ಉಳ್ಳಾಲ: ಶೋಕಿ ಜೀವನಕ್ಕಾಗಿ ತನ್ನ ಮನೆಯಿಂದಲೇ ಚಿನ್ನಾಭರಣ ಕಳವುಗೈದ ಬಾಲಕ..! 5 ಮಂದಿಯ ಬಂಧನ
ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆದರೆ, ಈ ಬಗ್ಗೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಮಾತ್ರ ಮಾಧ್ಯಮಗಳಿಗೆ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಜೂನ್ 8ರ ಬೆಳಗ್ಗೆ 8 ಗಂಟೆಯಿಂದ 16ರ ಮಧ್ಯಾಹ್ನ 12 ಗಂಟೆಯ ನಡುವೆ ಚಿನ್ನಾಭರಣ ಕಳವಾಗಿರುವ ಬಗ್ಗೆ ಉಳ್ಳಾಲ ಠಾಣೆಗೆ…

