admin

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮ

ಧರ್ಮಸ್ಥಳದ ಸಮೀಪವಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮವು ಜರುಗಲಿದ್ದು, ವಾಟ್ಸಪ್ ಮೂಲಕ ಗೂಗಲ್ ಫಾರಂ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 15 ರಿಂದ 24 ರವರೆಗೆ 10 ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತರಬೇತಿ, 21 ರಿಂದ 30 ರವರೆಗೆ ರಬ್ಬರ್ ಟ್ಯಾಪಿಂಗ್ ತರಬೇತಿ, ನವೆಂಬರ್ 6 ರಿಂದ ಡಿಸೆಂಬರ್ 5 ರವರೆಗೆ ಕಂಪ್ಯೂಟರ್‌ ಅಕೌಂಟಿಂಗ್, ನವೆಂಬರ್ 11 ರಿಂದ 20 ರವರೆಗೆ ಜೇನು ಕೃಷಿ…

Read More

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಮೃತ ದುರ್ದೈವಿ.ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೃತದೇಹವನ್ನು…

Read More

ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ. ಕಿರಣ್ ಡಿಸೋಜ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಅತಿಥಿ ಬಾರ್ ಬಳಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ. ಅಲ್ಲಿಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, 10 ಗ್ರಾಂ ತೂಕದ 30,000 ರೂ. ಮೌಲ್ಯದ ಎಂಡಿಎಂಎ, ಸ್ಕೂಟರ್ ಮತ್ತು ಮೊಬೈಲ್ ಫೋನ್‌ಅನ್ನು…

Read More

ಮಂಗಳೂರು: ಪ್ರಯಾಣಿಕರ ಕಣ್ಮುಂದೆಯೇ ಖಾಸಗಿ ಬಸ್ ಸಿಬ್ಬಂದಿಗಳ ಮಾರಾಮಾರಿ..!

ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ್ದಾರೆ. ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಪರಸ್ಪರ ಬಡಿದಾಡಿ ಕೊಂಡಿದ್ದಾರೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಖಾಸಗಿ ಬಸ್ ಸಿಬ್ಬಂದಿಗಳ ಅಟ್ಟಹಾಸ ಮಿತಿಮೀರಿದ್ದು ಸಭ್ಯ ಪ್ರಯಾಣಿಕರು ಓಡಾಡಲು ಹಿಂಜರಿಯುತ್ತಿದ್ದಾರೆ. ಪೊಲೀಸರು, ಆರ್ ಟಿ ಒ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಖಾಸಗಿ ಬಸ್…

Read More

ಮಂಗಳೂರು : ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆಗೆ ಯತ್ನ- ಇಬ್ಬರು ಅರೆಸ್ಟ್

ಮಂಗಳೂರು: ನಗರದ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆತ್ನಿಸಿದ ಆರೋಪದಲ್ಲಿ ಬರ್ಕೆ ಠಾಣಾ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ. ಎನ್ಎಸ್‌ಯುಐ ಕಾರ್ಯಕರ್ತ ತನುಷ್ ಶೆಟ್ಟಿ ಹಾಗೂ ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತ ಆರೋಪಿಗಳು. ಬಂಧಿತ ತನುಷ್ ಶೆಟ್ಟಿ ಈ ಬಾರಿ ಎಂಪಿ ಚುನಾವಣೆ ವೇಳೆ ನೋಟಾ ಕ್ಯಾಂಪೇನ್ ನಡೆಸಿದ್ದನು. ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣ ಕಡೆಯಿಂದ ಯುವಕರಿದ್ದ ಕಾರನ್ನು ಓವರ್ ಟೇಕ್ ತಮ್ಮ ಆಡಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದರು…

Read More

‘ಸಿದ್ದರಾಮಯ್ಯ ಸರ್ಕಾರ’ಕ್ಕೆ ಮತ್ತೊಂದು ಕಾನೂನು ಸಂಕಷ್ಟ: ‘ಲೋಕಾಯುಕ್ತ’ಕ್ಕೆ ಸಲ್ಲಿಕೆಯಾಯ್ತು ದೂರು

ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ ಜಮೀನನ್ನೇ ಬೇರೆಯವರ ಹೆಸರಲ್ಲಿ ಪರಿಗಣಿಸಿ ಪರಿಹಾರ ವಿತರಿಸಿರುವ ಭಾರೀ ಅಕ್ರಮ ಆರೋಪ ಕುರಿತಂತೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. “ಸಿಟಿಜನ್ ರೈಟ್ಸ್ ಫೌಂಡೇಷನ್” ಪರವಾಗಿ ಅಧ್ಯಕ್ಷ ಕೆ.ಎ.ಪಾಲ್ ನೀಡಿರುವ ಈ ದೂರು, ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ್ ಸಹಿತ ಹಲವರಿಗೆ ಉರುಳಾಗುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಏನಿದು ಆರೋಪ? ಬೆಂಗಳೂರು ಗ್ರಾಮಾಂತರ…

Read More

ದಿಗ್ಗಜ ಉದ್ಯಮಿ ರತನ್ ಟಾಟಾಗೆ `ಭಾರತ ರತ್ನ’ : ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಅಂಗೀಕಾರ

ಮುಂಬೈ : ತಡರಾತ್ರಿ ನಿಧನರಾಗಿರುವ ರತನ್ ಟಾಟಾ ಅವರಿಗೆ ಮರಣೋತ್ತರವಾಗಿ `ಭಾರತ ರತ್ನ’ ನೀಡುವ ಕುರಿತು ಮಹಾರಾಷ್ಟ್ರ ಸಚಿವ ಸಂಪುಟ ಇಂದು ನಿರ್ಣಯವನ್ನು ಅಂಗೀಕರಿಸಿದೆ. ರತನ್ ಟಾಟಾ ಅವರಿಗೆ ಭಾರತ ರತ್ನ ನೀಡುವ ಕುರಿತು ಮಹಾರಾಷ್ಟ್ರ ಸಚಿವ ಸಂಪುಟ ಇಂದು ನಿರ್ಣಯವನ್ನು ಅಂಗೀಕರಿಸಿದೆ. ಮಹಾರಾಷ್ಟ್ರ ಸಚಿವ ಸಂಪುಟದಲ್ಲಿಯೂ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಶಿಂಧೆ ಗುಂಪಿನ ನಾಯಕ ರಾಹುಲ್ ಕನಾಲ್ ಈ ಕುರಿತು ಆಗ್ರಹಿಸಿದ್ದರು. ರಾಹುಲ್ ಕನಾಲ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ…

Read More

ಪಡುಬಿದ್ರಿ: ಖಾಸಗಿ ಬಸ್ ಡಿಕ್ಕಿ – ಪತಿ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ

ಪಡುಬಿದ್ರಿ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವರ್ ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ ಮಧ್ಯೆ ಮೂಳೂರಿನಲ್ಲಿ…

Read More

ಬೆಳ್ತಂಗಡಿ: ವ್ಯಕ್ತಿಯಿಂದ ATM ಕಾರ್ಡ್ ಕಸಿದುಕೊಂಡು ಹಣ ಡ್ರಾ ಮಾಡಿಕೊಂಡ ಅಪರಿಚಿತರು..!

ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಎಂಬವರು ಗೇರುಕಟ್ಟೆ ಕೆನರಾ ಬ್ಯಾಂಕಿನ ಎ.ಟಿ.ಎಂ ನಲ್ಲಿ ಹಣ ತೆಗೆಯಲೆಂದು ಹೋಗಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಎ.ಟಿ.ಎಂ ಒಳಗೆ ಬಂದು ಅಬೂಬಕ್ಕರ್ ಅವರಿಗೆ ಸಹಾಯ ಮಾಡಲು ಮುಂದಾಗುತ್ತಾರೆ. ಅಬೂಬಕ್ಕರ್ ಅವರು ಸಹಾಯ ಅಗತ್ಯವಿಲ್ಲ ಎಂದು ಹೇಳಿದರೂ ಅಪರಿಚಿತರು ಅಲ್ಲಿ ಅವರೊಂದಿಗೆ ಇದ್ದರು ಎನ್ನಲಾಗಿದೆ….

Read More

ರತನ್ ಟಾಟಾ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಭಾರತ ಕಂಡ ಶ್ರೇಷ್ಟ ಕೈಗಾರಿಕೋದ್ಯಮಿ, ಕಲಿಯುಗದ ಕರ್ಣ ಅಂತಾನೇ ಕರೆಸಿಕೊಳ್ಳುತ್ತಿದ್ದ ಟಾಟಾ ಸನ್ಸ್‌ನ ಗೌರವ ಅಧ್ಯಕ್ಷ ರತನ್ ಟಾಟಾ ನಮ್ಮನ್ನಗಲಿರುವುದು ತೀವ್ರ ದುಃಖ ತಂದಿದೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಲ್ಮಾನ್ ಖಾನ್, ಗೌತಮ್ ಅದಾನಿ, ಆನಂದ ಮಹೀಂದ್ರಾ, ಗೂಗಲ್ ಸಿಇಓ ಸುಂದರ್ ಪಿಚ್ಛೈ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಪ್ರಧಾನಿ ಮೋದಿ, ‘ರತನ್ ಟಾಟಾ ದೂರದೃಷ್ಟಿಯ ಉದ್ಯಮಿ. ಸಹಾನುಭೂತಿಯುಳ್ಳ ಆತ್ಮ ಮತ್ತು ಅಸಾಧಾರಣ…

Read More