ಕಾರ್ಕಳ ಕೊಲೆ ಪ್ರಕರಣ: ಮಂಗಳೂರಿನ ನವೀನ್ ಪೂಜಾರಿ ಅರೆಸ್ಟ್
ಕಾರ್ಕಳ: ಕುಂಟಲ್ಪಾಡಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಬೆಳ್ತಂಗಡಿ ತಾಲೂಕು ನಾಡ ನಿವಾಸಿ ಪರೀಕ್ಷಿತ್(44) ಎಂದು ಗುರುತಿಸಲಾಗಿದ್ದು, ಮಹಿಳೆಯೊಬ್ಬರ ಗೆಳೆತನದ ವಿಚಾರವಾಗಿ ಈ ಕೊಲೆ ನಡೆದಿದೆ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.ಅಗಸ್ಟ್ 26 ರ ಮುಂಜಾನೆ ವೇಳೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ಈ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ.ಈ ಪ್ರಕರಣದ ಬಗ್ಗೆ ಮಾಹಿತಿ…

