ಉಡುಪಿ : ಆನ್‌ಲೈನ್ ಟ್ರೇಡಿಂಗ್ ವಂಚನೆ- ಆರು ಮಂದಿ ಬಂಧನ
ಉಡುಪಿ: ಎರಡು ಪ್ರತ್ಯೇಕ ಆನ್‌ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ,…

