‘ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತವಾದರೆ ಮಾಲೀಕರೇ ಪರಿಹಾರ ಪಾವತಿಸಬೇಕು’- ಹೈಕೋರ್ಟ್
ಬೆಂಗಳೂರು: ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಅಪಘಾತ ಮಾಡಿದರೆ, ವಾಹನದ ಮಾಲೀಕರೇ ಸಂಬಂಧಪಟ್ಟವರಿಗೆ ಪರಿಹಾರದ ಮೊತ್ತವನ್ನು ಪಾವತಿಸಬೇಕು ಹೊರತಾಗಿ ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಮಾ ಕಂಪನಿಯ ಮೇಲೆ ಹೊಣೆಗಾರಿಕೆ ವಹಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿಯ ತೀರ್ಪು ರದ್ದುಗೊಳಿಸಿದ ನ್ಯಾ. ಹಂಚಾಟೆ ಸಂಜೀವ್‌ಕುಮಾರ್ ಅವರು ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತವಾದರೆ ಮಾಲೀಕರೇ ಪರಿಹಾರ ಕೊಡಬೇಕು ಎಂದು ತೀರ್ಪು ನೀಡಿದ್ದಾರೆ. ಈ ಮೂಲಕ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ನ ಮೇಲ್ಮನವಿಯನ್ನು ಪುಸ್ಕರಿಸಲಾಗಿದೆ. ಅಪಘಾತದಿಂದ…

