
ಸಹಕಾರಕ್ಕೆ ಅಸಹಕಾರ: 3 ಮತಗಳಿಂದ ವಿಧೇಯಕ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ
ಬೆಂಗಳೂರು : ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್‌ನಲ್ಲಿ ತಿರಸ್ಕೃತಗೊಂಡಿದ್ದು, ಸರ್ಕಾರ ಮುಜುಗುರಕ್ಕೆ ಒಳಗಾಗಿದೆ. ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿರುದ್ಧ 26 ಮತಗಳು ಬಂದವು, ಪರ 23 ಮತಗಳು ಬಂದವು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್ನಲ್ಲಿ ತಿರಸ್ಕೃತಗೊಂಡಿದೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಚಾರವಾಗಿ ಸುದೀರ್ಘ, ಚರ್ಚೆಯಾಗಿ ಅಂಗೀಕಾರಗೊಂಡಿತ್ತು. ಇಂದು ಕಾನೂನು ಸಚಿವ ಹೆಚ್ಕೆ ಪಾಟೀಲ್ ಕರ್ನಾಟಕ…