admin

ವಿವಾದ : ಶಿಕ್ಷಣ ಇಲಾಖೆಯ ಪ್ರಶಸ್ತಿ ಪತ್ರದಲ್ಲಿ `ಯೇಸು ಕ್ರಿಸ್ತ’ ಹಾಗೂ `ಮೇರಿ’ ಫೋಟೋ!

ಶಿಕ್ಷಣ ಇಲಾಖೆಯು ಕ್ರೀಡಾ ಕೂಟದ ಪ್ರಶಸ್ತಿ ಪತ್ರದಲ್ಲಿ ಕ್ರೈಸ್ತ ಧರ್ಮದ ಆಧಾರಕರ ಚಿತ್ರವನ್ನು ಬಳಸುವ ಮೂಲಕ ಇದೀಗ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವಿತರಿಸಲಾದ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಪ್ರಶಸ್ತಿ ಪತ್ರದಲ್ಲಿ ಕ್ರೈಸ್ತ ಧರ್ಮದ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋಗಳನ್ನು ಮುದ್ರಿಸಲಾಗಿದ್ದು, ಇದು ಹಿಂದೂ ವಿರೋಧಿ ನಡೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಕಿಡಿ ಶಾಲೆಗಳ…

Read More

ನಡುರಾತ್ರಿ ಸೇತುವೆಯಿಂದ ಕೆಳಗೆ ಹಾರಿದ ಕಾರು..! ಮಕ್ಕಳು ಸೇರಿ ಆರು ಮಂದಿಗೆ  ಗಾಯ

ಶಿವಮೊಗ್ಗ: ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗದ ತಮ್ಮೂರಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಗರದಹಳ್ಳಿ ಅಶೋಕನಗರದ ನಡುವೆ ಸೇತುವೆಯಿಂದ ಕೆಳಗೆ ಚಾನಲ್‌ಗೆ ಕಾರು ಹಾರಿದೆ. ಸೋಮವಾರ ರಾತ್ರಿ 2.30ರ ಹೊತ್ತಿಗೆ ಘಟನೆ ಸಂಭವಿಸಿದೆ. ಚಾಲಕ ಕಾರ್ತಿಕ್‌ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಪ್ರಿಯಕರನೊಂದಿಗೆ ಓಡಿ ಹೋಗಲು 3 ವರ್ಷದ ಮಗಳನ್ನು ಕೊಲೆಗೈದ ತಾಯಿ.!

ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿ 3 ವರ್ಷದ ಬಾಲಕಿಯ ಶವ ಟ್ರೋಲಿ ಬ್ಯಾಗ್‌ನೊಳಗೆ ಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಘಾತಕಾರಿ ಸಂಗತಿ ಏನೆಂದರೆ ತಾಯಿಯೇ ಮಗುವಿನ ಹಂತಕಿ ಆಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮುಜಾಫರ್‌ಪುರದ ನಿವಾಸಿ ಕಾಜಲ್ ಬಂಧಿತ ಆರೋಪಿ ಆಗಿದ್ದಾಳೆ. ಮನೋಜ್ ಕುಮಾರ್ ಮತ್ತು ಕಾಜಲ್ ಕುಮಾರಿ ದಂಪತಿಯ ಮೂರು ವರ್ಷದ ಮಗಳು ಮಿಷ್ಟಿ ಕುಮಾರಿ ತಾಯಿಯಿಂದಲೇ ಕೊಲೆಯಾದ ಮಗು. ಮಗುವಿನ ತಂದೆ ಮನೋಜ್ ಕುಮಾರ್ ಪತ್ನಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆ…

Read More

ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!

ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೇಪು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೇಪು ಗ್ರಾಮದ ಗುತ್ತುದಡ್ಕ ನಿವಾಸಿ ಕೊರಗಪ್ಪ ನಾಯ್ಕರವರ ಪುತ್ರ ನವೀನ್‌ ನಾಯ್ಕ(35) ಎಂದು ಗುರುತಿಸಲಾಗಿದೆ. ನವೀನ್‌ ನಾಯ್ಕರವರು ತೆಂಗಿನಕಾಯಿ ತರಲು ತೋಟಕ್ಕೆ ತೆರಳಿದ ವೇಳೆ ಆಕಸ್ಮಿಕವಾಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

CM ಸಿದ್ದರಾಮಯ್ಯ’ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು : ಬಿ.ವೈ ವಿಜಯೇಂದ್ರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು. ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯ ಯಶಸ್ಸು ಕಂಡು ಕಾಂಗ್ರೆಸ್ ನಾಯಕರು ಗಾಬರಿಗೊಂಡಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದ ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಮುಖ್ಯಮಂತ್ರಿಗಳು ಅಭಿವೃದ್ಧಿ ಕಾರ್ಯಗಳನ್ನು ಕೈಬಿಟ್ಟು ಕಾಲಹರಣ ಮಾಡುತ್ತಿದ್ದಾರೆ. ವಾಲ್ಮೀಕಿ ನಿಗಮದ ಹಗರಣ ಒಪ್ಪಿಕೊಂಡಂತೆ ಮುಡಾ ಹಗರಣವನ್ನೂ ಒಪ್ಪಿಕೊಂಡು ನ್ಯಾಯಾಲಯದ…

Read More

ಕಾರ್ಕಳದಲ್ಲಿ ಗ್ಯಾಂಗ್ ರೇಪ್: ಮತ್ತೋರ್ವ ಆರೋಪಿಯ ಬಂಧನ..!

ಕಾರ್ಕಳದಲ್ಲಿ ಯುವತಿಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕೇಸ್ ಗೆ ಸಂಬಂಧಿಸಿದಂತೆ ಕಾರ್ಕಳ ಠಾಣೆ ಪೊಲೀಸರು  ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಭಯ್ ಎಂದು ಗುರುತಿಸಲಾಗಿದೆ.ಅತ್ಯಾಚಾರಿ ಅಲ್ತಾಫ್ ಗೆ ಡ್ರಗ್ಸ್ ಪೂರೈಕೆ ಮಾಡಿದ ಹಿನ್ನಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಡ್ರಗ್ಸ್ ಬೆರೆಸಿದ ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ.ಇದೀಗ 3ನೇ ಆರೋಪಿ ಅಭಯ್‌ನನ್ನು ಪೊಲೀಸರು ಬಂಧಿಸಿದ್ದು ಹೊಸ ಟ್ವಿಸ್ಟ್…

Read More

ಇನ್ಮುಂದೆ ‘ಆಸ್ತಿ ನೋಂದಣಿ’ಯನ್ನು ಎಲ್ಲಿಯಾದರೂ ಮಾಡಿ : ಸೆ.2 ರಿಂದ ರಾಜ್ಯಾದ್ಯಂತ ‘ಎನಿವೇರ್ ರಿಜಿಸ್ಟ್ರೇಷನ್’ ಜಾರಿ

ಬೆಂಗಳೂರು : ಇನ್ಮುಂದೆ ನೀವು ಆಸ್ತಿ ನೋಂದಣಿಯನ್ನು ಎಲ್ಲಿಯಾದರೂ ಮಾಡಬಹುದು, ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತಿದೆ. ವ್ಯಕ್ತಿ ತನ್ನ ಜಿಲ್ಲಾ ವ್ಯಾಪ್ತಿಯ ಯಾವುದೇ ಉಪನೋಂದಣಿ ಕಚೇರಿಯಲ್ಲಿ ತಮ್ಮ ಆಸ್ತಿ ದಸ್ತಾವೇಜನ್ನು ನೋಂದಾಯಿಸಿಕೊಳ್ಳುವ ವ್ಯವಸ್ಥೆಯೇ ಎನಿವೇರ್ ರಿಜಿಸ್ಟ್ರೇಷನ್ . ಸಬ್ ರಿಜಿಸ್ಟ್ರಾರ್ ಕಚೇರಿಯೆದುರು ಜನರು ಕಾಯುವುದರಿಂದ ಮುಕ್ತಿ ನೀಡಲು ಹಾಗೂ ಕಚೇರಿ ಸಿಬ್ಬಂದಿ ಮೇಲೆ ಕೆಲಸದೊತ್ತಡ ಕಡಿಮೆ ಮಾಡುವ ಉದ್ದೇಶದಿಂದ ಇದನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯಾದ್ಯಂತ…

Read More

ಬಂಟ್ವಾಳ: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ – ಅದೃಷ್ಟವಶಾತ್ ಮನೆಮಂದಿ ಪಾರು

ಬಂಟ್ವಾಳ: ಭಾರೀ ಮಳೆಗೆ ಗುಡ್ಡವೊಂದು ಕುಸಿದು ಮನೆ ಮೇಲೆ ಬಿದ್ದ ಘಟನೆ ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್‌ ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ಕುರುಂಬಳ ನಿವಾಸಿ ಕಲಂದರ್ ಅಲಿ ಎಂಬವರ ಮನೆ ಮೇಲೆ ನಿನ್ನೆ ರಾತ್ರಿ ಸುರಿದ ಮಳೆಗೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದಿದ್ದರು. ಆದರೆ ಅವರೆಲ್ಲರೂ ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ. ಮತ್ತಷ್ಟು ಗುಡ್ಡ ಕುಸಿಯುವ ಭೀತಿಯಿದ್ದು,…

Read More

ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ

 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ…

Read More

ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್‌ಗೆ ಮೂರು ತಿಂಗಳು ಜೈಲು ಶಿಕ್ಷೆ ಆದೇಶಿಸಿದ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ

ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಸಾಮಾನ್ಯ ಜೈಲು ಶಿಕ್ಷೆ ಹಾಗೂ 40,20,000 ರೂ. ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು ತನ್ನಿಂದ 41ಲಕ್ಷ ರೂ. ಹಣ ಪಡೆದು, ಆ ಬಳಿಕ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು 2021ರಲ್ಲಿ ಕೇಸು ದಾಖಲಿಸಿದ್ದರು. ನಟ, ನಿರ್ದೇಶಕ ವೀರೇಂದ್ರ ಶೆಟ್ಟಿಯವರಿಗೆ ಪದ್ಮಜಾ ರಾವ್ ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ…

Read More