
ಉಡುಪಿ: ಗರುಡ ಗ್ಯಾಂಗ್ ಸದಸ್ಯ ಕಬೀರ್ ಹುಸೇನ್ ಬಂಧನ ಎತ್ತಿ ಹಿಡಿದ ಹೈಕೋರ್ಟ್
ಗರುಡ ಗ್ಯಾಂಗ್‌ನ ಸಕ್ರೀಯ ಸದಸ್ಯ ಹಾಗೂ ಉಡುಪಿ ಜಿಲ್ಲೆಯಲ್ಲದೇ ನೆರೆಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಹ ತನ್ನ ಅಪರಾಧಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಕುಖ್ಯಾತ ಆರೋಪಿ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46) ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿರುವ ನಡೆಯನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ. ಕಾರ್ಕಳ ನಗರ ಠಾಣಾ ಉಪನಿರೀಕ್ಷಕರು ಜಿಲ್ಲಾ ಎಸ್ಪಿಯವರಿಗೆ ಸಲ್ಲಿಸಿದ ವರದಿಯನ್ನು, ಎಸ್ಪಿ ಅವರು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದ್ದಾರೆ. ಪರಿಶೀಲಿಸಿದ ಅವರು 2025 ರ ಜು.10 ರಂದು ಬಂಧನ ಆದೇಶ ಹೊರಡಿಸಿದ್ದರು….