admin

ಪುತ್ತೂರು: ರಿಕ್ಷಾ ತಡೆದು ಚಾಲಕನಿಗೆ ಹಲ್ಲೆ ಪ್ರಕರಣ-ಇಬ್ಬರು ಪೊಲೀಸರ ಅಮಾನತು

ಪುತ್ತೂರು: ಅ.17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ,  ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿದ್ದು ಈ ಕುರಿತು ಬಶೀರ್ ಅವರನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು  ಅವಾಚ್ಯ ಶಬ್ದಗಳಿಂದ…

Read More

ಲಾಡ್ಜ್​​ನಲ್ಲಿ ಪುತ್ತೂರಿನ ಯುವಕ ಶವವಾಗಿ ಪತ್ತೆ..!! ಜೊತೆಗಿದ್ದ ಯುವತಿ ಪರಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಮದು ತಿಳಿದಿಬಂದಿದೆ. ಲಾಡ್ಜ್‌ ಒಂದರಲ್ಲಿ 20 ವರ್ಷದ ತಕ್ಷಿತ್‌ ಎನ್ನುವ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್‌ನಲ್ಲಿ ತಕ್ಷಿತ್‌ ಶವ ಶುಕ್ರವಾರ ರಾತ್ರಿ ಪತ್ತೆಯಾಗಿದೆ. 8 ದಿನದ ಹಿಂದೆ ತಕ್ಷಿತ್‌ ತನ್ನ ಪ್ರೇಯಸಿಯ ಜೊತೆ ಬೆಂಗಳೂರಿಗೆ ಬಂದಿದ್ದ ಎಂದು ವರದಿಯಾಗಿದೆ. 8 ದಿನಗಳ ಕಾಲ ಲಾಡ್ಜ್‌ನಲ್ಲಿ ಲವ್ವರ್ಸ್‌ಗಳು ವಾಸವಿದ್ದರು. 9ನೇ ದಿನ ನಿಗೂಢವಾಗಿ…

Read More

ಕಾಸರಗೋಡು: 116 ಕಿಲೋ ಗಾಂಜಾ ವಶ- ಓರ್ವ ಆರೋಪಿ ಅರೆಸ್ಟ್

ಕಾಸರಗೋಡು: ವರ್ಕಾಡಿ ಸುಳ್ಯಮೆ ಯಿಂದ ಸುಮಾರು 116 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೈಸೂರು ಜಯಪುರ ಹೋಬಳಿಯ ಸಿದ್ದೇಗೌಡ (25) ಎಂದು ಗುರುತಿಸಲಾಗಿದೆ. ಸುಳ್ಯಮೆಯ ಮನೆಯ ಶೆಡ್‌ವೊಂದರಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಅಕ್ಟೋಬರ್ 8 ರಂದು ರಾತ್ರಿ ವಶಪಡಿಸಿಕೊಂಡಿದ್ದರು. ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಮಿನಿ ಟೆಂಪೋವನ್ನು ವಶಕ್ಕೆ ತೆಗೆದುಕೊಂಡಿದ್ದರು ಪೊಲೀಸರು ನಡೆಸಿದ ತನಿಖೆಯಿಂದ ವಾಹನ ಚಾಲಕ ಸಿದ್ದೇಗೌಡನ ಮಾಹಿತಿ ಲಭಿಸಿತ್ತು. ತನಿಖೆಯನ್ನು ಮೈಸೂರಿಗೆ ವಿಸ್ತರಿಸಿದ್ದು, ಆರೋಪಿಯನ್ನು…

Read More

ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು : ಪಟಾಕಿ ಬಾಕ್ಸ್ಗನಳ…

Read More

ವಿಟ್ಲ: ಜೈಲಿನಲ್ಲಿ ಕಂಬಿ ಎಣಿಸಿದ ಪೆರುವಾಯಿ ಗ್ರಾಮ ಪಂ. ಅಧ್ಯಕ್ಷೆ ನಫೀಸರವರನ್ನು ತಕ್ಷಣ ವಜಾಗೊಳಿಸಿ- ಗ್ರಾಮಸ್ಥರ ಆಗ್ರಹ

ವಿಟ್ಲ: ಲಂಚದ ಬೇಡಿಕೆ ಇಟ್ಟು ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನವಾಗಿ ಇದೀಗ ಬಿಡುಗಡೆಗೊಂಡು ಅಧ್ಯಕ್ಷ ಸ್ಥಾನದಲ್ಲಿ ಮತ್ತೆ ಮುಂದುವರಿದಿರುವ ಒಂದನೇ ಆರೋಪಿ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ನಫೀಸರವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪತ್ರಿಕಾಗೋಷ್ಠಿ ನಡೆಯಿತು. ’ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರು ಮಾತನಾಡಿ ’ಸಣ್ಣ ನೀರಾವರಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದಿಂದ ಪೆರುವಾಯಿ ಮತ್ತು ಮಾಣಿಲ ಗ್ರಾಮದ ಕೃಷಿಕ ವರ್ಗದ 30 ಕುಟುಂಬಗಳು ಉಚಿತ ಯೋಜನೆಗೆ ಆಯ್ಕೆಯಾಗಿದೆ. ಪೆರುವಾಯಿ ಗ್ರಾಮ ಪಂಚಾಯತ್…

Read More

ಉಡುಪಿ: ಪ್ರೇಮಿಗಳಿಬ್ಬರು ನೇಣು ಬಿಗಿದು ಆ*ತ್ಮ*ಹ*ತ್ಯೆ..!!

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ…

Read More

ಅ.20ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – ಹವಾಮಾನ ಇಲಾಖೆಯಿಂದ ಮೀನುಗಾರರಿಗೆ ಮುನ್ನೆಚ್ಚರಿಕೆ|

ಮಂಗಳೂರು: ಮುಂಗಾರು ಮಳೆ ಮುಗಿದಿದ್ದು, ಇದೀಗ ಹಿಂಗಾರು ಮಳೆ ಕೇರಳಕ್ಕೆ ಎಂಟ್ರಿ ಕೊಟ್ಟಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಅಕ್ಟೋಬರ್ 20 ರವರೆಗೆ ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ಅಕ್ಟೋಬರ್ 20 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರದಲ್ಲಿ 35 ರಿಂದ 45…

Read More

ಮಂಗಳೂರು: ಭಾರತ – ಪಾಕ್ ಯುದ್ಧದಲ್ಲಿ ಹೆಲಿಕಾಫ್ಟರ್‌ ನಿಂದ ಬಿದ್ದು ಜೀವನ್ಮರಣ ಹೋರಾಟದಲ್ಲಿ ಬದುಕಿ ಬಂದಿದ್ದ ವೀರ ಗರೊಡಿ ತಿಮ್ಮಪ್ಪ ಆಳ್ವ ನಿಧನ

ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಕುಟುಂಬಸ್ಥರು ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾನ ಮಾಡಲಾಗುವುದು ಕುಟುಂಬಸ್ಥರು ತಿಳಿಸಿದ್ದಾರೆ.ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕ್ರಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ…

Read More

ಉಡುಪಿ: ಅಕ್ರಮ ಪಟಾಕಿ ಸಂಗ್ರಹ: ಪೊಲೀಸರ ದಾಳಿ; ಪಟಾಕಿ ವಶಕ್ಕೆ

ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ಇಂದು ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಾವಳಿಯ ಹಿನ್ನೆಲೆ­ಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಪಟಾಕಿಗಳನ್ನು…

Read More

ಕಾಸರಗೋಡು : ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ. ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ. ಕಳೆದ 45 ದಿನಗಳಲ್ಲಿ…

Read More