ಟಿಪ್ಪರ್ ಲಾರಿ ಚಾಲಕರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ಹಾಕಿದ ಪೊಲೀಸರು
ಕಾರವಾರ: ಹೆಲ್ಮೆಟ್ ಧರಿಸಿಲ್ಲವೆಂದು ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ವಿನುತಾ ವಿನೋದ್ ನಾಯ್ಕ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿಗೆ ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಟಿಪ್ಪರ್ ಲಾರಿಯನ್ನು ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು…

