admin

ದ.ಕ ಜಿಲ್ಲೆಯ ನಾಳೆ (ಆ.01) ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

Read More

ಮೂರು ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆ ಗುಹೆಯಲ್ಲಿ ಪತ್ತೆ..! ಹಾವಿನ ರೀತಿ ವರ್ತನೆ

ಜಾರ್ಖಂಡ್ : 3 ತಿಂಗಳಿಂದ ಕಾಣೆಯಾಗಿದ್ದ ಬಾಲಕಿ ಗುಹೆಯಲ್ಲಿ ಡಿಢೀರ್‌ ಪ್ರತ್ಯಕ್ಷವಾಗಿ, ಹಾವಿನ ರೀತಿಯಲ್ಲಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆಯು ಜಾರ್ಖಂಡ್‍ನಲ್ಲಿ (jharkhand) ನಡೆದಿದೆ. ಕಳೆದ ಮೂರು ತಿಂಗಳಿನಿಂದ ಬಾಲಕಿ ಕಾಣೆಯಾಗಿದ್ದಳು. ಆದರೆ ಇತ್ತೀಚೆಗೆ ಆಕೆ ರಾಣಿದಿಹ್ ಗುಪ್ತಾ ಧಾಮ್ ಗುಹೆಯಲ್ಲಿ ಪತ್ತೆಯಾಗಿದ್ದಾಳೆ. ಆದರೆ ಅವಳು ಹಾವಿನಂತೆ ವರ್ತಿಸುತ್ತಿದ್ದಾಳೆ ಎನ್ನಲಾಗಿದೆ. ಆಕೆ ಹಾವಿನಂತೆ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಏನಿದೆ?ವಿಡಿಯೊದಲ್ಲಿರುವ ಹುಡುಗಿ ಗುಹೆಯ ನೆಲದ ಮೇಲೆ ಹಾವಿನಂತೆ ತೆವಳುತ್ತಾ ತನ್ನ…

Read More

ಮಂಗಳೂರು: ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಿದ್ರೆ FIR – ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಬೋರ್ಡ್ ಆಳವಡಿಸಲಾಗಿದೆ. ಬೋರ್ಡ್ ಜೊತೆ ಕೆಲವು ಕಾನೂನುಗಳು ಅನ್ವಯವಾಗುತ್ತದೆ. ಇಂತಹ ಬೋರ್ಡ್ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕಾಡಿನ ಮಧ್ಯೆ ಹಾಗು ಇತರ ಅಪಾಯಕಾರಿ ಪ್ರದೇಶಗಳಲ್ಲಿ ವಿಡಿಯೋ ಮಾಡುವುದು…

Read More

ಜೀವ, ವೈದ್ಯಕೀಯ ವಿಮಾ ಕಂತುಗಳ ಮೇಲಿನ 18% ಜಿಎಸ್‌ಟಿ ಹಿಂತೆಗೆದುಕೊಳ್ಳಿ: ಸೀತಾರಾಮನ್‌ಗೆ ಗಡ್ಕರಿ ಸಲಹೆ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಜೀವ ಮತ್ತು ವೈದ್ಯಕೀಯ ವಿಮೆ ಮೇಲಿನ 18% ಜಿಎಸ್‌ಟಿಯನ್ನು ಹಿಂಪಡೆಯುವಂತೆ ಕೋರಿದ್ದಾರೆ. ನಾಗ್ಪುರ ವಿಭಾಗೀಯ ಜೀವ ವಿಮಾ ನಿಗಮದ ನೌಕರರ ಸಂಘವು ಎತ್ತಿರುವ ಸಮಸ್ಯೆಗಳಿಗೆ ಗಡ್ಕರಿ ಅವರು ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. “ಜೀವನ ಮತ್ತು ವೈದ್ಯಕೀಯ ವಿಮಾ ಪ್ರೀಮಿಯಂ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯುವ ಸಲಹೆಯನ್ನು ಆದ್ಯತೆಯ ಮೇರೆಗೆ ಪರಿಗಣಿಸಲು ನಿಮ್ಮನ್ನು ವಿನಂತಿಸುತ್ತಿರುವೆ. ಏಕೆಂದರೆ ಇದು ಹಿರಿಯ ನಾಗರಿಕರಿಗೆ…

Read More

BIG UPDATE : ಕೇರಳ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 160ಕ್ಕೆ ಏರಿಕೆ : ಮನೆಯೊಳಗೆ ಸೋಫಾದ ಮೇಲೆ ಕುಳಿತಿದ್ದ ಮೂರು ಶವಗಳು ಪತ್ತೆ!

ವಯನಾಡ್: ವಯನಾಡಿನ ಮುಂಡಕ್ಕೈ ಮತ್ತು ಕಬ್ಬಿನ ಪ್ರದೇಶಗಳಲ್ಲಿ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಮುಂಡಕ್ಕೈ ಪ್ರದೇಶದಲ್ಲಿ ಇಂದು ಮುಂಜಾನೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಇದು ರಕ್ಷಣಾ ಕಾರ್ಯಕರ್ತರಿಗೆ ನಿನ್ನೆ ತಲುಪಲು ಕಷ್ಟಕರವಾಗಿತ್ತು. ಇಲ್ಲಿಯವರೆಗೆ, 160 ಸಾವುಗಳು ಅಧಿಕೃತವಾಗಿ ದೃಢಪಟ್ಟಿವೆ. ಬೆಳಿಗ್ಗೆ ನಡೆಸಿದ ಶೋಧದಲ್ಲಿ ಇನ್ನೂ ಐದು ಶವಗಳು ಪತ್ತೆಯಾಗಿವೆ. ಮುಂಡಕ್ಕೈನ ಮನೆಯೊಂದರಲ್ಲಿ ಸೋಫಾದ ಮೇಲೆ ಕುಳಿತಿದ್ದ ಮೂರು ಶವಗಳು ಪತ್ತೆಯಾಗಿವೆ ಎಂದು ಸ್ವಯಂಸೇವಕರು ತಿಳಿಸಿದ್ದಾರೆ. ಮನೆ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಶವಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ದೊಡ್ಡ ಕತ್ತರಿಸುವ ಯಂತ್ರಗಳು…

Read More

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು- ಆಸ್ಪತ್ರೆಯ ಒಳಗೆ ಬಸ್ ನುಗ್ಗಿಸಿದ ಚಾಲಕ, ನಿರ್ವಾಹಕ..!

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಏನನ್ನೂ ಯೋಚಿಸದೆ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. 13ಎಫ್ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದೆ. ಆಕೆಗೆ ಹೃದಯಾಘಾತವಾಗುವ ಲಕ್ಷಣಗಳು ಕಂಡುಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಗಜೇಂದ್ರ ಕುಂದರ್ ಹಾಗೂ ನಿರ್ವಾಹಕ ಮಹೇಶ್ ಪೂಜಾರಿ…

Read More

ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು

ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರತಿ ತಿಂಗಳ ಮೊದಲ ಭಾನುವಾರದಂದು ಠಾಣೆಗೆ ಹಾಜರಾಗಿ ಸಹಿ ಮಾಡಬೇಕು, ವಿಚಾರಣೆ ಮುಗಿಯುವವರೆಗೂ ದೇಶಬಿಟ್ಟು ಹೋಗಬಾರದು, ಬಿಡುಗಡೆ ಬಳಿಕ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಜೊತೆಗೆ ಮುಂದೆ ಇಂತಹದ್ದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು…

Read More

ವಾಹನ ಸವಾರರೇ ಗಮನಿಸಿ : ರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿವೆ ಈ ಹೊಸ ನಿಯಮಗಳು!

 ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ…

Read More

ಭಾರೀ ಮಳೆಯ ಹಿನ್ನಲೆ ದ.ಕ ಜಿಲ್ಲೆಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಅಂದರೆ ಜು.31ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಅದರಂತೆ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ & ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ನಾಳೆ ಹವಾಮಾನ ಇಲಾಖೆ ರೆಡ್‌ಅಲರ್ಟ್‌ ಘೋಷಣೆ ಮಾಡಿರುವುದರಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.

Read More

ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಾರಿ ಮಳೆಯಾಗಲಿದ್ದು, ಗಾಳಿ 30 – 40 ಕಿಲೋ ಮೀಟರ್ ಬೀಸಲಿದೆ ಎಂದು ಹವಮಾನ…

Read More