
ಮಂಗಳೂರು :‘ಮನೆ ಮನೆಗೆ ಪೊಲೀಸ್’ ಯೋಜನೆ ಆರಂಭ
ಮಂಗಳೂರು : ರಾಜ್ಯ ಸರಕಾರ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ‘ಮನೆ ಮನೆಗೆ ಪೊಲೀಸ್’ ಎಂಬ ಯೋಜನೆಯನ್ನು ಆರಂಭಿಸಿದೆ. ಆದರೆ ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ಮತ್ತು ಪ್ರಚಾರದ ಕೊರತೆಯಿಂದಾಗಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಯಾಗಿದೆ. ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ವಿಶ್ವಾಸ ತುಂಬುವುದು, ಸುರಕ್ಷತೆಯ ವಾತಾವರಣ ಸೃಷ್ಟಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆದರೆ ಬಹುತೇಕ ಮಂದಿಗೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ ಹಾಗಾಗಿ ದಿಢೀರ್ ಮನೆಗೆ ಆಗಮಿಸಿ ಪ್ರಶ್ನಿಸುವ ಪೊಲೀಸರಿಗೆ…