admin

ಮಂಗಳೂರು: ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ನೇಮಕ

ಮಂಗಳೂರು : ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದೆ. ಈವರೆಗೆ ಮಂಗಳೂರು ಮನಪಾ ಆಯುಕ್ತರಾಗಿದ್ದ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ರವಿಚಂದ್ರ ನಾಯಕ್‌ರನ್ನು ನೇಮಕ ಮಾಡಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಯತೀಶ್ ಎನ್.‌ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿ‌ಯಾಗಿ‌ ಯತೀಶ್ ಎನ್.‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ ಎಸ್ ಪಿ ರಿಷ್ಯಂತ್ ಸಿ.ಬಿ ಅವರಿಂದ ತೆರವಾದ ಸ್ಥಾನಕ್ಕೆ ಮಂಡ್ಯದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯತೀಶ್ ಅವರನ್ನು ಬುಧವಾರ ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು.

Read More

ನಟ ದರ್ಶನ್ & ಗ್ಯಾಂಗ್ ಗೆ ಜು. 18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾ‍ಧಗಳ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಗೆ ಸದ್ಯಕ್ಕೆ ಬೇಲ್ ಸಿಗುವ ಸಾಧ್ಯತೆ ಬಹಳ…

Read More

2024ರ ಟಿ20 ವಿಶ್ವಕಪ್ ಚಾಂಪಿಯನ್ಸ್ ಜೊತೆ ಮೋದಿ ಸಭೆ

ನವದೆಹಲಿ: ಬಾರ್ಬಡೋಸ್ನಲ್ಲಿ ನಡೆದ ಟಿ 20 ವಿಶ್ವಕಪ್ ಗೆಲುವಿನ ನಂತರ ವಿಜಯಶಾಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಗುರುವಾರ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿವಾಸ 7, ಲೋಕ ಕಲ್ಯಾಣ ಮಾರ್ಗದಲ್ಲಿ ಆತ್ಮೀಯ ಸ್ವಾಗತ ದೊರೆಯಿತು. ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಸಮಯದಲ್ಲಿ ಮೆನ್ ಇನ್ ಬ್ಲೂ ತಂಡವು ‘ಚಾಂಪಿಯನ್ಸ್’ ಎಂದು ಧೈರ್ಯದಿಂದ ಬರೆದ ವಿಶೇಷ ಜರ್ಸಿಯನ್ನು ಧರಿಸಿದ್ದರು. ಕಳೆದ ಶನಿವಾರ ಬ್ರಿಡ್ಜ್ಟೌನ್ನಲ್ಲಿ ನಡೆದ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ಗಳ ಐತಿಹಾಸಿಕ…

Read More

BIG NEWS : ಪ್ರಮಾಣವಚನ ವೇಳೆ ಸಂಸದರು ಇನ್ಮುಂದೆ ಘೋಷಣೆ ಕೂಗುವಂತಿಲ್ಲ : ಸ್ಪೀಕರ್‌ ಆದೇಶ

ನವದೆಹಲಿ : 18 ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ‘ಜೈ ಭೀಮ್, ಜೈ ಮಿಮ್, ಜೈ ತೆಲಂಗಾಣ ಮತ್ತು ಅಂತಿಮವಾಗಿ ‘ಜೈ ಪ್ಯಾಲೆಸ್ಟೈನ್’ ಘೋಷಣೆಗಳನ್ನು ಎತ್ತುವ ಮೂಲಕ ಸದನದಲ್ಲಿ ಹೊಸ ವಿವಾದವನ್ನು ಹುಟ್ಟುಹಾಕಿದರು. ಓವೈಸಿ ಅವರಲ್ಲದೆ, ಇತರ ಅನೇಕ ಸಂಸದರು ಸಂಸತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಅಥವಾ ನಂತರ ಸದನದಲ್ಲಿ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಈ ವಿವಾದದ ನಂತರ, ಈಗ ಲೋಕಸಭಾ…

Read More

ಉಡುಪಿ: ಭೀಕರ ಸುಂಟರ ಗಾಳಿ- ಕಂಗಾಲಾದ ಕರಾವಳಿ ಜನರು..!

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದ ನಡುವೆ ಬಿರುಗಾಳಿ ಬೀಸುತ್ತಿದ್ದು, ಜನಜೀವನ ಅಯೋಮಯವಾಗಿದೆ. ಉಡುಪಿ ಜಿಲ್ಲೆಯ ಅಮವಾಸ್ಯೆಬೈಲಿನಲ್ಲಿ ಭೀಕರ ಸುಂಟರಗಾಳಿ ಬೀಸುತ್ತಿದ್ದು, ಜನರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಈ ನಡುವೆ ಬಿರುಗಾಳಿ ಅಬ್ಬರ ಜೋರಾಗಿದೆ. ಅದರಲ್ಲಿಯೂ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮವಾಸ್ಯೆಬೈಲಿನಲ್ಲಿ ಭಾರಿ ಸುಂಟರಗಾಳಿ ಬೀಸುತ್ತಿದ್ದು, ಗ್ರಾಮದ ಜನತೆ ತತ್ತರಿಸಿಹೋಗಿದ್ದಾರೆ. ಸುಂತರಗಾಳಿಗೆ ಬೃಹತ್ ಮರಗಳು ಧರಾಶಾಹಿಯಾಗಿವೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹಲವು ಮನೆಗಳಿಗೂ ಹಾನಿಯುಂತಾಗಿದೆ. ಸುಂತರಗಾಳಿ ಹೊಡೆಅಕ್ಕೆ…

Read More

ಮಂಗಳೂರು: ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಮನಪಾ ಆದೇಶ

ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ. ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ…

Read More

ಮೂಡಾ ಹಗರಣ: ಸಿಎಂ ಸಿದ್ಧರಾಮಯ್ಯ ವಿರುದ್ಧ ಸಿಟಿಜನ್ ರೈಟ್ಸ್ ದೂರು..!

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣ ಅವರು ರಾಜ್ಯ…

Read More

ಕನ್ನಡಿಗನೇ ಕಟ್ಟಿದ “ಕೂ” ಅಪ್ ಸ್ಥಗಿತ..!

ಹೂಡಿಕೆಗಳನ್ನು ಪಡೆಯುವ ಪ್ರಯತ್ನಗಳು ವಿಫಲವಾದ ನಂತರ, ಕೂ ಸಹ ಸಂಸ್ಥಾಪಕರಾದ ಮಾಯಾಂಕ್ ಬಿದವತ್ಕಾ ಮತ್ತು ಅಪ್ರಮೇಯ ರಾಧಾಕೃಷ್ಣ ಅವರು ಬಹುಭಾಷಾ ಸಾಮಾಜಿಕ ಮಾಧ್ಯಮ ವೇದಿಕೆಯನ್ನು ಮುಚ್ಚಲು ನಿರ್ಧರಿಸಿದ್ದಾರೆ. “ನಮ್ಮ ಕಡೆಯಿಂದ ಅಂತಿಮ ಅಪ್ಡೇಟ್ ಇಲ್ಲಿದೆ. ನಮ್ಮ ಪಾಲುದಾರಿಕೆ ಮಾತುಕತೆಗಳು ವಿಫಲವಾದವು ಮತ್ತು ನಾವು ನಮ್ಮ ಸೇವೆಯನ್ನು (Koo platform) ಸಾರ್ವಜನಿಕರಿಗೆ ರಿಯಾಯಿತಿ ನೀಡುತ್ತೇವೆ. ನಾವು ಅನೇಕ ದೊಡ್ಡ ಇಂಟರ್ನೆಟ್ ಕಂಪನಿಗಳು, ಒಕ್ಕೂಟಗಳು ಮತ್ತು ಮಾಧ್ಯಮ ಸಂಸ್ಥೆಗಳೊಂದಿಗೆ ಪಾಲುದಾರಿಕೆಯನ್ನು ಅನ್ವೇಷಿಸಿದೆವು ಆದರೆ ಮಾತುಕತೆಗಳು ನಾವು ಬಯಸಿದ ಫಲಿತಾಂಶವನ್ನು ನೀಡಲಿಲ್ಲ…

Read More

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಬಲ್ಮಠದಲ್ಲಿ ನಡೆದಿದೆ. ಖಾಸಗಿ ಕಟ್ಟದ ನಿರ್ಮಾಣ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಮಣ್ಣು ತೆರವುಗೊಳಿಸಿ, ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.

Read More