
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿಗೆ ನ್ಯಾಯಾಂಗ ಬಂಧನ
ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ರೈಲ್ವೆ ಹಳಿ ಪಕ್ಕದ ಗುಡ್ಡಗಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆ ಕಳೆದ ಎರಡು ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ ಮನೆಯಲ್ಲಿ…