ಪುತ್ತೂರು: ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ – ಬ್ಯಾಂಕ್ ಸಿಬ್ಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು
ಪುತ್ತೂರು:ಬಲ್ನಾಡು ಉಜಿರುಪಾದೆಯಲ್ಲಿ ಸಾಲ ಮರುಪಾವ ತಿಗೆ ಸಂಬಂಧಿಸಿ ಮನೆಗೆ ತೆರಳಿದ್ದ ಬ್ಯಾಂಕ್ ಸಿಬಂದಿಗಳಿಗೆ ಪಿಸ್ತೂಲ್ ತೋರಿಸಿಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿದೂರು ದಾಖಲಾಗಿದ್ದು, ಬ್ಯಾಂಕ್ ಸಿಬಂದಿ ವಿರುದ್ಧ ಮನೆಯಲ್ಲಿದ್ದ ಮಹಿಳೆ ಮಾನಭಂಗಕ್ಕೆ ಯತ್ನಿಸಿರುವ ದೂರು ನೀಡಿದ್ದಾರೆ. ಕಾರಿನಲ್ಲಿ ಬಂದ ಅಪರಿಚಿತರು ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಸಾಲ ತೀರಿಸಲು ಸಾಧ್ಯವಿಲ್ಲದಿದ್ದರೆ ನಮ್ಮೊಂದಿಗೆ ಬನ್ನಿ ಎಂದು ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ, ಈ ಬಗ್ಗೆ ದೂರು ನೀಡಿದರೆ ನೀವು ಪಿಸ್ತೂಲ್ ತೋರಿಸಿ ಬೆದರಿಸಿದ್ದೀರೆಂದು ನಿಮ್ಮ ವಿರುದ್ಧವೇ ದೂರು ನೀಡಿ ನಿಮ್ಮನ್ನು ಜೈಲಿಗೆ ಹಾಕಿಸುತ್ತೇವೆ…

