ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಕಳ್ಳತನ- ಇಬ್ಬರು ಆರೋಪಿಗಳ ಬಂಧನ..!!
ಕಾರ್ಕಳ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಆರೀಫ್ @ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 2.18 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜ. 3ರಂದು ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮುಖ್ಯ ಬಾಗಿಲನ್ನು ಸಾಧನದ ಸಹಾಯದಿಂದ ಬಲವಂತವಾಗಿ ತೆರೆದು ಒಳಪ್ರವೇಶಿಸಿದ ದುಷ್ಕರ್ಮಿಗಳು, ಕಟ್ಟಡದ…

