admin

ಹೊಸ ಕ್ರಿಮಿನಲ್ ಕಾನೂನಗಳಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಮಲಪ್ಪುರಂ: ಕೇರಳ ಪೊಲೀಸರು ಹೊಸದಾಗಿ ಜಾರಿಗೆ ತಂದಿರುವ ಭಾರತೀಯ ನ್ಯಾಯ ಸಂಹಿತಾ(Bharatiya Nyaya Sanhita) ಅಡಿಯಲ್ಲಿ ಕರ್ನಾಟಕದ 24 ವರ್ಷದ ಯುವಕನ ವಿರುದ್ಧ ಮೊದಲ ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ. ಕೊಂಡೊಟ್ಟಿ ಪೊಲೀಸ್ ಠಾಣೆ ಬಳಿ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಮಡಿಕೇರಿ ಮೂಲದ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಯುವಕ, ಹೆಲ್ಮೆಟ್ ಧರಿಸದಿದ್ದಕ್ಕಾಗಿ BNS ನ ಸೆಕ್ಷನ್ 281 ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 194D ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಕೊಳತ್ತೂರು ಜಂಕ್ಷನ್‌ನಲ್ಲಿ ಯುವಕ ಮಧ್ಯರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು,…

Read More

“ಎಲ್ಲಾ ಹಿಂದೂಗಳನ್ನ ಹಿಂಸಾತ್ಮಕ ಎಂದು ಕರೆಯೋದು ಸರಿಯಲ್ಲ” : ಲೋಕಸಭೆಯಲ್ಲಿ ‘ರಾಹುಲ್’ ಭಾಷಣಕ್ಕೆ ‘ಪ್ರಧಾನಿ ಮೋದಿ’ ಆಕ್ಷೇಪ

ನವದೆಹಲಿ: ತಮ್ಮನ್ನು ಹಿಂದೂಗಳು ಎಂದು ಕರೆದುಕೊಳ್ಳುವವರು ಹಿಂಸಾಚಾರ, ದ್ವೇಷ ಮತ್ತು ಸುಳ್ಳುಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಲೋಕಸಭೆಯಲ್ಲಿ ಬಿಜೆಪಿಯನ್ನ ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಕೋಲಾಹಲಕ್ಕೆ ಕಾರಣರಾದರು. ರಾಹುಲ್ ಗಾಂಧಿ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಚಿತ್ರಿಸುವುದು ಗಂಭೀರ ವಿಷಯ ಎಂದು ಹೇಳಿದರು. “ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ತುಂಬಾ ಗಂಭೀರವಾಗಿದೆ” ಎಂದು ಪ್ರಧಾನಿ ಮೋದಿ…

Read More

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ದ.ಕ. ಜಿಲ್ಲೆಯಲ್ಲಿ ಪ್ರತಿಭಟನೆ..!

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರ. 80 ರಿಂದ 65% ಕನ್ನಡಿಗರಿಗೆ.ಉದ್ಯೋಗಾವಕಾಶ ಕಲ್ಪಿಸಬೇಕು. ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು. ಡಾಕ್ಟರ್ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಬೇಕು.ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು..ಎಂದು ಸತ್ಯಾಗ್ರಹ ಹಾಗೂ ಹೋರಾಟವನ್ನು ಹಮ್ಮಿಕೊಂಡಿದ್ದು.. ದಕ್ಷಿಣ ಕನ್ನಡ ಜಿಲ್ಲಾ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು. ಪದಾಧಿಕಾರಿಗಳು. ಸದಸ್ಯರು.. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ…

Read More

ಮೊಬೈಲ್‌ ಬಳಕೆದಾರರೇ ಗಮನಿಸಿ : ಇನ್ಮುಂದೆ ʻಸಿಮ್ ಪೋರ್ಟ್ʼ ಮಾಡುವುದು ಸುಲಭವಲ್ಲ!

ನವದೆಹಲಿ : ನೀವೂ ಸಹ ದೀರ್ಘಕಾಲದಿಂದ ಸಿಮ್ ಪೋರ್ಟ್ ಅಥವಾ ನಿಮ್ಮ ಹಳೆಯ ಸಿಮ್ ಕಾರ್ಡ್ ಅನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ಈ ಸುದ್ದಿ ನಿಮಗಾಗಿ ಏಕೆಂದರೆ ಇಂದು ಅಂದರೆ ಜುಲೈ 1 ರಿಂದ, ಸಿಮ್ ಪೋರ್ಟ್ ಪಡೆಯುವುದು ಸುಲಭವಲ್ಲ ಆದರೆ ಅದು ಕಷ್ಟಕರವಾಗಲಿದೆ. ವಾಸ್ತವವಾಗಿ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಸಿಮ್ ನಂಬರ್ ಪೋರ್ಟ್ಗೆ ಸಂಬಂಧಿಸಿದಂತೆ ಇಂದಿನಿಂದ ಹೊಸ ನಿಯಮಗಳನ್ನು ಹೊರಡಿಸಿದೆ. ಈ ಹೊಸ ನಿಯಮಗಳೊಂದಿಗೆ, ಮೊಬೈಲ್ ಫೋನ್ ಸಂಖ್ಯೆಗಳನ್ನು ಒಂದು ನೆಟ್ವರ್ಕ್ನಿಂದ…

Read More

ಉಡುಪಿ: ನೂತನ ಸಂಸದ ಕೋಟ ಶ್ರೀನಿವಾಸ್ ಪೂಜಾರಿಗೆ ಮಾತೃವಿಯೋಗ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್‌ 30 ರಂದು ನಿಧನರಾದರು. ಕೋಟತಟ್ಟು ನಿವಾಸಿಯಾಗಿದ್ದ ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ಉಡುಪಿ, ದಕ್ಷಿಣ ಕನ್ನಡದ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

Read More

ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ

ದೇಶದಲ್ಲಿ ಇಂದಿನಿಂದ ಮೂರು ಕ್ರಿಮಿನಲ್ ಕಾನೂನುಗಳು ಜಾರಿಗೊಳ್ಳುತ್ತಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್​​ಪಿಸಿ (Criminal Procedure Code) ಹಾಗೂ ಇಂಡಿಯನ್​ ಎವಿಡೆನ್ಸ್​ ಆ್ಯಕ್ಟ್​​ಗೆ ಬದಲಿಗೆ ಹೊಸ ಕಾನೂನು ಜಾರಿಗೆ ಬರುತ್ತಿವೆ.ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ 1860ರಲ್ಲಿ ಜಾರಿ ಮಾಡಿದ್ದ ಐಪಿಸಿ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಎಂದು, 1898ರಲ್ಲಿ ಜಾರಿಗೆ ಬಂದಿದ್ದ CrPC ಬದಲಿಗೆ ಭಾರತೀಯ ನಾಗರಿಕ ರಕ್ಷಣಾ ಸಂಹಿತೆ ಎಂದು ಹಾಗೂ 1872ರಲ್ಲಿ ಬಂದಿದ್ದ ಇಂಡಿಯನ್ ಎವಿಡೆನ್ಸ್​ ಆ್ಯಕ್ಟ್​​ ಬದಲಾಗಿ ಭಾರತೀಯ…

Read More

ಕನ್ನಡಿಗರಿಗೆ ಕಡ್ಡಾಯ ಉದ್ಯೋಗ: ನಾಳೆ ರಾಜ್ಯಾದ್ಯಂತ ‘ಕರವೇ’ ಬೃಹತ್ ಪ್ರತಿಭಟನೆ

ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಹೌದು ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ…

Read More

ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ಮುಂದೆ ‘Shawarma’ ಮಾರಾಟ ಮಾಡಲು ಈ ನಿಯಮ ಕಡ್ಡಾಯ..!

ಮಾಧ್ಯಮಗಳಲ್ಲಿ Shawarma ಆಹಾರ ಪದಾರ್ಥವನ್ನು ಸೇವಿಸಿ Food Poisoning ಆಗಿರುವ ಕುರಿತು ವರದಿಗಳು ಪ್ರಕಟವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವಲಯಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಪೊರೇಷನ್ ವ್ಯಾಪ್ತಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ Shawarma ದ ಆಹಾರ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾಗಿರುವ ಒಟ್ಟು 17 ಮಾದರಿಗಳಲ್ಲಿ 9 ಮಾದರಿಗಳು ಸುರಕ್ಷಿತ ಎಂದು ವರದಿಯಾಗಿರುತ್ತವೆ ಹಾಗೂ 08 ಮಾದರಿಗಳಲ್ಲಿ ಬ್ಯಾಕ್ಟಿರಿಯಾ ಮತ್ತು ಈಸ್ಟ್‍ಗಳು ಕಂಡುಬಂದಿರುವುದರಿಂದ ಅಸುರಕ್ಷಿತ…

Read More

ಟಿ20 ವಿಶ್ವಕಪ್; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಪಂದ್ಯ ಮುಗಿದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ವಿರಾಟ್ ಕೊಹ್ಲಿ ತಮ್ಮ ನಿವೃತ್ತಿಯ ಬಗ್ಗೆ ಖಚಿತಪಡಿಸಿದರು. ನಾಯಕ ರೋಹಿತ್ ಶರ್ಮಾ ಅವರೂ ಬಳಿಕ ತನ್ನ ಟಿ20 ನಿವೃತ್ತಿಯನ್ನು ಘೋಷಿಸಿದರು. ಇದು…

Read More

3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೋದಿ ಇಂದು ಮೊದಲ ‘ಮನ್ ಕಿ ಬಾತ್’ : ದೇಶವನ್ನುದ್ದೇಶಿಸಿ ಬೆಳಿಗ್ಗೆ 11 ಗಂಟೆಗೆ ʻನಮೋʼ ಮಾತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜೂನ್ 30 ರ ಇಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೊದಲನೆಯದಾಗಿ, ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿಗೆ ದೇಶದ ಆಡಳಿತವನ್ನು ವಹಿಸಿಕೊಂಡ ನಂತರ, ಪಿಎಂ ಮೋದಿ ಮೊದಲ ಬಾರಿಗೆ ಮಾತನಾಡಲಿದ್ದಾರೆ. ಎರಡನೆಯದಾಗಿ, ಭಾರತವು 17 ವರ್ಷಗಳ ನಂತರ ಶನಿವಾರ ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಿತು ಮತ್ತು ವಿಶ್ವಕಪ್ ಗೆದ್ದಿತು, ಭಾರತದ ಈ ಭವ್ಯ ವಿಜಯದ ನಂತರ, ಇಂದು…

Read More