ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟ- ಮನೆ ಗೋಡೆ, ವಸ್ತುಗಳೆಲ್ಲಾ ಛಿದ್ರ
ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಕಾರ್ಕಳದ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಪೀಠೋಪಕರಣ, ವಾಷಿಂಗ್ ಮಷೀನ್, ಪಾತ್ರೆಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಂಡಿವೆ….

