ಡಿವೈಎಸ್‌ಪಿ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ದೋಚಿದ ಆನ್‌ಲೈನ್ ಕಳ್ಳರು..!
ಹಾಸನ: ಜನಸಾಮಾನ್ಯರು ಆನ್‌ಲೈನ್ ವಂಚಕರ ಬಲೆಗೆ ಬಿದ್ದು ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಂಡು ಪೊಲೀಸರ ಮೊರೆ ಹೋಗುವುದನ್ನು ದಿನನಿತ್ಯ ಕೇಳುತ್ತೇವೆ. ಆದರೆ ಇಲ್ಲಿ ಖದೀಮರು ಡಿವೈಎಸ್‌ಪಿ ದರ್ಜೆಯ ಅಧಿಕಾರಿಯ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಎಗರಿಸಿದ್ದಾರೆ! ಹೌದು, ಹಾಸನ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಬ್ಯಾಂಕ್ ಖಾತೆಗಳಿಂದ ಅಪರಿಚಿತ ಖದೀಮರು ತಮ್ಮ ಬ್ಯಾಂಕ್ ಖಾತೆಗಳಿಗೆ 15,98,761 ರೂ. ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾರೆ. ಈ ಸಂಬಂಧ ಡಿವೈಎಸ್ಪಿ ಪಿ.ಕೆ.ಮುರಳೀಧರ್ ಅವರು ನಗರದ ಸಿಇಎನ್…

