admin

ನೆಲ್ಯಾಡಿ: ಸ್ಕೂಟರ್-ಲಾರಿ ಡಿಕ್ಕಿ- ದಂಪತಿಗೆ ಗಂಭೀರ ಗಾಯ

ನೆಲ್ಯಾಡಿ: ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಆ.29ರಂದು ಮಧ್ಯಾಹ್ನ ನಡೆದಿದೆ. ಹಿರೇಬಂಡಾಡಿ ಗ್ರಾಮದ ವಳಕಡಮ ನಿವಾಸಿ ಬೊಮ್ಮಣ್ಣ ಗೌಡ(46ವ.)ಹಾಗೂ ಅವರ ಪತ್ನಿ ಕುಸುಮಾವತಿ(35ವ.)ಗಾಯಗೊಂಡವರಾಗಿದ್ದಾರೆ. ಇವರು ತಮ್ಮ ದ್ವಿಚಕ್ರ ವಾಹನದಲ್ಲಿ ವಳಕಡಮದಿಂದ ರಾಮಕುಂಜ-ಗೋಳಿತ್ತೊಟ್ಟು ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ಹೋಗುತ್ತಿದ್ದವರು ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಕ್ರಾಸ್ ಆಗುತ್ತಿದ್ದಂತೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಗೆ ಬುಲಾವ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಆ.29 ರಂದು ಎಸ್.ಐ.ಟಿ ಗೆ ಹಾಜರಾಗಲು ನೋಟಿಸ್ ನೀಡಿದ್ದರು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದ ವಿಚಾರಣೆ ಮುಗಿಸಿ ಎಸ್.ಐ.ಟಿ ವಿಚಾರಣೆಗೆ 12:25 ಕ್ಕೆ ಹಾಜರಾಗಿದ್ದಾರೆ

Read More

ಪುತ್ತೂರು: ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ದಾಳಿ- ತಹಶೀಲ್ದಾರ್ ಪರಾರಿ, ಕಚೇರಿ ಸಿಬ್ಬಂದಿ ವಶಕ್ಕೆ

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ. ಲೋಕಾಯುಕ್ತ ದಾಳಿಯ ವೇಳೆ ಪುತ್ತೂರು ತಹಶೀಲ್ದಾರ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು…

Read More

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ರೈಲ್ವೆ ಹಳಿ ಪಕ್ಕದ ಗುಡ್ಡಗಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆ ಕಳೆದ ಎರಡು ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ ಮನೆಯಲ್ಲಿ…

Read More

ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು..!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮತ್ತೆ ಎಸ್ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ. ಎಸ್ಐಟಿ ತನಿಖೆ ಆರಂಭಕ್ಕೂ ಮುನ್ನ ಚಿನ್ನಯ್ಯ ಯೂಟ್ಯೂಬ್ಗೆ ಸಂದರ್ಶನ ಕೊಡುವ ವೇಳೆ ತಾನು ಸೌಜನ್ಯ ಹೆಣವನ್ನು ಹೊತ್ತುಕೊಂಡು ಹೋಗಿದ್ದನ್ನು ನೋಡಿದ್ದಾಗಿ ಹೇಳಿದ್ದ. ಆ ವಿಚಾರವನ್ನು…

Read More

ಮಂಗಳೂರು: ತಲಪಾಡಿ ಟೋಲ್ ಗೇಟ್ ಬಳಿ KSRTC ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ- 5 ಸಾವು

ಉಳ್ಳಾಲ: ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ತಲಪಾಡಿಯ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೆಸಿ ರೋಡ್ ನಿಂದ ತೆರಳುತ್ತಿದ್ದಂತ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ….

Read More

ಬಂಟ್ವಾಳ: ದನ ಕಳ್ಳತನ ಪ್ರಕರಣದ ಆರೋಪಿಯ ಬಂಧನ..!

ಬಂಟ್ವಾಳ: ಇರಾ ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ವರದಿಯಾದ ದನ ಕಳ್ಳತನ ಪ್ರಕರಣವನ್ನು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಆಜಾದ್ ನಗರದ ಆರೋಪಿ ಇರ್ಷಾದ್ ಎಂದು ಗುರುತಿಸಲಾಗಿದೆ. ಮಾರ್ಚ್ 23 ರಂದು ಸುಮಾರು 12,000 ರೂ. ಮೌಲ್ಯದ ಹಸು ಕಾಣೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ನಂತರ, ಪೊಲೀಸರು ಮಂಗಳೂರಿನ ಆಜಾದ್ ನಗರದ ಆರೋಪಿ ಇರ್ಷಾದ್ ನನ್ನು ಬಂಧಿಸಿದರು. ಆರೋಪಿಯು ದಕ್ಷಿಣ ಕನ್ನಡ ಮತ್ತು ಇತರ ಹಲವಾರು ಜಿಲ್ಲೆಗಳಲ್ಲಿ…

Read More

ಉಡುಪಿ: ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿತ

ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಘಾಟ್ ರಸ್ತೆಯ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರು ಹಾಗೂ ಪೊಲೀಸರು ಆಗಮಿಸಿ, ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಸಿದ್ದಾರೆ

Read More

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮೂಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ,…

Read More

ಕಾರ್ಕಳ ಮೂಲದ ಹೋಟೆಲ್ ಮಾಲೀಕ ಪುಣೆಯಲ್ಲಿ ಹತ್ಯೆ

ಕಾರ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ (ಆ.26) ರಾತ್ರಿ ನಡೆದ ಭೀಕರ ಘಟನೆಗೆ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಹತ್ಯೆ ಮಾಡಿದ ಘಟನೆ ನಡೆದಿದೆ. ಹೋಟೆಲ್ ಸಿಬ್ಬಂದಿಯೊರ್ವ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಮಾಲೀಕ ಗದರಿಸಿದ್ದು ಇದೇ ಕಾರಣಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ ಮಾಲೀಕನನ್ನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹತ್ಯೆಯಾದವರು ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹೋಟೆಲ್ ಸಿಬ್ಬಂದಿ ಕೆಲಸದ ಸಮಯದಲ್ಲಿ…

Read More