admin

ಉಪ್ಪಿನಂಗಡಿ : ಮೊಬೈಲ್ ನಲ್ಲಿ ಹೆಚ್ಚು ಮಾತಾಡ್ಬೇಡ ಎಂದು ಬುದ್ಧಿ ಹೇಳಿದ ತಾಯಿ : ಮನನೊಂದು ಮಗಳು ನೇಣಿಗೆ ಶರಣು

ಉಪ್ಪಿನಂಗಡಿ :ಮೊಬೈಲ್‌ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿಯ ಮೇಲೆ ಮುನಿಸಿಕೊಂಡ ಬಾಲಕಿ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ರಾಜ್ಯದ ಕುಟುಂಬದ ಬಾಲಕಿ ನೀಲಮ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾರ್ಖಂಡ್‌ನ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್‌ನ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ಎಂಬವರು ತನ್ನ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಕೊಂಬೆಟ್ಟಿ ಮಾರು…

Read More

ಅದ್ದೂರಿಯಾಗಿ ನಡೆದ ನಾಯಿಲ ಗದ್ದೆಯಲ್ಲಿ ಕೇಸರದ ಕಂಡೊಡು ಗೊಬ್ಬುದ ಕೂಟ

ಬಂಟ್ವಾಳ: ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇದರ ನಾಯಿಲ ಗದ್ದೆಯಲ್ಲಿ ಕೇಸರದ ಕಂಡೊಡು ಗೊಬ್ಬುದ ಕೂಟ ವನ್ನು 18.08.24 ರ ಆದಿತ್ಯವಾರ ಆಯೋಜಿಸಲಾಯಿತು. ಇದರ ಉದ್ಘಾಟನಾ ಸಮಾರಂಭದಲ್ಲಿ ರಾಮ್ ಗಣೇಶ್ ಮಾಲಕರಾದ ಶ್ರೀ ಉಮೇಶ್ ನೆಲ್ಲಿಗುಡ್ಡೆ ಸಭಾಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಪ್ರವೀಣ್ ಸ್ವಾಮೀಜಿ ಮಾರುತಿನಗರ, ಲೋಕಸಭಾ ಸದಸ್ಯ ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಚಿವ ಶ್ರೀ ರಮನಾಥ ರೈ , ದಾಸ್ ಪ್ರಮೋಷನ್ ಆಡಳಿತ ನಿರ್ದೇಶಕರು ಲ|| ಅನಿಲ್ ದಾಸ್…

Read More

ಮಂಗಳೂರಿನಲ್ಲಿ ವಿದ್ಯಾರ್ಥಿಗನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರಿನಲ್ಲಿ ಅಮಾನವೀಯ ಕೃತ್ಯವೊಂದುನ ಡೆದಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಅಪಹರಿಸಿ ಅರೆನಗ್ನಗೊಳಿಸಿ ಸಿಗರೇಟ್ನಿಂದ ಸುಟ್ಟುಹಿಗ್ಗಾಮುಗ್ಗಾ ಹಲ್ಲೆನಡೆಸಿರುವಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಮಹಾಕಾಳಿ ಪಡ್ಡು ಎಂಬಲ್ಲಿ ಮಂಗಳೂರಿನ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ . ಫುಟ್ಬಾಲ್ ಪಂದ್ಯದ ವೇಳೆ ಗಲಾಟೆ ಶುರುವಾಗಿದ್ದು , ಬಳಿಕ ಒಂದು ಕಾಲೇಜಿನ ವಿದ್ಯಾರ್ಥಿಗಳನ್ನು ಅಪಹರಿಸಿದ ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳು ಅರೆನಗ್ನ ಮಾಡಿ ಸಿಗರೇಟ್ ಗಳಿಂದು ಸುಟ್ಟು ಹಲ್ಲೆ ಮಾಡಿದ್ದಾರೆ . ದಿಯಾನ್, ಅನ್ನೈ, ತಸ್ಮಿನ್ಸಲ್ಮಾನ್,…

Read More

ಉಡುಪಿ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆ..! ಮದುವೆ ರದ್ದು

ಉಡುಪಿ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ…

Read More

ಮಂಗಳೂರಿನ ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಗಲಾಟೆ: ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ..!

ಮಂಗಳೂರು: ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಸಂಬಂಧ 9 ಜನರ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಹರು ಮೈದಾನಿನಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ಆಗಸ್ಟ್ 14 ಆಯೋಜಿಸಿದ್ದ ಫುಟ್ ಬಾಲ್ ಪಂದ್ಯಾಟ ವೇಳೆ ವಿದ್ಯಾರ್ಥಿ ಗುಂಪುಗಳ ಮಧ್ಯೆ ಉಂಟಾದ ಮತಭೇದ ಇದಕ್ಕೆ ಕಾರಣವೆಂದು ಶಂಕಿಸಲಾಗಿದೆ. ಸಂತ ಅಲೋಸಿಯಸ್ ಕಾಲೇಜು ಮತ್ತು ಯೆನಪೋಯಾ…

Read More

ತ್ರಿವಳಿ ತಲಾಖ್ ನಿಂದ ಮುಸ್ಲಿಂ ಮಹಿಳೆಯರ ಸ್ಥಿತಿ ಶೋಚನೀಯ: ಸುಪ್ರೀಂ ಕೋರ್ಟ್ ಗೆ ಕೇಂದ್ರದ ಮಾಹಿತಿ 

ನವದೆಹಲಿ: ತ್ರಿವಳಿ ತಲಾಖ್ ನಿಂದ ಮುಸ್ಲಿಂ ಮಹಿಳೆಯರ ಸ್ಥಿತಿ ಶೋಚನೀಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ. ವಿವಾಹದ ದೃಷ್ಟಿಯಿಂದ ಸಾಮಾಜಿಕವಾಗಿಯೂ ತ್ರಿವಳಿ ತಲಾಖ್ ಮಾರಕ ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ. 2017 ರಲ್ಲಿ ಕೆಲವು ಮುಸ್ಲಿಂ ಸಮುದಾಯಗಳಲ್ಲಿ ಮಾನ್ಯವಾಗಿದ್ದ ಈ ಪದ್ಧತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಆ ಸಮುದಾಯಗಳ ಸದಸ್ಯರಲ್ಲಿ “ಈ ಅಭ್ಯಾಸದಿಂದ ವಿಚ್ಛೇದನಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಸಾಕಷ್ಟು ಪ್ರತಿಬಂಧಕವಾಗಿ ಕೆಲಸ ಮಾಡಿಲ್ಲ” ಎಂದು ಸರ್ಕಾರ ಹೇಳಿದೆ….

Read More

ಬಾಂಗ್ಲಾದಲ್ಲಿ ನಡೆಯುತ್ತಿರುವ ದಂಗೆಯಂತೆಯೇ ಹಿಂಸಾಚಾರ ನಡೆಸಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದ ಐವನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡಿ- ವೇದವ್ಯಾಸ್ ಕಾಮತ್

ಮಂಗಳೂರು: ಬಾಂಗ್ಲಾದಲ್ಲಿ ನಡೆಯುತ್ತಿರುವ ದಂಗೆಯಂತೆಯೇ ರಾಜ್ಯದಲ್ಲಿಯೂ ಹಿಂಸಾಚಾರ ನಡೆಸಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದಿರುವ ಐವನ್ ಡಿಸೋಜಾರ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಪೊಲೀಸ್ ಇಲಾಖೆಗ ಆಗ್ರಹಿಸಿದ್ದಾರೆ. ಬಾಂಗ್ಲಾದಂತೆಯೇ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿ ಹಿಂದೂ-ಮುಸ್ಲಿಂ ಗಲಭೆ ನಡೆಸುವ ಹುನ್ನಾರವೇನಾದರೂ ಕಾಂಗ್ರೆಸಿನ ತಲೆಯಲ್ಲಿದ್ದರೆ ಕೂಡಲೇ ಅದನ್ನು ತಲೆಯಿಂದ ತೆಗೆದುಹಾಕಿ. ಕಳೆದ 70 ವರ್ಷಗಳಿಂದಲೂ ಕಾಂಗ್ರೆಸ್ ಅದನ್ನೇ ಮಾಡಿದ್ದರೂ ಈಗ ದೇಶಾದ್ಯಂತ ಬಲಿಷ್ಠವಾಗಿರುವ ಭಾರತೀಯ ಜನತಾ ಪಾರ್ಟಿ ಅದಕ್ಕೆ ಆಸ್ಪದ ನೀಡುವುದಿಲ್ಲ. ತಕ್ಕ…

Read More

ಬಾಂಗ್ಲಾ ಪ್ರಧಾನಿಯ ಸ್ಥಿತಿ ರಾಜ್ಯಪಾಲರಿಗೆ ಬರಬಹುದು – ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ

ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮನಪಾದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಎಂಎಲ್‌ಸಿ ಐವನ್ ಡಿಸೋಜ ಅವರು ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೋ ಬ್ಯಾಕ್ ಗವರ್ನರ್, ಗೆಟ್ ಔಟ್ ಗೆಹ್ಲೋಟ್ ಎಂದು ಘೋಷಣೆ ಕೂಗಿದ ಐವನ್ ಡಿಸೋಜ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಾಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಒಂದು ವೇಳೆ ಅದು ಆಗದಿದ್ದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೆ…

Read More

ಮಂಗಳೂರು :ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಶಾಹುಲ್ ಹಮೀದ್, ಅನ್ವರ್, ಕಿಶೋರ್ ಶೆಟ್ಟಿ ಬಂಧಿತರು. ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.19 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ನಗರ ಪಾಲಿಕೆಯ…

Read More

ಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ, ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!

ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ  ಉದ್ರಿಕ್ತಗೊಂಡು ಬಸ್‌ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ  ಜಿಲ್ಲಾ ಕೇಂದ್ರ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು  ಮೆರವಣಿಗೆ ನಡೆಸಿ , ಪಾಲಿಕೆ ಎದುರು ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭ ಪ್ರತಿಭಟನಾಕಾರರು  ರಾಜ್ಯಪಾಲರ ವಿರುದ್ಧ…

Read More