admin

BREAKING : ನಾಗಮಂಗಲ ಗಲಭೆ ಕೇಸ್ : ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅಮಾನತು!

ಮಂಡ್ಯ : ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ನಿನ್ನೆ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್…

Read More

ಮಂಗಳೂರು: ಬಸ್ ಫುಟ್‌ಬೋರ್ಡ್‌ನಿಂದ ಬಿದ್ದ ವಿದ್ಯಾರ್ಥಿ!!

ಮಂಗಳೂರು: ಬಸ್ಸಿನ ಫುಟ್ ಬೋರ್ಡಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಸ್ತೆಗೆ ಎಸೆಯಲ್ಪಟ್ಟ ಘಟನೆ ತೊಕ್ಕೊಟ್ಟು ಮೇಲ್ಸೆತುವೆ ಬಲಳಿ ನಡೆದಿದೆ.ತಲಪಾಡಿ ಯಿಂದ ಮಂಗಳೂರಿಗೆ ಬರುತ್ತಿದ್ದ ಸಿಟಿ ಬಸ್ಸೊಂದು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುತ್ತಿದ್ದಾಗ ತೊಕ್ಕೊಟ್ಟು ಮೇಲ್ಸೇತುವೆ ಚಾಲಕ ದಿಢೀರ್‌ ಬ್ರೇಕ್‌ ಹಾಕಿದ ಪರಿಣಾಮ ಫುಟ್‌ಬೋರ್ಡ್‌ನಲ್ಲಿ ನೇತಾಡುತ್ತಿದ್ದ ವಿದ್ಯಾರ್ಥಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆಯಲ್ಲಿ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

Read More

ಮಂಗಳೂರು: ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮೃತ್ಯು

ಮಂಗಳೂರು :  ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ  ಸಂಭವಿಸಿದೆ. ಜೇಮ್ಸ್ ಜತ್ತಣ್ಣ  ಮತ್ತು  ಎಡ್ವಿನ್  ಮಾಬೇನ್  ಮೃತ ದುರ್ದೈವಿಗಳಾಗಿದ್ದಾರೆ.   ಜೇಮ್ಸ್‌ ಜತ್ತನ್ನ ಪೂರ್ವಜರ ಮನೆ ಇದಾಗಿದ್ದು, ಪಾಲಿನಲ್ಲಿ ಅವರಿಗೆ ಈ ಮನೆ ಸಿಕ್ಕಿತ್ತು. ಮನೆಗೆ ತಾಗಿಕೊಂಡಂತೆ ಅಡ್ವಿನ್‌ ಅವರ ಮನೆ ಇದೆ. ಜೇಮ್ಸ್‌ ಅವರು ತನ್ನ ಹಳೆ ಮನೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮನೆ ಕಟ್ಟಲು ಉದ್ದೇಶಿಸಿದ್ದು, ಅದರಂತೆ…

Read More

ನಾಗಮಂಗಲ ಗಲಭೆ : ಮತಾಂಧರ ಮೇಲೆ ಯಾಕಿಷ್ಟು ವ್ಯಾಮೋಹ..? ಗೃಹ ಸಚಿವರನ್ನು ಪ್ರಶ್ನಿಸಿದ ಆರ್ ಅಶೋಕ್

ಬೆಂಗಳೂರು: ಒಂದು ಪೂರ್ವನಿಯೋಜಿತ cold-blooded ಕೋಮು ಗಲಭೆಯನ್ನ ‘ಆಕಸ್ಮಿಕ’ ಎನ್ನುತ್ತೀರಲ್ಲ ಎಂದು ಗೃಹ ಸಚಿವ ಪರಮೇಶ್ವರ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಾಗಮಂಗಲದಲ್ಲಿ ಆಕಸ್ಮಿಕವಾಗಿ ಕಲ್ಲು ತೂರಿದ್ದಾರೆ ಎಂದ ಗೃಹ ಸಚಿವ ಹೇಳಿಕೆಯನ್ನ ತಮ್ಮ X ಖಾತೆಯಲ್ಲಿ ಖಂಡಿಸಿದ್ದಾರೆ. ನಿಮ್ಮ ಸರ್ಕಾರಕ್ಕೆ ಮುಸ್ಲಿಂ ಮತಾಂಧರ ಮೇಲೆ ಯಾಕಿಷ್ಟು ವ್ಯಾಮೋಹ ಎಂದು ಪ್ರಶ್ನಿಸಿದ್ದಾರೆ. ಮತಾಂಧರು ಆಕಸ್ಮಿಕವಾಗಿ ಕಲ್ಲು ಎಸೆದರಾ? ಮತಾಂಧರು ಆಕಸ್ಮಿಕವಾಗಿ ಚಪ್ಪಲಿ ಎಸೆದಾರಾ? ಮತಾಂಧರು ಆಕಸ್ಮಿಕವಾಗಿ ವಾಹನಗಳಿಗೆ ಬೆಂಕಿ ಹಚ್ಚಿದರಾ? ಮತಾಂಧರು ಆಕಸ್ಮಿಕವಾಗಿ…

Read More

ನಾಗಮಂಗಲ ಗಲಭೆ ಪ್ರಕರಣ: ಕಲ್ಲು ತೂರಾಟ ಸಂಭವಿಸಿದ್ದು ಸಣ್ಣ ಘಟನೆ- ಗೃಹ ಸಚಿವ ಪರಮೇಶ್ವರ್‌ ಲಘು ಹೇಳಿಕೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆಯ ಮೇಲೆ ಮುಸ್ಲಿಮರು ಕಲ್ಲು ತೂರಿದ ಬಳಿಕ ಸ್ಫೋಟಗೊಂಡ ಗಲಭೆಯನ್ನು ಗೃಹ ಸಚಿವ ಜಿ.ಪರಮೇಶ್ವರ್‌ ಕೋಮುಗಲಭೆಯಲ್ಲ ಸಣ್ಣ ಘಟನೆ ಎಂದು ಬಣ್ಣಿಸಿ ಮತ್ತೆ ಬೇಜವಾಬ್ದಾರಿ ಮೆರೆದಿದ್ದಾರೆ.ಕೋಮು ಗಲಭೆಯಾಗಿಲ್ಲ, ಆಕಸ್ಮಿಕ ಘಟನೆ ನಡೆದಿದೆ. ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಆಗಿದೆ. ಅದು ಕೋಮು ಗಲಭೆ ಅಲ್ಲ, ಆಕಸ್ಮಿಕವಾಗಿ ನಡೆದಿರುವ ಘಟನೆ. ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡುವಾಗ ಹೇಳಿದ್ದಾರೆ. ಗಲಾಟೆ ವೇಳೆ ಬೈಕ್​ಗಳು,…

Read More

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಅಂಗಡಿಗಳಿಗೆ ಬೆಂಕಿ ಹಚ್ಚಿದ ಅನ್ಯಕೋಮಿನ ಯುವಕರು..!

ಮಂಡ್ಯ : ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮೂಲಗಳ ಪ್ರಕಾರ, ಕೆಲವು ಯುವಕರು ಗಣಪತಿ ವಿಗ್ರಹ ವಿಸರ್ಜನ ಮೆರವಣಿಗೆ ನಡೆಸುತ್ತಿದ್ದರು ಮತ್ತು ಅವರು ಪಟ್ಟಣದ ದರ್ಗಾ ಬಳಿ ಹಾದು ಹೋಗುತ್ತಿದ್ದಾಗ, ಕೆಲವು ಕಿಡಿಗೇಡಿಗಳು ಅವರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು, ಇದು ನಂತರ ಘರ್ಷಣೆಗೆ ಕಾರಣವಾಯಿತು. ಈ ಪ್ರದೇಶದಲ್ಲಿ ಪೊಲೀಸರು ನಿರ್ಬಂಧ ಹೇರಿದ್ದು, ಕಟ್ಟೆಚ್ಚರ ವಹಿಸಿದ್ದಾರೆ….

Read More

ಮಂಗಳೂರು : ತಾಯಿಯನ್ನು ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು:ಮಂಗಳೂರಿನ ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಆಯುಕ್ತರು ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ.ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ…

Read More

ಮಣಿಪಾಲ: ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಅರೆಸ್ಟ್..!

ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಬಂದಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಸ್ಥಳೀಯ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಸೆ.1ರಂದು ನಸುಕಿನ ವೇಳೆ ವಸತಿ ನಿಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಯೊಬ್ಬಳ ಕೈ ಎಳೆದು ಕಿರುಕುಳ ನೀಡಿ ಪರಾರಿಯಾಗಿದ್ದನು….

Read More

ಪುತ್ತೂರು : ಏಕಾಏಕಿ ಚಲಿಸುತ್ತಿದ್ದ ಲಾರಿಗೆ ಬೆಂಕಿ….!

ಪುತ್ತೂರು :  ಚಲಿಸುತ್ತಿದ್ದ ಮಿನಿ ಲಾರಿಯೊಂದು  ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ. ಇದೇ ರಸ್ತೆಯಲ್ಲಿ ಬರುತ್ತಿದ್ದ ಅಂಬ್ಯುಲೆನ್ಸ್ ಚಾಲಕ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಅಂಬ್ಯುಲೆನ್ಸ್ ನಿಲ್ಲಿಸಿ ಸೈರನ್ ಹಾಕಿ ವಾಹನ ಸವಾರರಿಗೆ ಎಚ್ಚರಿಕೆಯಿಂದ ಚಲಿಸುವಂತೆ ಸೂಚನೆ…

Read More

‘Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ- ದೂರು ದಾಖಲು

ಮಂಗಳೂರು : ಆರ್ಟಿಪಿಷಿಯಲ್ ಇಂಟಿಲಿಜೆನ್ಸ್ ಮೂಲಕ ಹಿಂದೂ ದೇವರ ಪೋಟೋಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಅದನ್ನು ಸಾಮಾಜಿಕ ಜಾಲತಾಣ ಫೆಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ Fact Vid ಫೇಸ್ಬುಕ್ ಪೇಜ್ ವಿರುದ್ದ ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ…

Read More