ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಆರೋಪ: ಬೆಳ್ತಂಗಡಿ, ವೇಣೂರು ಠಾಣೆಯಲ್ಲಿ 6 ಪ್ರತ್ಯೇಕ ಪ್ರಕರಣಗಳು ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು, ಗಿರೀಶ್ ಮಟ್ಟಣ್ಣನವರ್ ಕುಡ್ಲ ರಾಂ ಪೇಜ್ ಗೆ ನೀಡಿದ ಸಂದರ್ಶನದಲ್ಲಿ ಜೈನರ ಬಗ್ಗೆ ತುಚ್ಚವಾಗಿ ಮಾತನಾಡಿರುವುದಾಗಿ ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ಬೆಳ್ತಂಗಡಿ ನಿವಾಸಿ ವಿಜಯ ಎಂಬವರ ದೂರಿನಂತೆ ವಿಕಾಸ್ ವಿಕ್ಕಿ ಹಿಂದು ಎಂಬ ಫೇಸ್…

