ಮೊಟ್ಟೆ ಕೊಟ್ಟಿದ್ದಕ್ಕೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು!
ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ತೊರೆದಿದ್ದಾರೆ. ಶಾಲೆಯ ಬಳಿ ದೇವಸ್ಥಾನ ಇರುವುದರಿಂದ ಮೊಟ್ಟೆ ವಿತರಣೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವು ಪೋಷಕರು ಮೊಟ್ಟೆ ವಿತರಣೆಗೆ ಆಗ್ರಹಿಸಿದ್ದರೂ, ಹೆಚ್ಚಿನವರು ತಮ್ಮ ಧಾರ್ಮಿಕ ಭಾವನೆಗಳನ್ನು ಉಲ್ಲೇಖಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಹೌದು ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಹೆಚ್ಚಿನ ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವೇ ಸಂಖ್ಯೆಯ ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು…

