admin

ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ : 35 ಯುವತಿಯರು ಸೇರಿ 115 ಜನರು ವಶಕ್ಕೆ.!

ಬೆಂಗಳೂರಿನಲ್ಲಿ ಪೊಲೀಸರು ರೇವ್ ಪಾರ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್…

Read More

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಲ.ಅನಿಲ್ ದಾಸ್ ಆಯ್ಕೆ-ಇವರ ಸಮಾಜ ಸೇವೆಗೆ ಸಂದ ಗೌರವ

ಮಂಗಳೂರು: ಲ.ಅನಿಲ್ ದಾಸ್ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2025 ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಸಮಾಜ ಸೇವೆ, ಶೈಕ್ಷಣಿಕ, ಧಾರ್ಮಿಕ ಸಾಮಾಜಿಕ ಸೇವೆಯಗಳಲ್ಲಿ ಮುಂಚೂಣಿಯಲ್ಲಿರುವ ಲ.ಅನಿಲ್ ದಾಸ್ ರವರು ದಾಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವಾರು ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸಿ, ವಯಸ್ಕರ ಸೇವಾ ಕಾರ್ಯಗಳಲ್ಲಿ ಕರ್ನಾಟಕದಲ್ಲೆ ಮೊದಲ ಸ್ಥಾನ ಪಡೆದಿದೆ.ನಾಳೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇವರ ಸಾಧನೆಗಳು ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಎಂಬ ನರ್ಸಿಂಗ್…

Read More

ಮಂಗಳೂರು: ಶರಣ್ ಪಂಪ್‌ವೆಲ್ ಬಂಧನ ಕುರಿತು ಪೊಲೀಸರ ನಡೆಗೆ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು: ಆರ್‌ಎಸ್ಎಸ್‌(RSS) ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಇಂದು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಪಂಪ್‌ವೆಲ್‌ಗೆ ಯಾವುದೇ ನೋಟೀಸ್‌ ನೀಡದೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದು, ಪೊಲೀಸ್‌ ಸ್ಟೇಷನ್‌ ಮುಂದೆ ಜಮಾಯಿಸಿದ್ದರು. ಆದರೆ ಪೊಲೀಸರು ಅವರನ್ನು ಒಳಗಡೆ ಹೋಗಲು ಬಿಟ್ಟಿರಲಿಲ್ಲ. ಮಾಹಿತಿ ಪಡೆದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಕದ್ರಿ ಠಾಣೆಗೆ ಆಗಮಿಸಿದ್ದರು. ಕದ್ರಿ ಪೊಲೀಸರು…

Read More

 ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆದ ಕದ್ರಿ ಪೊಲೀಸರು..!

ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ…

Read More

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು PFI : NIA ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಮಂಗಳೂರು: ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ 1ರಂದು ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶಗಳನ್ನು ಎನ್ಐಎ ಉಲ್ಲೇಖಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸದಸ್ಯರ ಕೈವಾಡ ಸ್ಪಷ್ಟವಾಗಿದೆ ಎಂದು ತಿಳಿಸಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್…

Read More

ಬಂಟ್ವಾಳ: ಆಂಬ್ಯುಲೆನ್ಸ್‌ ಗೆ ದಾರಿ ಬಿಟ್ಟು ಕೊಡದೇ ಹುಚ್ಚಾಟ..! ಪುತ್ತೂರು ಬೆಟ್ಟಂಪಾಡಿಯ ಮನ್ಸೂರ್ ಬಂಟ್ವಾಳ ಪೊಲೀಸರ ವಶಕ್ಕೆ

ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಗಂಟೆಗೆ ಬಿ.ಸಿ.ರೋಡ್ ಎನ್.ಜಿ. ಸರ್ಕಲ್…

Read More

ಸೌಜನ್ಯ ಪರ ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುವಂತಿಲ್ಲ- SIT ಗೆ ಹೈಕೋರ್ಟ್‌ ಸೂಚನೆ

ತಮ್ಮ ವಿರುದ್ಧ ಎಸ್‌ಐಟಿ ದಾಖಲಿಸಿದ್ದ ಪ್ರಕರಣದ ರದ್ದು ಕೋರಿ ಸೌಜನ್ಯ ಪರ ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲಗೌಡ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ನಾಲ್ವರ ಮೇಲೆ ಎಸ್‌ಐಟಿ ದೌರ್ಜನ್ಯ ಮಾಡಬಾರದು ಎಂದು ಸೂಚಿಸಿ, ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಇದೇ ಪ್ರಕರಣದಲ್ಲಿ ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ವರಿಗೂ ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ಅಂದೇ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ…

Read More

ನ.28ಕ್ಕೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ತಮ್ಮ 4 ನೇ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ಮುಂದಿನ ನ.28ರಂದು ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನ.28ರಂದು ನಡೆಯುವ ಲಕ್ಷ ಕಂಠ ಗೀತಗಾಯನ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮೂಲಗಳು ತಿಳಿಸಿವೆ. ಪ್ರಧಾನಿ ಅವರು ಶ್ರೀಕೃಷ್ಣ ಮಠಕ್ಕೆ…

Read More

ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯ

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದ್ದು, ಅಪಘಾತದಲ್ಲಿ 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ…

Read More

20 ಅಡಿ ಆಳದಲ್ಲಿ ಬಿದ್ದ 50 ಲಕ್ಷ ರೂಪಾಯಿ ಚಿನ್ನಾಭರಣ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

ಮಲ್ಪೆ: ಸುಮಾರು 20 ಅಡಿ ಆಳದಲ್ಲಿ ಕೆರೆ ನೀರಿಗೆ ಬಿದ್ದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಇರುವ ಚೀಲವನ್ನು ಮೇಲಕ್ಕೆತ್ತಿದ ಈಶ್ವ‌ರ್ ಮಲ್ಪೆ ಅವರ ತಂಡ ವಾರಸುದಾರರಿಗೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಘಟನೆಯ ಹಿನ್ನೆಲೆ ಚಿಕ್ಕಮಗಳೂರು ಮಾಗಡಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಬಿದ್ದಿತ್ತು. ಅದರಲ್ಲಿದ್ದ ಜುವೆಲರಿ ಅಂಗಡಿಯ ಮಾಲಕ ಈಜಿ ದಡ ಸೇರಿದ್ದರು. ಕಾರನ್ನು ಕ್ರೇನ್ ತರಿಸಿ ಮೇಲಕ್ಕೆತ್ತಲಾಯಿತು. ಆದರೆ ಕಾರಿನಲ್ಲಿದ್ದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ…

Read More