ವಿಧಾನ ಪರಿಷತ್ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್, ಸಿ.ಟಿ.ರವಿ ಹೆಸರು
ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 44 ಆಕಾಂಕ್ಷಿಗಳಿದ್ದು ಕೋರ್ ಕಮಿಟಿ 12 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ. ಇದರಲ್ಲಿ ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರೂ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಜಾತಿವಾರು ಹಾಗೂ ಪ್ರದೇಶವಾರು ಆಧರಿಸಿ 12 ಮಂದಿಯ ಅಂತಿಮ ಪಟ್ಟಿ ತಯಾರು ಮಾಡಲಾಗಿದ್ದು ಈ ಪೈಕಿ ಮೂವರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ. ರಾಜ್ಯ…

