ಹಿಂದೂ-ಮುಸ್ಲೀಂ ನಡುವಿನ ಮದುವೆ ಕಾನೂನಿನಡಿ ಮಾನ್ಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಅಂತರ್ ಧರ್ಮೀಯ ವಿವಾಹದಲ್ಲಿ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ಬಗ್ಗೆ ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಅಚ್ಚರಿಯ ತೀರ್ಪು ನೀಡಿದೆ. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವು ಮಾನ್ಯವಲ್ಲ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ. ವಿಶೇಷ ವಿವಾಹ ಕಾಯ್ದೆ, 1954 ರ ಅಡಿಯಲ್ಲಿ ಅಂತರ್ಧರ್ಮೀಯ ವಿವಾಹಗಳನ್ನು ನೋಂದಾಯಿಸಲು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ,…

