admin

ಕೊಣಾಜೆ: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ದಾಳಿ ಇಬ್ಬರ ಬಂಧನ

ದೇರಳಕಟ್ಟೆ: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ರವಿವಾರ ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ದಾಳಿ ಸಂದರ್ಭ…

Read More

ಮಂಗಳೂರು: ಆಟೋ ಚಾಲಕನಿಗೆ ಇರಿತ..!

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿರುವುದಾಗಿ ಆರೋಪಿಸಿ ಆಟೋ ಚಾಲಕನಿಗೆ ಅಪರಿಚಿತರು ಇರಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ಮೂತ್ರ ವಿಸರ್ಜನೆ ಗೆಂದು ಅಟೋ ನಿಲ್ಲಿಸಿದ್ದ ವೇಳೆ ವ್ಯಕ್ತಿಯೊಬ್ಬ ಬಂದು ಪೊಲೀಸರಿಗೆ ಯಾಕೆ ಮಾಹಿತಿ ನೀಡುತ್ತಿದ್ದಿ ಎಂದು ಪ್ರಶ್ನಿಸಿದ್ದ. ಈ ವೇಳೆ ಆಟೊ ಚಾಲಕ ಆತನಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ. ಬಳಿಕ ಇಬ್ಬರ ನಡುವೆ ಘರ್ಷಣೆ ಉಂಟಾಗಿದೆ. ಚಾಲಕನಿಗೆ ಇರಿದ ಗಾಯಗಳಾಗಿದ್ದು, ಯಾವ ವಸ್ತುವಿನಿಂದ ಇರಿದಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Read More

ಮಂಗಳೂರು: ತಲಪಾಡಿ ಬಸ್ ಅಪಘಾತ- ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಬಂಧನ

ಮಂಗಳೂರು: ಆಗಸ್ಟ್ 28ರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿ (47) ಅವರನ್ನು ಬಂಧಿಸಿದ್ದಾರೆ. ಬಸ್ ಚಾಲಕನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಬಂಧಿತನಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ. ತಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ, ರಿಕ್ಷಾ ಚಾಲಕ ಸೇರಿ ಆರು ಮಂದಿ ಸಾವನ್ನಪ್ಪಿದ್ದರು. ಅಪಘಾತದ…

Read More

ಕಡಬ: ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್‌- ಪ್ರಕರಣ ದಾಖಲು

ಕಡಬ: ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.30ರಂದು ಕೆ, ಅಬ್ದುಲ್‌ ಹಕೀಂ ಕಡಬ ತಾಲೂಕು ಎಂಬವರು ಅವರ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಖಾತೆಯನ್ನು ಪರಿಶೀಲಿಸುತ್ತಿರುವಾಗ Ibrahim Mitthodi ExMuslim ಎಂಬ Facebook ಖಾತೆಯಲ್ಲಿ ಧರ್ಮ-ಧರ್ಮಗಳ ಮದ್ಯೆ ದ್ವೇಷ ಉಂಟು ಮಾಡುವಂತೆ ಮಾಡಿ ಸಮಾಜದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿರುವ ಪ್ರಚೋದನಾಕಾರಿ ಪೋಸ್ಟ್‌ ಮಾಡಿರುತ್ತಾರೆ. ಈ ಬಗ್ಗೆ ನೀಡಿದ…

Read More

ಸತತ 216 ಗಂಟೆಗಳ ಭರತನಾಟ್ಯ ಪ್ರದರ್ಶನ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ದೀಕ್ಷಾ

ಉಡುಪಿ : ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ. ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ, ಈ ಪ್ರದರ್ಶನದ ಮೂಲಕ ದೀಕ್ಷಾ ಹಿಂದಿನ 170 ಗಂಟೆಗಳ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಮ್ಯಾರಥಾನ್ ಪ್ರದರ್ಶನವು ಆ. 21 ರಂದು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಯಿತು ಮತ್ತು ಒಂಬತ್ತು ದಿನಗಳ ಕಾಲ ಮುಂದುವರಿದು, ಇದೀಗ 216 ಗಂಟೆಗಳನ್ನು ಪೂರ್ಣಗೊಂಡಿದೆ.ಬ್ರಹ್ಮಾವರ ತಾಲ್ಲೂಕಿನ ಮುಂಕಿಜಡ್ಡು ಮೂಲದ ವಿದುಷಿ ದೀಕ್ಷಾ ವಿ. ಪೂಜಾರಿ ಅವರು ಭರತನಾಟ್ಯಂನಲ್ಲಿ ಉನ್ನತ ಸ್ಥಾನಗಳನ್ನು…

Read More

ಮಂಗಳೂರು: ಸುಗ್ಗಿ ಸೌಹಾರ್ದ ಸಹಕಾರಿ ನಿಯಮಿತ ಕಂಕನಾಡಿ ಇದರ 12 ನೇ ವಾರ್ಷಿಕ ಮಹಾಸಭೆ

ಮಂಗಳೂರು: ಸುಗ್ಗಿ ಸೌಹಾರ್ದ ಸಹಕಾರಿ ನಿಯಮಿತ ಕಂಕನಾಡಿ ಇದರ 12 ನೇ ವಾರ್ಷಿಕ ಮಹಾ ಸಭೆಯು ಕಂಕನಾಡಿ ಸಿಟಿ ಚರ್ಚ್ ಸಭಾಂಗಣ ಎಂಪೋರೀಯಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷ ತೆ ಯನ್ನು ಲಯನ್ ಅನಿಲ್ ದಾಸ್ ಸುಗ್ಗಿ ಸೌಹಾರ್ದ ಸಹಕಾರಿಯ ಅಧ್ಯಕ್ಷರು ವಹಿಸಿದ್ದರು. ಮುಖ್ಯ ಕಾರ್ಯನಿರ್ವ ನಿರ್ವಹಣಾಧಿಕಾರಿ ಶಿವ ಪ್ರಕಾಶ್. ಪ್ರಸಕ್ತ ವಾರ್ಷಿಕ ವರದಿಯನ್ನು ವಾಚಿಸಿದರು. ಶ್ರೀ ಕಿರಣ್ ಅಟ್ಟಲೂರ್ ( ಉಪಾಧ್ಯಕ್ಷರು) ನಿರ್ದೇಶಕರುಗಳಾದ ಶ್ರೀ ದೇವರಾಜ್, ಶ್ರೀ ಮಹೇಶ್ ಕುಮಾರ್, ಶ್ರೀ ಪ್ರಸಾದ ತೊಮಸ್,…

Read More

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : SITಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್.!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಿರೀಶ್ ಮಟ್ಟಣ್ಣನವರ್ ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ನೀಡಿದ್ದಾರೆ. ಗಿರೀಶ್ ಮಟ್ಟಣ್ಣನವರ್ ಅವರು ಇಂದು ಎಸ್ ಐಟಿಗೆ 500 ಪುಟಗಳ ದಾಖಲೆಗಳನ್ನು ನೀಡಿದ್ದು, ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ತನಿಖೆ ನಡೆಸಿ. ಕಳೆದ 35 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಆಗಿರುವ ಅಸಹಜ ಸಾವುಗಳ ವಿವರವಾದ ದಾಖಲೆ ನೀಡಿದ್ದಾರೆ. ಇನ್ನು ಇಂದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಹಲವು…

Read More

ನಾಳೆಯಿಂದ ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು- ಕಂದಾಯ ಇಲಾಖೆ ಆದೇಶ

ಕರ್ನಾಟಕ ಸರ್ಕಾರವು ಆಸ್ತಿ ನೋಂದಣಿ ಶುಲ್ಕವನ್ನು ದುಪ್ಪಟ್ಟು ಮಾಡಿದೆ. ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ನಾಳೆಯಿಂದ ಅಂದರೆ ಆಗಸ್ಟ್ 31ರಿಂದ ಪರಿಷ್ಕೃತ ಆಸ್ತಿ ನೋಂದಣಿ ಶುಲ್ಕ ಜಾರಿಗೆ ಬರಲಿದೆ. ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.1ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.6.6ರಷ್ಟು ಶುಲ್ಕ ಇತ್ತು. ಆದರೆ ಈಗ  ಏರಿಕೆಯಿಂದ ಒಟ್ಟು ಶೇ.7.6ರಷ್ಟು ಶುಲ್ಕ ಕಟ್ಟಬೇಕು. ಈ…

Read More

ದೂರುದಾರ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ ಮಹಜರಿಗೆ ಕರೆದೊಯ್ದಿದ್ದಾರೆ. ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿ ಬಂಧನ

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ದಿನಾಂಕ 29-08-2025 ಮೇರೆಗೆ ದೇರಳಕಟ್ಟೆ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ 53.29 ಗ್ರಾಂ, 2.33 ಗಾಂಜಾಹಾಗೂ 0.45 ಗ್ರಾಂ MDMA ಪಿಲ್ಸ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳ ಮೌಲ್ಯ ಸುಮಾರು ರೂ. 10.85 ಲಕ್ಷ ಆಗಿದ್ದು, ಡಿಜಿಟಲ್ ತೂಕ ಮಾಪನ ಯಂತ್ರ, ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ. 11.05 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧಿತನನ್ನು…

Read More