admin

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ) ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆ

ಮಂಗಳೂರು : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ಇದರ 2024-2025ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ, ಜೊತೆ ಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು & ಗಣೇಶ ಮರ್ದೋಳಿ, ಕೋಶಾ ಧಿಕಾರಿ ಸೋಮನಾಥ್ ಸಾಲಿಯಾನ್ ರಾಮನಗರ, ಸಂಘಟನಾ ಕಾರ್ಯದರ್ಶಿ ಸತೀಶ್ ಸಂಪಾಜೆ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೆಂದ್ರ, ಸೇವಾ ದಳಪತಿ ಗಣೇಶ್ ಬೆದ್ರಗುಡ್ಡೆ ಆಯ್ಕೆಗೊಂಡಿದ್ದಾರೆ.

Read More

ವಾಹನ ಸವಾರರೇ ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಎರಡೇ ದಿನ ಬಾಕಿ : ತಪ್ಪದೇ ಈ ಕೆಲಸ ಮಾಡಿಕೊಳ್ಳಿ

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಎರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ…

Read More

ಕರ್ನಾಟಕದ ಐವರು ಸೇರಿ 72 ಸಚಿವರ ಕೇಂದ್ರ ಸಂಪುಟ ಅಸ್ವಿತ್ವಕ್ಕೆ : ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ಪಡೆದಿದ್ದ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ 24 ರಾಜ್ಯಗಳ 72 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು, ಏಳು ಮಹಿಳೆಯರು, 33 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ. ಇಲ್ಲಿದೆ ಕೇಂದ್ರ…

Read More

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿದರು. ಇಂದಿನಿಂದ ದೇಶದಲ್ಲಿ ಶುರುವಾಯ್ತು ನವೋದಯ.. ತ್ರಿವಿಕ್ರಮನಂತೆ ಮೂರನೇ ಬಾರಿಗೆ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ . ಇನ್ನು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕ್ಯಾಬಿನೆಟ್​ ಮಂತ್ರಿಯಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರನ ಹೆಸರಿನಲ್ಲಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.

Read More

BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ‘ಜೆ.ಪಿ ನಡ್ಡಾ’ ರಾಜೀನಾಮೆ

ನವದೆಹಲಿ: ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಇಂದು ಬರಲಿದೆ. ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಹೊತ್ತಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಯಾರನ್ನು ನೇಮಕ ಮಾಡುತ್ತಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ. ನವದೆಹಲಿ: ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಇದೇ…

Read More

ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಜೂ.12 ಕ್ಕೆ ಅಂತಿಮ ಗಡುವು

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಮೂರು ದಿನಗಳಲ್ಲಿ ಮುಕ್ತಾಯವಾಗಲಿದೆ. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ…

Read More

ಕಿಸಾನ್‌ ಸಮ್ಮಾನ್‌ ನಿಧಿ 2,000 ರೂ. ಹೆಚ್ಚಳ: ಇನ್ನು ಸಿಗೋದು 8,000 ರೂ

ರಾಜಸ್ಥಾನದ ರೈತರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ರೈತರಿಗೆ ನೀಡುವ 6 ಸಾವಿರ ರೂ.ವನ್ನು ರಾಜ್ಯ ಸರ್ಕಾರವು8  ಸಾವಿರ ರೂ.ಗೆ ಏರಿಕೆ ಮಾಡಿದೆ. ಈ ಮೂಲಕ ರಾಜ್ಯದ ರೈತರು ವರ್ಷಕ್ಕೆ 8 ಸಾವಿರ ರೂ. ಪಡೆಯಲಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮಾ ಘೋಷಣೆ ಮಾಡಿದ್ದಾರೆ.

Read More

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ ರಜನಿಕಾಂತ್

ನವದೆಹಲಿ:ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ರಜಿನಿಕಾಂತ್ ಚೆನ್ನೈನಿಂದ ನವದೆಹಲಿಗೆ ತೆರಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವುದು ‘ದೊಡ್ಡ ಸಾಧನೆ’ ಎಂದು ಹೇಳಿದರು. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ ಎಂದು ಅವರು ಹೇಳಿದರು. ಭಾನುವಾರ ನಡೆಯಲಿರುವ ನರೇಂದ್ರ ಮೋದಿ ಮತ್ತು ಅವರ ಹೊಸ ಕ್ಯಾಬಿನೆಟ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಜನಿಕಾಂತ್ ಭಾಗವಹಿಸಲಿದ್ದಾರೆ. ಚೆನ್ನೈನಿಂದ…

Read More

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರಾಸೆ – ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಚರ್ಚೆ

ಬೆಂಗಳೂರು : ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕೆಂಬ ಚರ್ಚೆ ಜೋರಾಗಿಯೇ ನಡೆದಿದೆ. ಆಡಳಿತ ಪಕ್ಷದ ಶಾಸಕರು, ಮುಖಂಡರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಟೀಕಿಸಿದ ಬಿಜೆಪಿ ಪರವಾಗಿ ಜನ ಮತ ಹಾಕಿದ್ದಾರೆ. ಹೀಗಾಗಿ, ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ…

Read More