ನಟ ದರ್ಶನ್ ‘ರಾಜಾತಿಥ್ಯ’ ಪ್ರಕರಣ: ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿತ್ತು. ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡ ವೈರಲ್ ಆಗಿತ್ತು. ಇದೀಗ ಇದರ ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ….

