admin

ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ‘ಫಿಶ್ ಮಿಲ್’ : ಲಕ್ಷಾಂತರ ವಸ್ತುಗಳು ಬೆಂಕಿಗಾಹುತಿ

ಸುರತ್ಕಲ್: ಇಲ್ಲಿನ ಕೈಗಾರಿಕಾ ವಲಯ(ಎಂಎಸ್‌ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್‌ನಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಯಾರು ಇರಲಿಲ್ಲ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಥೆಂಟಿಕ್ ಓಷನ್ ಟ್ರೆಶರ್ ಕಂಪೆನಿ ಮೀನನ್ನು ಸ್ವಚ್ಚಗೊಳಿಸಿ ಮಾಂಸದ ರೂಪಕ್ಕೆ ಪರಿವರ್ತಿಸಿ 10 ಕೆ.ಜಿ. ಯ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿ. ಈ ಸಂಸ್ಥೆಯ ಕೋಲ್ಡ್ ಸ್ಟೋರ್ ಸೆಕ್ಷನ್ ಹಾಗೂ ಕಟ್ಟಿಂಗ್ ಸೆಕ್ಷನ್‌ಗಳಲ್ಲಿ ದುರಸ್ತಿ…

Read More

BREAKING : ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ – ಭಾರಿ ವಾಹನಗಳ ಸಂಚಾರ ನಿಷೇಧ..!

ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು ವಾಹನ ಸವಾರರು ಎಚ್ಚರಿಕೆವಹಿಸಬೇಕಿದೆ. ಕಳೆದ…

Read More

ಪುತ್ತೂರು: KSRTC ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ..!

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದು ಪೊಲೀಸರು ಬಂದು ಲಿಂಗವನ್ನು ಠಾಣೆಗೆ ಕೊಂಡೊಯ್ದಿದ್ದಾರೆ.

Read More

ಬಜಪೆ: ಫೈನಾನ್ಸ್‌ಗೆ ನುಗ್ಗಿ ಅ್ಯಸಿಡ್ ಹಾಕಿ ಚಿನ್ನಾಭರಣ ಕಳುವಿಗೆ ಯತ್ನ – ಮೂವರ ಬಂಧನ

ಬಜಪೆ: ಬಜಪೆ ಮಾರುಕಟ್ಟೆ ಸಮೀಪದ ಫೈನಾನ್ಸ್‌ಗೆ ನುಗ್ಗಿ ಅಲ್ಲಿದ್ದ ಮಹಿಳೆಯರ ಮೇಲೆ ಆಸಿಡ್ ಹಾಕಿ ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಜಪೆ ಶಾಂತಿಗುಡ್ಡೆ ನಿವಾಸಿ ಪ್ರಿತೇಶ್ (31), ಸುರತ್ಕಲ್ ಕೋಡಿಕೆರೆ ನಿವಾಸಿ ಧನರಾಜ್ (30) ಹಾಗೂ ಬಾಳ ಗ್ರಾಮದ ಕುಂಬಳಕೆರೆ ನಿವಾಸಿ ಕುಸುಮಾಕರ (37) ಎಂದು ಗುರುತಿಸಲಾಗಿದೆ. ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ…

Read More

ಮಂಗಳೂರು: ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ ಉಸ್ತಾದ್‌- ಸಾರ್ವಜನಿಕರಿಂದ ಗೂಸಾ

ಮಂಗಳೂರು :  ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ಸಿನಲ್ಲಿ ಅಪ್ರಾಪ್ತ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು ದುರುಳ ಉಸ್ತಾದ್‌ ಗೆ  ಮಹಿಳೆಯರು ಗೂಸಾ ನೀಡಿ  ತದಕಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿ ಆರೋಪಿ ಉಸ್ತಾದ್  ಪ್ರಯಾಣ ಮಾಡುತ್ತಿದ್ದ. ಈ ವೇಳೆ  ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ್ದಾನೆ . ಮೈ ಕೈಗೆಲ್ಲ ಕೈ ಹಾಕಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾರಂಭಿದ್ದಾನೆ. ಇದನ್ನು ಪಕ್ದಲ್ಲಿದ್ದ ಸಹ ಪ್ರಯಾಣಿಕರು ಗಮನಿಸಿ ಬಾಲಕಿಯ ತಾಯಿಗೆ ಹೇಳಿದ್ದಾರೆ. ಇದರಿಂದ  ರೊಚ್ಚಿಗೆದ್ದ…

Read More

ಉಡುಪಿ: ಸ್ವಂತ ಮಗಳ ಖಾಸಗಿ ವಿಡಿಯೋ ವೈರಲ್‌ ಮಾಡಿದ ತಂದೆ..! ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಗಳು

ಉಡುಪಿ: ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಆಪದ್ಬಾಂಧವ ಆಸಿಫ್‌ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್‌ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್‌ ಗ್ರೋಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್‌…

Read More

ವಾಲ್ಮೀಕಿ ಹಗರಣಕ್ಕೆ ಸ್ಪೋಟಕ ತಿರುವು : ಬೆಂಗಳೂರಿನ ಈ ಬ್ಯಾಂಕಿಗೆ ಕೋಟ್ಯಂತರ ಹಣ ವರ್ಗಾವಣೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ವರ್ಗಾವಣೆ ಪ್ರಕರಣಕ್ಕೆ ಇದೀಗ ಸ್ಪೋಟಕ ಸಿಕ್ಕಿದ್ದು, ನಿಗಮದ ಅಧ್ಯಕ್ಷ ಚಂದ್ರಶೇಖರನ ಆತ್ಮಹತ್ಯೆ ಮಾಡಿ ಕೊಳ್ಳುವ ವೇಳೆ ಕೇವಲ ಐದು ಕೋಟಿ ಇತ್ತು, ಆದರೆ ಉಳಿದ 94 ಕೋಟಿ ಬಗ್ಗೆ ಇದೀಗ ಇಡಿ ಹಾಗೂ ಎಸ್‌ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಹೌದು ವಾಲ್ಮೀಕಿ ನಿಗಮದಲ್ಲಿ ಇದ್ದದ್ದು ಭರ್ತಿ 94 ಕೋಟಿ ಇತ್ತು ಎನ್ನಲಾಗಿದೆ. ನಿಗಮದ ಅಧಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಾಗ ನಿಗಮದಲ್ಲಿ ಇದ್ದಂತದ್ದು 5 ಕೋಟಿ ಮಾತ್ರ…

Read More

‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ

ರಾಜ್ಯ ಸರ್ಕಾರದಿಂದ ಆರು ತಿಂಗಳ ಹಿಂದೆ ಮೃತಪಟ್ಟಂತ ಅಧಿಕಾರಿಯನ್ನೇ ವರ್ಗಾವಣೆ ಮಾಡಿ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಕಳೆದ ಆರು ತಿಂಗಳ ಹಿಂದೆ ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿದ್ದಂತ ಅಶೋಕ ಪುಟಪಾಕ ಅವರು ಮೃತಪಟ್ಟಿದ್ದರು. ಇಂತಹ ಅಧಿಕಾರಿಗಳನ್ನು ಜುಲೈ.9ರಂದು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗಸಭೆಯ ಕಿರಿಯ ಇಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಿದೆ. ಅಂದಹಾಗೇ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಂತ ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ಅಶೋಕ…

Read More

ʻCMʼ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ : ಸಾರ್ವಜನಿಕರು, ರೈತರು ಆಕ್ರೋಶ

ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ರೈತರು, ಸಾರ್ವಜನಿಕರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೌದು, ಕಳೆದ ಬುಧವಾರ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಕಾಂಗ್ರೆಸ್‌ ಕೃತಜ್ಞನತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯಗೆ ರೈತರು, ಆಕ್ಸಿಜನ್‌ ದುರಂತ ಸಂತ್ರಸ್ತರು ಸೇರಿದಂತೆ ಸಾರ್ವಜನಿಕರು ವಿವಿಧ ಬೇಡಿಕೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದ್ದರು. ಚಾಮರಾಜನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣದ ಕಸದ ರಾಶಿಯಲ್ಲಿ ರೈತರು, ಸಾರ್ವಜನಿಕರು ಸಲ್ಲಿಸಿದ್ದ ಮನವಿ ಪತ್ರಗಳು ಪತ್ತೆಯಾಗಿದ್ದು, ರೈತರು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ….

Read More

ಮಂಗಳೂರು: ನಾಲ್ಕು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು – ಆರು ಮಂದಿ ಅರೆಸ್ಟ್

ಮಂಗಳೂರು: ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳವು ಹಾಗೂ ಪಂಪ್‌ವೆಲ್‌ ಕಪಿತಾನಿಯೋ ಬಳಿಯ ಅಂಗಡಿಗಳವು ಪ್ರಕರಣವನ್ನು ಬೇಧಿಸಿದ ಮಂಗಳೂರು ಪೊಲೀಸರು ನಾಲ್ವರನ್ನು ಬಂಧಿಸಿ 10ಲಕ್ಷ ನಗದು ಸೇರಿದಂತೆ 12.50ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರದ ಮಹಮ್ಮದ್ ಸಿಯಾಬ್, ಬಜ್ಪೆಯ ಮಹಮ್ಮದ್ ಅರ್ಫಾಝ್, ಸಫ್ವಾನ್ ಹಾಗೂ ಉತ್ತರಪ್ರದೇಶ ಮೂಲದ ಮಹಮ್ಮದ್ ನಜೀರ್ ಹೌಸಿಲ್ ಖಾನ್ ಮತ್ತು ಇಲಿಯಾಸ್ ಖಾನ್ ಬಂಧಿತ ಆರೋಪಿಗಳು. ಕಳೆದ 2-3 ತಿಂಗಳಿನಿಂದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲ 3ಮನೆಗಳಲ್ಲಿ ಕಳವು ನಡೆದಿತ್ತು. ಪ್ರಕರಣದಲ್ಲಿ…

Read More