ್ಪಳ  :ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರನ್ನು ಗುರಿಯಾಗಿಸಿಕೊಂಡು 2014ರಲ್ಲಿ ನಡೆದ ತಾರತಮ್ಯ ಮತ್ತು ಜಾತಿ ಹಿಂಸಾಚಾರ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಚಂದ್ರಶೇಖರ್ ಸಿ ಪ್ರಕರಣದಲ್ಲಿ 101 ಜನರಿಗೆ ಶಿಕ್ಷೆ ವಿಧಿಸಿದರು. ಇದು ಜಾತಿ ಸಂಬಂಧಿತ ಪ್ರಕರಣಗಳಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸಾಮೂಹಿಕ ಶಿಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅಪರ್ಣಾ ಬುಂಡಿ ಅವರು…

Read More

ಮಂಗಳೂರು: “ನಿನ್ನನ್ನು 24 ತುಂಡು ಮಾಡುವೆ” ಎಂದು ಬೆದರಿಕೆ – ಯುವತಿ ಆತ್ಮಹತ್ಯೆಗೆ ಯತ್ನ.!

ಮಂಗಳೂರು: ‘ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಸಂದೇಶ ಕಳುಹಿಸಿ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ‌ನಡೆದಿದೆ. ಸುರತ್ಕಲ್ ಇಡ್ಯಾದ ಸದಾಶಿವನಗರದ ನಿವಾಸಿ ಅನ್ಯಕೋಮಿನ ಯುವಕರ ಶಾರಿಕ್‌ ಹಾಗೂ ನೂರ್‌ಜಹಾನ್ ಎಂಬಿಬ್ಬರು ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪವಿತ್ತು. ಸದ್ಯ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈತ ಯುವತಿಯ ಫೇಸ್‌ಬುಕ್ ಅನ್ನು ಹ್ಯಾಕ್ ಮಾಡಿ ಆಕೆಯ ಸಹೋದರನಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದಲ್ಲದೆ…

Read More

ಉಡುಪಿ: ರೀಲ್ಸ್ ಹುಚ್ಚಿನಿಂದ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ..!

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಸಂಭವಿಸಿದೆ. ಬಾಲಕೃಷ್ಣ (44) ಮೃತ ವ್ಯಕ್ತಿ.ಇವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಕ್ಟೋಬರ್ 20 ರಂದು ಬಾಲಕೃಷ್ಣ ಸಾವನ್ನಪ್ಪಿದ್ದರು. ಬಾಲಕೃಷ್ಣ…

Read More

ಮಂಗಳೂರು: 30ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಸಿಸಿಬಿ ಬಲೆಗೆ

ಮಂಗಳೂರು: ಸುಮಾರು 30ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಬಳಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸತತ ಕಾರ್ಯಾಚರಣೆ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಪುತ್ತೂರು ಕೊಟ್ಟಾರಕ್ಕರ ಕೊಲ್ಲಂನ ಕೈತಕೋಡ್ ನಿವಾಸಿ ಜೋಸ್ ಕುಟ್ಟಿ(55) ಬಂಧಿತ ಆರೋಪಿ. ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ಎಂಆರ್‌ಪಿಎಲ್ ಟೌನ್‌ಶಿಪ್ ಸೈಟ್ ಪರಿಸರದಲ್ಲಿ ರಕ್ಷಕ್ ಇಂಡಸ್ಟ್ರೀಯಲ್ ಸೆಕ್ಯೂರಿಟಿ ಇನ್ಸಿಟ್ಯೂಟ್ ಮಾಲಕ…

Read More

ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ವಂಚನೆ- ಡಿವೈಎಫ್‌ಐ ಮಾಜಿ ಸದಸ್ಯೆ ಅರೆಸ್ಟ್‌

ಕಾಸರಗೋಡು : ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27) ಎಂದು ಗುರುತಿಸಲಾಗಿದೆ. ಆಕೆ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾಳೆ ಎಂದು ವರದಿಯಾಗಿದೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದರು.ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಲು ಆಗಮಿಸಿದ…

Read More

ಮಂಗಳೂರು: ಮರದ ದಿಮ್ಮಿ ಅಕ್ರಮ ಸಾಗಾಟ- ಪ್ರಕರಣ ದಾಖಲು..!

ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದ್ದ ಎರಡು ಮರಗಳ ರೆಂಬೆಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಅನುಮತಿ ಪಡೆಯಲಾಗಿತ್ತು ಎನ್ನಲಾಗಿದೆ. ಆದರೆ ದೇವದಾರ್ ಮತ್ತು ಸಾಗುವಾನಿ ಸಹಿತ 8 ಮರಗಳಿಗೆ ಕೊಡಲಿಯೇಟು ಹಾಕಿದ್ದಲ್ಲದೆ ಮರದ ದಿಮ್ಮಿಗಳನ್ನು ಖಾಸಗಿ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ…

Read More

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್‌ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್‌ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ. ಬೀಚ್‌ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್‌ ಗಳನ್ನು ಅಳವಡಿಸಲು ಇಲಾಖೆ ಚಿಂತನೆ…

Read More

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಡಿಕ್ಕಿ- ವಿದ್ಯಾರ್ಥಿನಿ ಮೃತ್ಯು, ಮೂವರಿಗೆ ಗಾಯ

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ನಡೆದಿದೆ. ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ, 4ನೇ ತರಗತಿಯ ವಿದ್ಯಾರ್ಥಿನಿ ಆಯಿಷಾ ವಹಿಬಾ (11 ) ಮೃತರು ಎಂದು ತಿಳಿದು ಬಂದಿದೆ.ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ….

Read More

ವಿಧಾನ ಪರಿಷತ್ ಉಪಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯಭೇರಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದರು. ಕಿಶೋರ್ ಅವರು 3,654 ಮತ ಪಡೆದು ಗೆಲುವಿನ ನಗೆ ಬೀರಿದರು. 1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿರು. ಒಟ್ಟು…

Read More

ಮಂಗಳೂರು : ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ಪೇದೆ

ಮಂಗಳೂರು :ಅಪರಾತ್ರಿಯಲ್ಲಿ ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಸ್ಕೂಟರಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮುರ್ಶಿದಾ ಬಾನು ಬುಧವಾರ ನಸುಕಿನ ನಾಲ್ಕು ಗಂಟೆ ವೇಳೆಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ, ಕೆಪಿಟಿ ಬಳಿಯ ವ್ಯಾಸನಗರದ ತಿರುವಿನಲ್ಲಿ ರಸ್ತೆ ಬದಿ ನಿಂತಿದ್ದ ಟ್ರಕ್ ಒಂದಕ್ಕೆ ಕೋಳಿ ಸಾಗಾಟದ ಪಿಕಪ್ ವಾಹನ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಪಿಕಪ್ ಮುಂಭಾಗ…

Read More